ಪಶ್ಚಿಮ ಬಂಗಾಳ; ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ಗುರುವಾರ ನಡೆದ ರ್ಯಾಲಿಯಲ್ಲಿ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಗೆ ಟಿಎಂಸಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಟಿಎಂಸಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಎರಡೂ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿವೆ.
ಘರ್ಷಣೆಯಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದು, ಈ ಪೈಕಿ ಮೂವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ತಾರಕೇಶ್ವರ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಏಳು ಮಂದಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ತಾರಕೇಶ್ವರಕ್ಕೆ ರಾಜಕೀಯ ಸಭೆಯನ್ನು ಉದ್ದೇಶಿಸಿ ಮಾತನಾಡಲು ಹೋದಾಗ ಟಿಎಂಸಿ ವ್ಯಕ್ತಿಗಳು ಕಪ್ಪು ಬಾವುಟವನ್ನು ತೋರಿಸಿದಾಗ ಈ ಘಟನೆ ಸಂಭವಿಸಿದೆ.
ಮೆರವಣಿಗೆಯಲ್ಲಿ ಕೆಲವೊಂದು ಗುಂಪಿನ ಜನರು ಕಪ್ಪು ಬಾವುಟವನ್ನು ಪ್ರದರ್ಶಿಸಿದ್ದರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ, ಇದರಿಂದಾಗಿ ಬಿಜೆಪಿ ಪಕ್ಷದ ಕಾರ್ಯಕರ್ತರು ಟಿಎಂಸಿ ಕಾರ್ಯಕರ್ತ ಜೊತೆಗೆ ಮಾತಿಗೆ ಇಳಿದ್ದಿರು, ಮಾತಿಗೆ ಮಾತು ಬೆಳೆದು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
The sea of people at Tarakeswar rally, organised by @BJP4Bengal Arambagh Organizational district, has made TMC jittery.
So they sent their underlings to pelt stones.
The 13th Sept "March to Nabanna" event, demanding to pack the prisons with (TMC) thieves would be a huge success. pic.twitter.com/wvDvpin23K— Suvendu Adhikari • শুভেন্দু অধিকারী (@SuvenduWB) September 8, 2022
ಭ್ರಷ್ಟಾಚಾರ ಆರೋಪ ಹೊತ್ತಿರುವ ಟಿಎಂಸಿ ಪಕ್ಷದ ವಿರುದ್ಧ ಈ ರ್ಯಾಲಿ ನಡೆದಿತ್ತು. ಈ ರ್ಯಾಲಿಗೆ ಟಿಎಂಸಿ ಕಾರ್ಯಕರ್ತರು ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಹೇಳಿದ್ದಾರೆ, ಹಿರಿಯ ನಾಯಕ ರಾಹುಲ್ ಸಿನ್ಹಾ ಅವರು ಭಾಗವಹಿಸಿದವರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಸುಭೇಂದು ಅಧಿಕಾರಿ, ಅವರು ನಮ್ಮ ಮೇಲೆ ಕಲ್ಲು ಹೊಡೆದಿದ್ದಾರೆ. ನಮ್ಮ ಮೇಲೆ ಐದು ಕಲ್ಲು ಹೊಡೆದಿದ್ದಾರೆ. ಸಾವಿರಕ್ಕೂ ಹೆಚ್ಚು ಗೂಂಡಾಗಳು ನಾವು ನಡೆಸಿದ ರ್ಯಾಲಿಯಲ್ಲಿ ಅಕ್ರಮವಾಗಿ ಬಂದಿದ್ದಾರೆ. ಈ ಘಟನೆಗೆ ಪೊಲೀಸರೇ ಹೊಣೆ.
Published On - 11:42 am, Fri, 9 September 22