ಮಹಾರಾಷ್ಟ್ರದಲ್ಲಿ ಇವಿಎಂ ಮಂದಿರ ನಿರ್ಮಿಸಬೇಕು; ಶಿವಸೇನೆ ನಾಯಕ ಸಂಜಯ್ ರಾವತ್ ಲೇವಡಿ
ಇವಿಎಂ ಮಂದಿರವನ್ನು ನಿರ್ಮಿಸಬೇಕು ಎಂದು ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ಮೊದಲ ಕ್ಯಾಬಿನೆಟ್ ಸಭೆಗೂ ಮುಂಚಿತವಾಗಿ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರವನ್ನು ಅವರು ಟೀಕಿಸಿದ್ದಾರೆ. ಮುಖ್ಯಮಂತ್ರಿಯ ಮೆರವಣಿಗೆಯನ್ನು ನಾಗ್ಪುರದಲ್ಲಿ ನಡೆಸಲಾಗುತ್ತದೆ. ಸಿಎಂ ಮೆರವಣಿಗೆ ಹೊರಡುವ ಮುನ್ನ ಇವಿಎಂಗಳ ಮೆರವಣಿಗೆ ನಡೆಸಬೇಕು ಮತ್ತು ಮೊದಲ ಸಂಪುಟದಲ್ಲಿ ಆರ್‌ಎಸ್‌ಎಸ್ ಕೇಂದ್ರ ಕಚೇರಿ ಎದುರು ಇವಿಎಂ ಮಂದಿರ ನಿರ್ಮಿಸುವ ನಿರ್ಧಾರ ಕೈಗೊಳ್ಳಬೇಕು ಎಂದು ಸಂಜಯ್ ರಾವತ್ ಲೇವಡಿ ಮಾಡಿದ್ದಾರೆ.
ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವನ್ನು ಇಂದು ತರಾಟೆಗೆ ತೆಗೆದುಕೊಂಡ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಅವರು ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಮೆರವಣಿಗೆ ನಡೆಸಿ, ಇವಿಎಂ ಮಂದಿರ ನಿರ್ಮಿಸುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೇಂದ್ರ ಕಚೇರಿಯ ಮುಂಭಾಗದಲ್ಲಿ ಇವಿಎಂ ಮಂದಿರ ನಿರ್ಮಾಣದ ಕುರಿತು ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಘೋಷಿಸಬೇಕು ಎಂದು ಸಂಜಯ್ ರಾವತ್ ಹೇಳಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿಯ ಮೆರವಣಿಗೆಯನ್ನು ಅಲ್ಲಿಗೆ (ನಾಗ್ಪುರದಲ್ಲಿ) ನಡೆಸಲಾಗುತ್ತದೆ. ಸಿಎಂ ಮೆರವಣಿಗೆ ಹೊರಡುವ ಮುನ್ನ ಇವಿಎಂಗಳ ಮೆರವಣಿಗೆ ನಡೆಸಬೇಕು ಮತ್ತು ಮೊದಲ ಸಂಪುಟದಲ್ಲಿ ಆರ್‌ಎಸ್‌ಎಸ್ ಕೇಂದ್ರ ಕಚೇರಿ ಎದುರು ಇವಿಎಂ ಮಂದಿರ ನಿರ್ಮಿಸುವ ನಿರ್ಧಾರ ಕೈಗೊಳ್ಳಬೇಕು ಎಂದು ರಾವತ್ ಇಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಅಂಬೇಡ್ಕರ್ ಪ್ರತಿಮೆಯ ಸಂವಿಧಾನದ ಪ್ರತಿಕೃತಿಗೆ ಹಾನಿ; ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಅರಾಜಕತೆ ನಡೆಯುತ್ತಿದ್ದು, ರಾಜ್ಯದಲ್ಲಿ ಕೊಲೆಗಳು ಮತ್ತು ಅತ್ಯಾಚಾರಗಳು ನಡೆಯುತ್ತಿವೆ ಎಂದು ರಾವತ್ ಟೀಕಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾಗಿ 1 ತಿಂಗಳಾಗಿದೆ. ಆದರೆ, ಯಾರಿಗೆ ಯಾವ ಇಲಾಖೆ ಇದೆಯೋ ಗೊತ್ತಿಲ್ಲ. ಮಹಾರಾಷ್ಟ್ರದ ಹಳ್ಳಿಗಳಲ್ಲಿ ಪ್ರತಿದಿನ ಕೊಲೆ, ಅತ್ಯಾಚಾರಗಳು ನಡೆಯುತ್ತಿವೆ. ಇದಕ್ಕೆ ಉತ್ತರಿಸಲು ಸಿಎಂಗೆ ಸಾಧ್ಯವಾಗುತ್ತಿಲ್ಲ. ಮಹಾರಾಷ್ಟ್ರದಲ್ಲಿ ಅರಾಜಕತೆ ಹಬ್ಬಿದೆ. ಇವಿಎಂಗಳೊಂದಿಗೆ ಈ ಸರ್ಕಾರವನ್ನು ರಚಿಸಲಾಗಿದೆ. ಅವರಿಗೆ ಮೆದುಳಿಲ್ಲ, ಅವರ ಮೆದುಳಿನಲ್ಲಿ ಇವಿಎಂಗಳಿವೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಸೂತ್ರ, ಯಾರಿಗೆ ಯಾವ ಖಾತೆ ಸಿಗಬಹುದು?
2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ನಿರ್ಣಾಯಕ ವಿಜಯವನ್ನು ಕಂಡಿತು. ಮಹಾಯುತಿ 235 ಸ್ಥಾನಗಳೊಂದಿಗೆ ಪ್ರಚಂಡ ಗೆಲುವು ಸಾಧಿಸಿತು. 132 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿತು. ಬಿಜೆಪಿಯ ಮೈತ್ರಿ ಪಕ್ಷಗಳಾದ ಶಿವಸೇನೆ 57 ಮತ್ತು ಎನ್ಸಿಪಿ 41 ಸ್ಥಾನಗಳನ್ನು ಪಡೆದವು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ