ಮುಂದಿನ ವಾರ ಸಿದ್ದರಾಮಯ್ಯ – ಡಿ.ಕೆ.ಶಿವಕುಮಾರ್ರನ್ನ ರಾಹುಲ್ ಗಾಂಧಿ ದೆಹಲಿಗೆ ಕರೆಸಿಕೊಳ್ಳುವ ಸಾಧ್ಯತೆ
ಸೋಮವಾರ ಇಬ್ಬರೂ ದೆಹಲಿಗೆ ತೆರಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಪಕ್ಷದ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿ ಚರ್ಚೆ ನಡೆಸುತ್ತಾರೆ. ಪದಾಧಿಕಾರಿಗಳ ನೇಮಕ, ಸಿಎಂ ಹೇಳಿಕೆ ಗಲಾಟೆ ಸೇರಿದಂತೆ ಎಲ್ಲಾ ಬೆಳವಣಿಗೆಗಳ ಕುರಿತು ರಾಹುಲ್ ಚರ್ಚೆ ನಡೆಸಬಹುದು.
ದೆಹಲಿ: ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಶೀತಲ ಸಮರ ಶುರುವಾಗಿದೆ. ಕೆಲ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗುತ್ತಿದ್ದರೆ, ಇನ್ನು ಕೆಲ ಕೈ ಕಾರ್ಯಕರ್ತರು ಮುಂದಿನ ಸಿಎಂ ಡಿಕೆಶಿ ಎಂದು ಘೋಷಣೆ ಕೂಗುತ್ತಿದ್ದಾರೆ. ವಿಧಾನ ಸಭೆ ಚುನಾವಣೆಗೆ ಹೆಚ್ಚು ಕಡಿಮೆ ಎರಡು ವರ್ಷವಿರುವಾಗಲೇ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ ಜೋರಾಗಿದೆ. ಈ ಬಗ್ಗೆ ಚರ್ಚಿಸಲು ರಾಷ್ಟ್ರ ರಾಜಧಾನಿ ದೆಹಲಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರೆಸಿಕೊಳ್ಳುವ ಸಾಧ್ಯತೆಯಿದೆ.
ಸೋಮವಾರ ಇಬ್ಬರೂ ದೆಹಲಿಗೆ ತೆರಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಪಕ್ಷದ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿ ಚರ್ಚೆ ನಡೆಸುತ್ತಾರೆ. ಪದಾಧಿಕಾರಿಗಳ ನೇಮಕ, ಸಿಎಂ ಹೇಳಿಕೆ ಗಲಾಟೆ ಸೇರಿದಂತೆ ಎಲ್ಲಾ ಬೆಳವಣಿಗೆಗಳ ಕುರಿತು ರಾಹುಲ್ ಚರ್ಚೆ ನಡೆಸಬಹುದು. ಆರಂಭದಲ್ಲಿ ಒಬ್ಬೊಬ್ಬರನ್ನೇ ಕರೆದು ಚರ್ಚೆ ನಡೆಸುವ ರಾಹುಲ್, ಬಳಿಕ ಇಬ್ಬರನ್ನೂ ಒಟ್ಟಿಗೆ ಕರೆದುಕೊಂಡು ಚರ್ಚೆ ನಡೆಸುತ್ತಾರೆ ಎಂದು ಹೇಳಲಾಗುತ್ತಿದೆ.
ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದ ಬಿಎಸ್ವೈ ದೆಹಲಿಯಿಂದಲೇ ವಿರೋಧಿ ಪಾಳಯಕ್ಕೆ ಖಡಕ್ ಸಂದೇಶ ರವಾನಿಸಿರುವ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಶುದ್ಧ ಸುಳ್ಳು ಎಂದು ಘಂಟಾಘೋಷವಾಗಿ ಹೇಳಿದ್ದಾರೆ. ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬರುತ್ತೇನೆ. ರಾಜೀನಾಮೆ ನೀಡುವ ವಿಚಾರ ಸುಳ್ಳು. ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಯಡಿಯೂರಪ್ಪ ದೆಹಲಿಯಲ್ಲಿ ಹೇಳಿದ್ದಾರೆ.
ಸಂಪುಟ ಪುನಾರಚನೆಯೋ? ನಾಯಕತ್ವ ಬದಲಾವಣೆಯೋ?; ಕುತೂಹಲ ಮೂಡಿಸಿದ ಬಿ.ಎಸ್.ಯಡಿಯೂರಪ್ಪ ದೆಹಲಿ ಭೇಟಿ
(Siddaramaiah and DK Shivakumar is likely to go to Delhi on Monday)