Shrikant Tyagi Case: ನೊಯ್ಡಾದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ; ಶ್ರೀಕಾಂತ್ ತ್ಯಾಗಿ ಜಾಮೀನು ಅರ್ಜಿ ವಜಾ

ನೊಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸರು ಶ್ರೀಕಾಂತ್ ತ್ಯಾಗಿ ಅವರನ್ನು ಮಂಗಳವಾರ ಬಂಧಿಸಿದ್ದರು. ಇದೀಗ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.

Shrikant Tyagi Case: ನೊಯ್ಡಾದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ; ಶ್ರೀಕಾಂತ್ ತ್ಯಾಗಿ ಜಾಮೀನು ಅರ್ಜಿ ವಜಾ
ಶ್ರೀಕಾಂತ್ ತ್ಯಾಗಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 11, 2022 | 1:31 PM

ನೊಯ್ಡಾ: ಉತ್ತರ ಪ್ರದೇಶದ ನೊಯ್ಡಾದಲ್ಲಿ (Noida) ಮಹಿಳೆಯ ಮೇಲೆ ಹಲ್ಲೆ ನಡೆಸಿ, ಅಸಭ್ಯವಾಗಿ ನಿಂದನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್‌ಪುರ ನ್ಯಾಯಾಲಯವು ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿ (Shrikant Tyagi) ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಶ್ರೀಕಾಂತ್ ತ್ಯಾಗಿ ಅವರ ನೊಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸರು ಅವರನ್ನು ಮಂಗಳವಾರ ಬಂಧಿಸಿದ್ದರು. 12 ಪೊಲೀಸ್ ತಂಡಗಳು ಮತ್ತು ಉತ್ತರ ಪ್ರದೇಶ ಎಸ್‌ಟಿಎಫ್ 3 ರಾಜ್ಯಗಳಲ್ಲಿ ಶ್ರೀಕಾಂತ್ ತ್ಯಾಗಿಗಾಗಿ ಹುಡುಕಾಟ ನಡೆಸಿತ್ತು. ಕೊನೆಗೆ ಆತನನ್ನು ಮೀರತ್‌ನಲ್ಲಿ ಪತ್ತೆ ಹಚ್ಚಲಾಗಿದ್ದು, ಪೊಲೀಸರು ಆತನ ಜೊತೆ ಮೂವರು ಸಹಚರರನ್ನು ಬಂಧಿಸಿದ್ದರು.

ಮಹಿಳೆಯ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354ರ ಅಡಿಯಲ್ಲಿ ಸಲ್ಲಿಸಲಾದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಐಪಿಸಿ ಸೆಕ್ಷನ್ 420, 419, 482ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಆಗಸ್ಟ್ 16ರಂದು ವಿಚಾರಣೆ ನಡೆಸಲಿದೆ.

ಶ್ರೀಕಾಂತ್ ತ್ಯಾಗಿ ಅವರ ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸರು ಅವರನ್ನು ಮಂಗಳವಾರ ಬಂಧಿಸಿದ್ದರು. 12 ಪೊಲೀಸ್ ತಂಡಗಳು ಮತ್ತು ಉತ್ತರ ಪ್ರದೇಶ ಎಸ್‌ಟಿಎಫ್ 3 ರಾಜ್ಯಗಳಲ್ಲಿ ಶ್ರೀಕಾಂತ್ ತ್ಯಾಗಿಗಾಗಿ ಹುಡುಕಾಟ ನಡೆಸಿತ್ತು. ಕೊನೆಗೆ ಆತನನ್ನು ಮೀರತ್‌ನಲ್ಲಿ ಪತ್ತೆ ಹಚ್ಚಲಾಗಿದ್ದು, ಪೊಲೀಸರು ಆತನ ಜೊತೆ ಮೂವರು ಸಹಚರರನ್ನು ಬಂಧಿಸಿದ್ದರು.

ಇದನ್ನೂ ಓದಿ: Breaking News: ಶ್ರೀಕಾಂತ್ ತ್ಯಾಗಿಯನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

ನೊಯ್ಡಾ ರೆಸಿಡೆನ್ಷಿಯಲ್ ಸೊಸೈಟಿಯಲ್ಲಿ ರಾಜಕಾರಣಿ ಶ್ರೀಕಾಂತ್ ತ್ಯಾಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಶ್ರೀಕಾಂತ್ ತ್ಯಾಗಿ ಅವರ ಪತ್ನಿ, ನನ್ನ ಗಂಡ ಏನು ಮಾಡಿದ್ದಾನೆ, ಆ ಮಹಿಳೆ ಏನು ಮಾಡಿದಳು ಎಂಬುದನ್ನು ನೋಡಿದೆ. ನನ್ನ ಪತಿ ಮಾಡಿದ್ದು ತಪ್ಪಾಗಿದೆ. ಆದರೆ ಅವನು ಮಾಡಿದ ತಪ್ಪಿಗೆ ಅವನಿಗೆ ಶಿಕ್ಷೆಯಾಗಬೇಕು. ನನ್ನ ಗಂಡ ಆ ಮಹಿಳೆಯ ಬಳಿ ಕ್ಷಮೆ ಯಾಚಿಸಬೇಕು ಎಂದು ಹೇಳಿದ್ದರು.

ನೋಯ್ಡಾ ಪೊಲೀಸರು ಶ್ರೀಕಾಂತ್ ತ್ಯಾಗಿ ವಿರುದ್ಧ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 504 (ಸಾರ್ವಜನಿಕ ಶಾಂತಿ ಭಂಗವನ್ನು ಪ್ರಚೋದಿಸುವುದು), 506 (ಕ್ರಿಮಿನಲ್ ಬೆದರಿಕೆ), 447 (ಅಪರಾಧ ಅತಿಕ್ರಮಣ) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿತ್ತು.

ಇದನ್ನೂ ಓದಿ: ನೋಯ್ಡಾದ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆ ಜತೆ ಅನುಚಿತವಾಗಿ ವರ್ತಿಸಿದ್ದ ವ್ಯಕ್ತಿಗೆ ಸೇರಿದ ಕಟ್ಟಡ ಕೆಡವಿದ ನೋಯ್ಡಾ ಪ್ರಾಧಿಕಾರ

ಈ ಘಟನೆ ಆದ ನಂತರ ಬಂಧನಕ್ಕೊಳಗಾಗಿದ್ದ ಶ್ರೀಕಾಂತ್ ತ್ಯಾಗಿ, ನನ್ನ ಮೇಲೆ ಹಲ್ಲೆಯ ಆರೋಪ ಮಾಡಿರುವ ಮಹಿಳೆ ನನಗೆ ಸಹೋದರಿ ಇದ್ದಂತೆ ಎಂದು ಹೇಳಿದ್ದರು. ಈ ಇಡೀ ಘಟನೆಯು ರಾಜಕೀಯಗೊಂಡಿದೆ. ಯಾರೋ ನನ್ನನ್ನು ರಾಜಕೀಯವಾಗಿ ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Thu, 11 August 22

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್