ಮಹಿಳೆಯರು ಮುಟ್ಟಿನ ಅವಧಿಯಲ್ಲಿ ಕೊರೊನಾ ಲಸಿಕೆ ತೆಗೆದುಕೊಳ್ಳಬಾರದಾ?-ಇಲ್ಲಿದೆ ನೋಡಿ ಸತ್ಯಾಂಶ

ಮೇ 1ರಿಂದ ಲಸಿಕೆ ಪಡೆಯಲು ಏಪ್ರಿಲ್​ 28ರಿಂದ CoWIN ಆ್ಯಪ್ ಅಥವಾ ಆರೋಗ್ಯ ಸೇತು ಆ್ಯಪ್​​​​ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಮಹಿಳೆಯರು ಮುಟ್ಟಿನ ಅವಧಿಯಲ್ಲಿ ಕೊರೊನಾ ಲಸಿಕೆ ತೆಗೆದುಕೊಳ್ಳಬಾರದಾ?-ಇಲ್ಲಿದೆ ನೋಡಿ ಸತ್ಯಾಂಶ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on:Apr 24, 2021 | 7:39 PM

ದೆಹಲಿ: ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಕೊವಿಡ್​-19 ಲಸಿಕೆ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಸೂಚಿಸಿದ ಬೆನ್ನಲ್ಲೇ, ಸೋಷಿಯಲ್ ಮೀಡಿಯಾಗಳಲ್ಲಿ ವಿಚಾರವೊಂದು ಹರಿದಾಡುತ್ತಿದೆ. ಮಹಿಳೆಯರು ತಿಂಗಳ ಮುಟ್ಟಿಗೆ 5 ದಿನ ಇದೆ ಎನ್ನುವಾಗ.. ಅಥವಾ ಮುಟ್ಟಾಗಿ 5 ದಿನಗಳವರೆಗೆ ಕೊವಿಡ್​ ಲಸಿಕೆ ತೆಗೆದುಕೊಳ್ಳಬಾರದು ಎಂಬರ್ಥದ ಪೋಸ್ಟ್​ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಸಾಮಾನ್ಯವಾಗಿ ಮಹಿಳೆಯರಿಗೆ ತಮ್ಮ ಋತುಚಕ್ರಗೊತ್ತಿರುತ್ತದೆ. ಆ ದಿನಾಂಕ ಹತ್ತಿರ ಬಂದು ಇನ್ನೇನು ಐದು ದಿನ ಇರಬಹುದು ಎಂದಾಗ ಲಸಿಕೆ ತೆಗೆದುಕೊಳ್ಳಬಾರದು. ಹಾಗೇ ಮುಟ್ಟು ಮುಗಿದು ಐದು ದಿನಗಳವರೆಗೂ ಕೊವಿಡ್ ಲಸಿಕೆ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಮುಟ್ಟಿನ ದಿನಗಳು ಹತ್ತಿರಬಂದಾಗ.. ಮುಗಿದ 5-6ದಿನಗಳವರೆಗೆ ಮಹಿಳೆಯರಲ್ಲಿ ರೋಗನಿರೋಧರ ಶಕ್ತಿ ಕಡಿಮೆ ಇರುತ್ತದೆ. ಹೀಗಾಗಿ ಮುಟ್ಟಿನ ಸಂದರ್ಭದಲ್ಲಿ ಕೊವಿಡ್​-19 ಲಸಿಕೆ ಹಾಕಿಸಿಕೊಳ್ಳದೆ ಇರುವುದು ಉತ್ತಮ ಎಂದು ವ್ಯಾಪಕ ಚರ್ಚೆಯಾಗುತ್ತಿದೆ. ಇನ್ನು ಕೆಲವು ಮಹಿಳೆಯರಂತೂ, ತಮಗೆ ಲಸಿಕೆ ತೆಗೆದುಕೊಂಡ ಮೇಲೆ ಮುಟ್ಟಿನ ಸಮಯದಲ್ಲಿ ಏರುಪೇರಾಗಿದೆ, ಮುಗಿದು ಹೋಗಿದ್ದ ಮುಟ್ಟು ಮತ್ತೆ ಕಾಣಿಸಿಕೊಂಡಿದೆ ಎಂಬಿತ್ಯಾದಿ ಅನುಭವಗಳನ್ನೂ ಹಂಚಿಕೊಂಡಿದ್ದರು.

ಆದರೆ ನಿಜಕ್ಕೂ ಇದು ಸತ್ಯವಾ? ಮುಟ್ಟಿನ ಸಂದರ್ಭದಲ್ಲಿ ಲಸಿಕೆ ಹಾಕಿಸಿಕೊಳ್ಳಬಾರದಾ? ಈ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರಿಸಿದೆ. ಕೇಂದ್ರದ ಪ್ರೆಸ್​ ಇನ್​​ಫಾರ್ಮೇಶನ್​ ಬ್ಯೂರೋ ಈ ಬಗ್ಗೆ ವರದಿ ಪ್ರಕಟಿಸಿದ್ದು, ಹೀಗೆ ಮುಟ್ಟಾಗಲು 5ದಿನ ಇರುವಾಗ, ಮುಗಿದ 5 ದಿನಗಳವರೆಗೆ ಲಸಿಕೆ ತೆಗೆದುಕೊಳ್ಳಬಾರದು ಎಂಬ ವಿಚಾರದಲ್ಲಿ ಹುರುಳಿಲ್ಲ. ಮುಟ್ಟಿನ ವೇಳೆಯಲ್ಲಿ ಲಸಿಕೆ ತೆಗೆದುಕೊಳ್ಳುವುದರಿಂದ ಯಾವ ಅಪಾಯವೂ ಇಲ್ಲ. ಮೇ 1ರ ನಂತರ 18 ವರ್ಷ ಮೇಲ್ಪಟ್ಟ ಎಲ್ಲರೂ ಯಾವುದೇ ಅಂಜಿಕೆಯಿಲ್ಲದೆ ಲಸಿಕೆ ತೆಗೆದುಕೊಳ್ಳಬೇಕು ಎಂದು ಹೇಳಿದೆ. ಈ ಬಗ್ಗೆ ಡಾ. ಮುಂಜಾಲ್ ವಿ.ಕಪಾಡಿಯಾ ಎಂಬುವರು ಸಹ ಈ ಊಹಾಪೋಹಗಳನ್ನು ನಂಬಬೇಡಿ ಎಂದು ಮಹಿಳೆಯರಲ್ಲಿ ಮನವಿ ಮಾಡಿದ್ದಾರೆ. ಕೊವಿಡ್-19 ಲಸಿಕೆಗೂ, ಮಹಿಳೆಯರ ಮುಟ್ಟಿಗೂ ಯಾವುದೇ ಸಂಬಂಧವಿಲ್ಲ. ಧೈರ್ಯವಾಗಿ ಲಸಿಕೆ ಪಡೆಯಿರಿ ಎಂದಿದ್ದಾರೆ.

ಇನ್ನು ಮೇ 1ರಿಂದ ಲಸಿಕೆ ಪಡೆಯಲು ಏಪ್ರಿಲ್​ 28ರಿಂದ CoWIN ಆ್ಯಪ್ ಅಥವಾ ಆರೋಗ್ಯ ಸೇತು ಆ್ಯಪ್​​​​ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ದೇಶದಲ್ಲಿ ಜನವರಿ 16ರಿಂದ ಮೊದಲ ಹಂತದ ವ್ಯಾಕ್ಸಿನೇಶನ್ ಶುರುವಾಗಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್​ಗೆ ನೀಡಲಾಗಿದೆ. ಎರಡನೇ ಹಂತದಲ್ಲಿ 65 ವರ್ಷ ಮತ್ತು 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದೆ.

Published On - 6:50 pm, Sat, 24 April 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ