Shraddha Murder Case: ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆ ಡಿ.22ಕ್ಕೆ ಮುಂದೂಡಿಕೆ
ಶ್ರದ್ಧಾ ವಾಕರ್( Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್(Aftab) ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 22ಕ್ಕೆ ಕೋರ್ಟ್ ಮುಂದೂಡಿದೆ.
ಶ್ರದ್ಧಾ ವಾಕರ್( Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್(Aftab) ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 22ಕ್ಕೆ ಕೋರ್ಟ್ ಮುಂದೂಡಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗಿತ್ತು. ಆರೋಪಿ ಅಫ್ತಾಬ್ ಪೂನಾವಾಲಾ ದೆಹಲಿಯ ಮೆಹ್ರೌಲಿ ಹಾಗೂ ಗುರುಗ್ರಾಮದ ಕಾಡುಗಳಲ್ಲಿ ಪೊಲೀಸರನ್ನು ಕರೆದೊಯ್ದಾಗ ದೊರೆತಿರುವ ಮೂಳೆಗಳು ಶ್ರದ್ಧಾ ವಾಕರ್‌ದು ಎಂಬುದು ದೃಢವಾಗಿದೆ.
ಅಫ್ತಾಬ್ ಪೂನಾವಾಲಾ ಶ್ರದ್ಧಾ ಕೊಲೆ ನಡೆಸಿ, 35 ತುಂಡುಗಳನ್ನಾಗಿ ಮಾಡಿ ಕಾಡುಗಳಲ್ಲಿ ಹೂತು ಹಾಕಿದ್ದ. ಈ ದೇಹದ ಭಾಗಗಳನ್ನು ತನಿಖೆಯ ವೇಳೆ ಪೊಲೀಸರು ಸಂಗ್ರಹಿಸಿದ್ದರು. ಅವುಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದಾಗ ಶ್ರದ್ಧಾ ತಂದೆ ವಿಕಾಸ್ ವಾಕರ್ ಅವರ ಡಿಎನ್‌ಎಗೆ ಹೋಲಿಕೆಯಾಗುತ್ತದೆ ಎಂಬುದು ಪರೀಕ್ಷಾ ವರದಿಯಲ್ಲಿ ತಿಳಿದುಬಂದಿದೆ.
ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಭೇಟಿಯಾದ ಅಫ್ತಾಬ್ ಹಾಗೂ ಶ್ರದ್ಧಾ ಇಬ್ಬರದ್ದೂ ಬೇರೆ ಧರ್ಮ ಎಂಬ ಕಾರಣಕ್ಕೆ ಇಬ್ಬರ ಕುಟುಂಬದವರೂ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಜೋಡಿ ಮುಂಬೈನಿಂದ ದೆಹಲಿಗೆ ಸ್ಥಳಾಂತರಗೊಂಡು ಮೆಹ್ರೌಲಿಯ ಅಪಾರ್ಟ್ಮೆಂಟ್ ಒಂದರಲ್ಲಿ ಒಟ್ಟಿಗೆ ವಾಸವಿದ್ದರು.
ಇತ್ತೀಚೆಗೆ ಶ್ರದ್ಧಾ ಹಲವು ತಿಂಗಳುಗಳಿಂದ ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ಆಕೆಯ ತಂದೆ ದೆಹಲಿಗೆ ತೆರಳಿ ಆಕೆಯ ಹುಡುಕಾಟ ನಡೆಸಿದ್ದರು. ಆದರೆ ಆಕೆಯ ಪತ್ತೆಯಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದರು. ಅಫ್ತಾಬ್ ಮೇ ತಿಂಗಳಿನಲ್ಲಿ ತನ್ನ ಗೆಳತಿ ಶ್ರದ್ಧಾ ವಾಕರ್ ಹತ್ಯೆ ನಡೆಸಿ, 35 ತುಂಡುಗಳನ್ನಾಗಿ ಮಾಡಿ ಫ್ರಿಜ್‌ನಲ್ಲಿ ಸಂಗ್ರಹಿಸಿಟ್ಟಿದ್ದ. ಬಳಿಕ ದೇಹದ ತುಂಡುಗಳನ್ನು ಸುಮಾರು 18 ದಿನಗಳ ಕಾಲ ಒಂದೊಂದಾಗಿಯೇ ದೆಹಲಿಯಾದ್ಯಂತ ಕಾಡುಗಳಲ್ಲಿ ಹೂತು ಹಾಕಿದ್ದ.
ಕಳೆದ ಒಂದು ತಿಂಗಳ ಹಿಂದೆ ಶ್ರದ್ಧಾ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಫ್ತಾಬ್‌ನನ್ನು ಬಂಧಿಸಿದ್ದರು. ಬಳಿಕ ತನಿಖೆಯ ವೇಳೆ ಶ್ರದ್ಧಾ ಹತ್ಯೆಯ ಹಿಂದಿನ ಸತ್ಯವನ್ನು ಒಂದೊಂದಾಗಿಯೇ ಪೊಲೀಸರು ಬಯಲಿಗೆಳೆದಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:48 pm, Sat, 17 December 22