ಸಮನ್ಸ್‌ಗೆ ಪ್ರತಿಕ್ರಿಯಿಸಲಿಲ್ಲ ಎಂದು ಬಂಧಿಸುವುದು ಸರಿಯಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಛಾಟಿ ಬೀಸಿದ ಸುಪ್ರಿಂ ಕೋರ್ಟ್‌

|

Updated on: Oct 04, 2023 | 11:46 AM

ಸಮನ್ಸ್​ಗೆ ಪ್ರತಿಕ್ರಿಯಿಸಲಿಲ್ಲ ಎನ್ನುವ ಕಾರಣಕ್ಕೆ ಬಂಧಿಸುವುದು ಸೂಕ್ತವಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್​ ಛಾಟಿ ಬೀಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002 ರ ಸೆಕ್ಷನ್ 50 ರ ಅಡಿಯಲ್ಲಿ ನೀಡಲಾದ ಸಮನ್ಸ್‌ಗೆ ಪ್ರತಿಕ್ರಿಯಿಸಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯನ್ನು ಬಂಧಿಸುವುದು ಸರಿಯಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್​ ತಿಳಿಸಿದೆ.

ಸಮನ್ಸ್‌ಗೆ ಪ್ರತಿಕ್ರಿಯಿಸಲಿಲ್ಲ ಎಂದು ಬಂಧಿಸುವುದು ಸರಿಯಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಛಾಟಿ ಬೀಸಿದ ಸುಪ್ರಿಂ ಕೋರ್ಟ್‌
ಸುಪ್ರೀಂಕೋರ್ಟ್​
Follow us on

ಸಮನ್ಸ್​ಗೆ ಪ್ರತಿಕ್ರಿಯಿಸಲಿಲ್ಲ ಎನ್ನುವ ಕಾರಣಕ್ಕೆ ಬಂಧಿಸುವುದು ಸೂಕ್ತವಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್​ ಛಾಟಿ ಬೀಸಿದೆ. 2002 ರ  ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಸೆಕ್ಷನ್ 50 ರ ಅಡಿಯಲ್ಲಿ ನೀಡಲಾದ ಸಮನ್ಸ್‌ಗೆ ಪ್ರತಿಕ್ರಿಯಿಸಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯನ್ನು ಬಂಧಿಸುವುದು ಸರಿಯಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್​ ತಿಳಿಸಿದೆ.

2002ರ ಕಾಯಿದೆಯ ಸೆಕ್ಷನ್ 50 ರ ಅಡಿಯಲ್ಲಿ ನೀಡಲಾದ ಸಮನ್ಸ್‌ಗೆ ಸಾಕ್ಷಿಯ ಅಸಹಕಾರ ಎಂಬ ಕಾರಣವು ಸೆಕ್ಷನ್ 19 ರ ಅಡಿಯಲ್ಲಿ ಬಂಧಿಸಲು ಸಾಕಾಗುವುದಿಲ್ಲ ಎಂದು ಹೇಳಿದೆ.

ರಿಯಲ್ ಎಸ್ಟೇಟ್ ಗ್ರೂಪ್ ಎಂ3ಎಂ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಂಕಜ್ ಬನ್ಸಾಲ್ ಮತ್ತು ಬಸಂತ್ ಬನ್ಸಾಲ್ ಅವರ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸುವ ಸಂದರ್ಭದಲ್ಲಿ ನ್ಯಾಯಾಲಯವು ಈ ರೀತಿ ಹೇಳಿದೆ. ಇಡಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಆರೋಪಿಗಳು ವಿಫಲರಾಗಿದ್ದಾರೆ ಎನ್ನುವ ಮಾತ್ರಕ್ಕೆ ಅವರನ್ನು ಬಂಧಿಸುವಹಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಮತ್ತಷ್ಟು ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿಯ ಸಂಸದ ಸಂಜಯ್ ಸಿಂಗ್ ಮನೆ ಮೇಲೆ ಇಡಿ ದಾಳಿ

ಏಕೆಂದರೆ ಸೆಕ್ಷನ್ 19 ರ ಆದೇಶದ ಪ್ರಕಾರ, ಯಾವುದೇ ಪಿಎಂಎಲ್‌ಎ ಅಡಿಯಲ್ಲಿ ವ್ಯಕ್ತಿಯು ಅಪರಾಧಿ ಎಂದು ನಂಬಲು ಅಧಿಕಾರಿಗೆ ಸರಿಯಾದ ಸಾಕ್ಷ್ಯ ಅಥವಾ ಕಾರಣವಿದ್ದರೆ ಮಾತ್ರ ಬಂಧಿಸಬಹುದು ಎಂದು ನ್ಯಾಯಮೂರ್ತಿಗಳಾದ ಎಎಸ್​ ಬೋಪಣ್ಣ ಹಾಗೂ ಸಂಜಯ್​ ಕುಮಾರ್​ ಅವರನ್ನು ಒಳಗೊಂಡ ಪೀಠ ಹೇಳಿದೆ.

ಕಸ್ಟಡಿ ವಿಚಾರಣೆಯು ತಪ್ಪೊಪ್ಪಿಗೆ ಉದ್ದೇಶಕ್ಕಾಗಿ ಅಲ್ಲ ಎಂದು ನ್ಯಾಯಾಲಯ ಹೇಳಿದೆ. ಒಬ್ಬ ಆರೋಪಿ ತಪ್ಪೊಪ್ಪಿಗೆ ನೀಡದ ಕಾರಣ ಆತ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಹೇಳುವಂತಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ