Shraddha Walker: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ: ಅಫ್ತಾಬ್ ಪೂನಾವಾಲಾ ಮೇಲೆ ಕೊಲೆ, ಸಾಕ್ಷ್ಯ ನಾಶ ಆರೋಪ ಹೊರಿಸಿದ ದೆಹಲಿ ಕೋರ್ಟ್​​

ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಕೊಲೆ, ಸಾಕ್ಷ್ಯಗಳ ನಾಶ ಮಾಡಿದ್ದಾರೆ ಎಂದು ದೆಹಲಿ ಕೋರ್ಟ್​ ಆರೋಪ ಹೊರಿಸಿದೆ.

Shraddha Walker: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ: ಅಫ್ತಾಬ್ ಪೂನಾವಾಲಾ ಮೇಲೆ ಕೊಲೆ, ಸಾಕ್ಷ್ಯ ನಾಶ ಆರೋಪ ಹೊರಿಸಿದ ದೆಹಲಿ ಕೋರ್ಟ್​​
ಶ್ರದ್ಧಾ ವಾಕರ್ ಮತ್ತು ಅಫ್ತಾಬ್ ಪೂನಾವಾಲಾ
Follow us
ಅಕ್ಷಯ್​ ಪಲ್ಲಮಜಲು​​
|

Updated on:May 09, 2023 | 11:42 AM

ದೆಹಲಿ: ಶ್ರದ್ಧಾ ವಾಕರ್(Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 201 (ಸಾಕ್ಷ್ಯಗಳ ಕಣ್ಮರೆ) ಅಡಿಯಲ್ಲಿ ಕೊಲೆಗಾರ ಮತ್ತು ಸಾಕ್ಷ್ಯಗಳ ನಾಶ ಮಾಡಿದ್ದಾನೆ ಎಂದು ದೆಹಲಿಯ ಸಾಕೇತ್ ನ್ಯಾಯಾಲಯ ಆದೇಶ ನೀಡಿದೆ. ಈ ಬಗ್ಗೆ ಜೂನ್​​ 1ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.  ಇಂದು ಪೂನಾವಾಲಾ ಅವರನ್ನು ಸಾಕೇತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು, ಈ ಬಗ್ಗೆ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್ಜೆ) ಮನಿಶಾ ಖುರಾನಾ ಕಕ್ಕರ್ ಅವರು ಆದೇಶವನ್ನು ಪ್ರಕಟಿಸಿದರು.

ಮೇ 18, 2022ರಂದು ಶ್ರದ್ಧಾ ವಾಕರ್ ಅವರ ಕೊಲೆಯನ್ನು ಮಾಡಿದ್ದಾರೆ ಮತ್ತು ಸಾಕ್ಷ್ಯಗಳನ್ನು ನಾಶ ಮಾಡಿದಕ್ಕಾಗಿ ಅಪರಾಧವು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 302ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ಅವರು ಹೇಳಿದರು. ಮೇ 18 ರಿಂದ ಅಕ್ಟೋಬರ್ 18ರ ನಡುವೆ, ಈ ಪ್ರಕರಣ ನಡೆದಿದೆ. ಇದರ ಜತೆಗೆ ಸಾಕ್ಷ್ಯವನ್ನು ನಾಶ ಮಾಡುವ ಉದ್ದೇಶದಿಂದ ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ, ಚತ್ತರ್‌ಪುರ ಮತ್ತು ಇತರ ಸ್ಥಳಗಳಲ್ಲಿ ಆಕೆಯ ದೇಹದ ಭಾಗವನ್ನು ಎಸೆದಿರುವ ಬಗ್ಗೆ ದಾಖಲೆಗಳು ಉಲ್ಲೇಖಿಸಿದೆ ಎಂದು ಹೇಳಿದೆ.

ನ್ಯಾಯಾಲಯವು ಪೂನಾವಾಲಾ ಈ ಎಲ್ಲ ಆರೋಪವನ್ನು ಹೊರಿಸಿದೆ. ಈ ಬಗ್ಗೆ ಅವರು ಕೂಡ ಒಪ್ಪಿಕೊಳ್ಳಬೇಕು, ಇಲ್ಲವಾದರೆ ಇದನ್ನೂ ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಹೇಳಿದೆ. ಈ ಪ್ರಕರಣದ ತನಿಖೆ ಸಂಪೂರ್ಣಗೊಂಡಿದ್ದು, ಜೂನ್​ 1ರಂದು ಶ್ರದ್ಧಾ ವಾಕರ್ ಹತ್ಯೆ ಕುರಿತು ವಿಚಾರಣೆ ನಡೆಸಲಿದೆ. ಜನವರಿಯಲ್ಲಿ ದೆಹಲಿ ಪೊಲೀಸರು 75 ದಿನಗಳಲ್ಲಿ 6,636 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಆರೋಪಪಟ್ಟಿಯು 100 ಸಾಕ್ಷ್ಯಗಳ ಜೊತೆಗೆ ವಿಧಿವಿಜ್ಞಾನ ಮತ್ತು ಎಲೆಕ್ಟ್ರಾನಿಕ್ ಸಾಕ್ಷ್ಯಗಳ ಒಳಗೊಂಡಿರುತ್ತದೆ.

ಇದನ್ನೂ ಓದಿ: Shraddha Walker Murder Case: ದೆಹಲಿ ಪೊಲೀಸರಿಂದ 100 ಸಾಕ್ಷ್ಯಗಳಿರುವ 3,000 ಪುಟಗಳ ಕರಡು ಚಾರ್ಜ್​ಶೀಟ್ ಸಿದ್ಧ, ಶೀಘ್ರ ಸಲ್ಲಿಕೆ

ಪೂನಾವಾಲಾ ವಿರುದ್ಧ ಐಪಿಸಿಯ ಸೆಕ್ಷನ್ 302 (ಕೊಲೆ) ಮತ್ತು 201 (ಅಪರಾಧದ ಸಾಕ್ಷ್ಯಗಳು ಕಣ್ಮರೆಯಾಗಲು ಕಾರಣ) ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ. ಚಾರ್ಜ್‌ಶೀಟ್ ಪ್ರಕಾರ, ಪೂನಾವಾಲಾ ಕಳೆದ ವರ್ಷ ಮೇ 18 ರಂದು ತನ್ನ ಲೈವ್-ಇನ್ ಪಾಲುದಾರ ವಾಲ್ಕರ್‌ನನ್ನು ಕತ್ತು ಹಿಸುಕಿ ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದು, ಅದನ್ನು ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು ಮೂರು ವಾರಗಳ ಕಾಲ ಫ್ರಿಜ್‌ನಲ್ಲಿ ಇರಿಸಿದ್ದನು. ನಂತರ ಆ ದೇಹದ ಭಾಗಗಳನ್ನು ದೆಹಲಿಯ ಬೇರೆ ಬೇರೆ ಪ್ರದೇಶಗಳಲ್ಲಿ ಎಸೆಯಲಾಗಿದೆ ಎಂದು ತನಿಖಾ ವರದಿಯಲ್ಲಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:09 am, Tue, 9 May 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ