AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿಗೆ ಶಾರ್ಟ್​ ಕಟ್, ಮೈನ್ ರೋಡ್ ಅವಾಯ್ಡ್​ ಮಾಡಲು ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು

ಮುಖ್ಯರಸ್ತೆಯಿಂದ ಹೋದರೆ ತುಂಬಾ ಸಮಯವಾಗುತ್ತದೆ ಎಂದು ಶಾರ್ಟ್​​ಕಟ್​​ನಲ್ಲಿ ಹೋಗಿ ಕಾರು(Car) ಬಾವಿಗೆ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತೆಗೆದುಕೊಂಡ ಒಂದೇ ಒಂದು ನಿರ್ಧಾರದಿಂದ 6 ಮಂದಿ ಮಕ್ಕಳು ಸೇರಿ ಕುಟುಂಬದ 9 ಮಂದಿ ಸಾವಿನ ಮನೆ ಕದ ತಟ್ಟಿದ್ದಾರೆ. ದರ್ಗುಡೆ ಕುಟುಂಬದ 9 ಮಂದಿ ದಿಂಡೋರಿಯಲ್ಲಿರುವ ತರಬೇತಿ ಕೇಂದ್ರವು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದರು.ಅವರಲ್ಲಿ ಸುನಿಲ್ ದರ್ಗುಡೆ (32), ಅವರ ಪತ್ನಿ ರೇಷ್ಮಾ (27), ಮಗಳು ಗುಣವಂತಿ (11), ಸುನಿಲ್ ಅವರ ಅತ್ತಿಗೆ ಆಶಾ (32), ಅವರ ಮಕ್ಕಳಾದ ಶ್ರೇಯಶ್ (11), ಶ್ರಾವಣಿ (11), ಶ್ರದ್ಧಾ (13) ಮತ್ತು ಸೃಷ್ಟಿ (14), ಮತ್ತು ಸಂಬಂಧಿಕರ ಮಗು ಸಮೃದ್ಧಿ (7) ಸೇರಿದ್ದಾರೆ.

ಸಾವಿಗೆ ಶಾರ್ಟ್​ ಕಟ್, ಮೈನ್ ರೋಡ್ ಅವಾಯ್ಡ್​ ಮಾಡಲು ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು
ಕಾರುImage Credit source: NDTV
ನಯನಾ ರಾಜೀವ್
|

Updated on: Apr 07, 2026 | 3:04 PM

Share

ಮುಂಬೈ, ಏಪ್ರಿಲ್ 07: ಮುಖ್ಯರಸ್ತೆಯಿಂದ ಹೋದರೆ ತುಂಬಾ ಸಮಯವಾಗುತ್ತದೆ ಎಂದು ಶಾರ್ಟ್​​ಕಟ್​​ನಲ್ಲಿ ಹೋಗಿ ಕಾರು(Car) ಬಾವಿಗೆ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತೆಗೆದುಕೊಂಡ ಒಂದೇ ಒಂದು ನಿರ್ಧಾರದಿಂದ 6 ಮಂದಿ ಮಕ್ಕಳು ಸೇರಿ ಕುಟುಂಬದ 9 ಮಂದಿ ಸಾವಿನ ಮನೆ ಕದ ತಟ್ಟಿದ್ದಾರೆ. ದರ್ಗುಡೆ ಕುಟುಂಬದ 9 ಮಂದಿ ದಿಂಡೋರಿಯಲ್ಲಿರುವ ತರಬೇತಿ ಕೇಂದ್ರವು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದರು.ಅವರಲ್ಲಿ ಸುನಿಲ್ ದರ್ಗುಡೆ (32), ಅವರ ಪತ್ನಿ ರೇಷ್ಮಾ (27), ಮಗಳು ಗುಣವಂತಿ (11), ಸುನಿಲ್ ಅವರ ಅತ್ತಿಗೆ ಆಶಾ (32), ಅವರ ಮಕ್ಕಳಾದ ಶ್ರೇಯಶ್ (11), ಶ್ರಾವಣಿ (11), ಶ್ರದ್ಧಾ (13) ಮತ್ತು ಸೃಷ್ಟಿ (14), ಮತ್ತು ಸಂಬಂಧಿಕರ ಮಗು ಸಮೃದ್ಧಿ (7) ಸೇರಿದ್ದಾರೆ.

ಕಾರ್ಯಕ್ರಮಕ್ಕೆ ಹಾಜರಾದ ನಂತರ, ಒಂಬತ್ತು ಮಂದಿ ಸುಮಾರು 10 ಕಿ.ಮೀ ದೂರದಲ್ಲಿರುವ ತಮ್ಮ ಹಳ್ಳಿಗೆ ತೆರಳಿದರು. ಸಂಜೆ ಸಮಯವಾಗಿತ್ತು, ಹಾಗಾಗಿ ಶಾರ್ಟ್​ ಕಟ್ ರಸ್ತೆ ಮೂಲಕ ಹೋಗೋಣವೆಂದು ಕಾರು ಓಡಿಸುತ್ತಿದ್ದ ಸುನಿಲ್ ನಿರ್ಧರಿಸಿದ್ದರು. ಆದರೆ ಅದು ಎಲ್ಲರ ಜೀವಕ್ಕೂ ಕುತ್ತು ತಂದಿತ್ತು.

ಕಾರು ರಸ್ತೆ ಬದಿಯ ಬಾವಿಯ ಗೋಡೆಗೆ ಡಿಕ್ಕಿ ಹೊಡೆದು ಅದರೊಳಗೆ ಉರುಳಿತು. ಆಳವಾದ ಬಾವಿಯಲ್ಲಿ 40 ಅಡಿ ಎತ್ತರದವರೆಗೆ ನೀರು ಇತ್ತು.ಶಬ್ದ ಕೇಳಿದ ಸ್ಥಳೀಯ ನಿವಾಸಿಗಳು ಬಾವಿಗೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರು. ನಿವಾಸಿಗಳು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಲು ಪ್ರಯತ್ನಿಸಿದರು, ಆದರೆ ಕತ್ತಲೆ ಮತ್ತು ಬಾವಿಯ ಆಳವು ಪ್ರಮುಖ ಸವಾಲಾಗಿತ್ತು.

ಮತ್ತಷ್ಟು ಓದಿ: Video: ಮೊಮ್ಮಗನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ

ಅಗ್ನಿಶಾಮಕ ದಳದವರು ವಾಹನವನ್ನು ಪತ್ತೆಹಚ್ಚಲು ದೀಪಗಳನ್ನು ಬಳಸಿದರು. ಈಜುಗಾರರು ಒಳಗೆ ಬಂದರು, ಮತ್ತು ಹಗ್ಗಗಳನ್ನು ಬಳಸಿ ಕಾರನ್ನು ಬಾವಿಯಿಂದ ಹೊರತೆಗೆಯಲಾಯಿತು. ಆದರೆ ಆಗಲೇ ತುಂಬಾ ತಡವಾಗಿತ್ತು. ಕಾರಿನಲ್ಲಿದ್ದವರೆಲ್ಲರೂ ಸತ್ತಿದ್ದರು. ವಾಹನದ ಹೊರಗೆ ಮಕ್ಕಳಲ್ಲಿ ಒಬ್ಬರ ಮೃತದೇಹ ಪತ್ತೆಯಾಗಿತ್ತು. ಬಾವಿಯ ಪಕ್ಕದ ರಸ್ತೆಯನ್ನು ಕೆಲವು ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು, ಆದರೆ ಬಾವಿಯನ್ನು ಮುಚ್ಚಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ. ಈ ಬಗ್ಗೆ ನಾಗರಿಕ ಅಧಿಕಾರಿಗಳು ಮತ್ತು ಬಾವಿಯ ಮಾಲೀಕರು ವಿವಾದದಲ್ಲಿ ಸಿಲುಕಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ