G20 Summit: ಸಿದ್ದರಾಮಯ್ಯ ಸೇರಿ ಮೂವರು ಕಾಂಗ್ರೆಸ್​ ಸಿಎಂಗಳು ರಾಷ್ಟ್ರಪತಿ ಔತಣಕೂಟಕ್ಕೆ ಗೈರಾಗುವ ಸಾಧ್ಯತೆ

ಮುರ್ಮು ಅವರು ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ ಗಣ್ಯರಿಗೆ ಭೋಜನವನ್ನು ಆಯೋಜಿಸಲಿದ್ದಾರೆ. ಇದಕ್ಕೆ ಮಾಜಿ ಪ್ರಧಾನಿಗಳು ಮತ್ತು ಎಲ್ಲಾ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ. ಪಕ್ಷದ ಮೂಲಗಳ ಪ್ರಕಾರ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎನ್ನಲಾಗಿದೆ.

G20 Summit: ಸಿದ್ದರಾಮಯ್ಯ ಸೇರಿ ಮೂವರು ಕಾಂಗ್ರೆಸ್​ ಸಿಎಂಗಳು ರಾಷ್ಟ್ರಪತಿ ಔತಣಕೂಟಕ್ಕೆ ಗೈರಾಗುವ ಸಾಧ್ಯತೆ
ಮಲ್ಲಿಕಾರ್ಜುನ ಖರ್ಗೆ
Follow us
Ganapathi Sharma
|

Updated on: Sep 09, 2023 | 10:41 AM

ನವದೆಹಲಿ, ಸೆಪ್ಟೆಂಬರ್ 9: ಜಿ20 ಶೃಂಗಸಭೆಯ (G20 Summit) ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಆಯೋಜಿಸಿರುವ ಔತಣಕೂಟಕ್ಕೆ ಕಾಂಗ್ರೆಸ್ ಆಡಳಿತವಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗುವ ಸಾಧ್ಯತೆ ಇದೆ. ಪಕ್ಷದ ಮೂಲಗಳ ಪ್ರಕಾರ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಅವರು ತಮ್ಮ ಪಕ್ಷದ ಮುಖ್ಯಸ್ಥ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇರುವುದರ ವಿರುದ್ಧ ಪ್ರತಿಭಟನೆಯಾಗಿ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ. ಆದರೆ, ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಅವರು ಔತಣಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಔತಣಕೂಟದ ಆಹ್ವಾನಿತರ ಪಟ್ಟಿಯಲ್ಲಿ ಖರ್ಗೆ ಹೆಸರು ಸೇರಿಸದ ಕೇಂದ್ರದ ವಿರುದ್ಧ ಪಕ್ಷದ ಸಂಸದ ರಾಹುಲ್ ಗಾಂಧಿ ಶುಕ್ರವಾರ ವಾಗ್ದಾಳಿ ನಡೆಸಿದ್ದರು. ಬೆಲ್ಜಿಯಂ ರಾಜಧಾನಿ ಬ್ರಸೆಲ್ಸ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಭಾರತದ ಜನಸಂಖ್ಯೆಯ ಶೇ 60 ರಷ್ಟು ನಾಯಕರನ್ನು ಅವರು ಗೌರವಿಸುವುದಿಲ್ಲ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು.

ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸದಿರಲು ಅವರು ನಿರ್ಧರಿಸಿದ್ದಾರೆ. ಇದು ಏನನ್ನು ಸೂಚಿಸುತ್ತದೆ? ಅವರು ಭಾರತದ ಜನಸಂಖ್ಯೆಯ ಶೇ 60 ರಷ್ಟು ನಾಯಕರನ್ನು ಗೌರವಿಸುವುದಿಲ್ಲ ಎಂದು ಸೂಚಿಸುತ್ತದೆ. ಇದು ಯೋಚಿಸಬೇಕಾದ ವಿಷಯವಾಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು.

ಇದನ್ನೂ ಓದಿ: ಜಿ20 ಔತಣಕೂಟಕ್ಕೆ ಖರ್ಗೆ ಅವರನ್ನು ಆಹ್ವಾನಿಸದ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಮುರ್ಮು ಅವರು ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ ಗಣ್ಯರಿಗೆ ಭೋಜನವನ್ನು ಆಯೋಜಿಸಲಿದ್ದಾರೆ. ಇದಕ್ಕೆ ಮಾಜಿ ಪ್ರಧಾನಿಗಳು ಮತ್ತು ಎಲ್ಲಾ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ.

ಆಹ್ವಾನಿತರ ಪಟ್ಟಿಯಿಂದ ವಿರೋಧ ಪಕ್ಷದ ನಾಯಕ ಖರ್ಗೆ ಅವರನ್ನು ಹೊರಗಿಟ್ಟಿರುವುದಕ್ಕೆ ಛತ್ತೀಸ್‌ಗಢ ಮುಖ್ಯಮಂತ್ರಿ ಬಘೇಲ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ದುರದೃಷ್ಟಕರ ಬೆಳವಣಿಗೆ ಎಂದು ಬಣ್ಣಿಸಿದ ಅವರು ಪ್ರಜಾಪ್ರಭುತ್ವದಲ್ಲಿ ವೈವಿಧ್ಯಮಯ ದೃಷ್ಟಿಕೋನಗಳನ್ನು ಗೌರವಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಲ್ಲಿ ಪ್ರತಿಪಕ್ಷಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಅವರು ಸೂಚಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ