ಹೈದರಾಬಾದ್: ಶಾರ್ಟ್‌ಸರ್ಕ್ಯೂಟ್‌ನಿಂದ ಹೊತ್ತಿ ಉರಿದ 5 ಬಟ್ಟೆ ಅಂಗಡಿ, ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಅನುಮಾನ
ಕೋಠಿ ಪ್ರದೇಶದಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ ನಡೆದ ಈ ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ
ಹೈದರಾಬಾದ್: ಕೋಠಿ ಪ್ರದೇಶದಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ ನಡೆದ ಈ ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.
ಮೊದಲು ಒಂದು ಬಟ್ಟೆ ಅಂಗಡಿಗೆ ತಗುಲಿದ ಬೆಂಕಿ, ಉರಿಯುತ್ತಾ ಸಾಗಿ ಅಕ್ಕ ಪಕ್ಕದಲ್ಲಿದ್ದ 5 ಅಂಗಡಿಗಳಿಗೆ ವ್ಯಾಪಿಸಿದೆ. ಇದರಿಂದಾಗಿ ಭಾರಿ ಪ್ರಮಾಣದ ನಷ್ಟ ಉಂಟಾಗಿದೆ. ಅಂಗಡಿಗಳು ಇದ್ದ ಜಾಗದ ಬಗ್ಗೆ ವಿವಾದ ಉಂಟಾಗಿತ್ತು. ಇದರಿಂದಾಗಿ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ್ದಾರೆ ಎಂಬ ಅನುಮಾನದ ಮಾತುಗಳು ಕೇಳಿಬರುತ್ತಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸಿದ್ದಾರೆ. ಕೋಠಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ಕೈಗೆತ್ತಿಕೊಂಡಿದ್ದಾರೆ.




