ಉಕ್ರೇನ್ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಸಿದ್ದರಾಮಯ್ಯ
27 ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ ಮಾಡುತ್ತಿದ್ದೇವೆ ಎಂದು ಮಾತನಾಡಿದ ಡಿಕೆಶಿ, ಪಾದಯಾತ್ರೆ ನಿಲ್ಲಿಸಿದ ಸ್ಥಳದಿಂದ ಮತ್ತೆ ಆರಂಭವಾಗಲಿದೆ. ಬಹಳಷ್ಟು ಸಂಘಟನೆಗಳು ಹೋರಾಟಕ್ಕೆ ಬೆಂಬಲ ಘೋಷಿಸುವುದಾಗಿ ಹೇಳಿದ್ದವು.
ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮೊದಲು ಮಾತನಾಡಿದ ಶಿವಕುಮಾರ್, ನಿನ್ನೆ ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದೇವೆ. ಹದಿನೈದು ನಾಯಕರು ನಿನ್ನೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದೇವೆ. ಭೇಟಿ ವೇಳೆ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಸೇರಿದಂತೆ ಹಿರಿಯ ನಾಯಕರು ಇದ್ದರು. ಕರ್ನಾಟಕ ರಾಜ್ಯದ ರಾಜಕೀಯ ಬೆಳವಣಿಗಗಳ ಬಗ್ಗೆ ಮಾಹಿತಿ ನೀಡಿದೆ. ಪಕ್ಷದ ಸಂಘಟನೆ ಬಗ್ಗೆ ವಿವರಣೆ ನೀಡಿದ್ದೇವೆ. ಚುನಾವಣೆಗೆ ಮುಂದೆ ಒಂದು ವರ್ಷ ಸಮಯ ಇದೆ. ಜನರ ಸಮಸ್ಯೆಗಳನ್ನು ಆಧರಿಸಿ ಮುಂದೆ ಹೋರಾಟ ಮಾಡಲು ಹೈಕಮಾಂಡ್ ಸೂಚಿಸಿದೆ. ಜನರ ನಡುವೆ ಇರುವಂತೆ ರಾಹುಲ್ ಗಾಂಧಿ ಕರೆ ಕೊಟ್ಟಿದ್ದಾರೆ ಎಂದು ತಿಳಿಸಿದರು.
27 ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ ಮಾಡುತ್ತಿದ್ದೇವೆ ಎಂದು ಮಾತನಾಡಿದ ಡಿಕೆಶಿ, ಪಾದಯಾತ್ರೆ ನಿಲ್ಲಿಸಿದ ಸ್ಥಳದಿಂದ ಮತ್ತೆ ಆರಂಭವಾಗಲಿದೆ. ಬಹಳಷ್ಟು ಸಂಘಟನೆಗಳು ಹೋರಾಟಕ್ಕೆ ಬೆಂಬಲ ಘೋಷಿಸುವುದಾಗಿ ಹೇಳಿದ್ದವು. ಈಗ ಎಲ್ಲ ಕಲಾವಿದರಿಗೆ ಈಗ ಮನವಿ ಮಾಡುತ್ತಿದ್ದೇನೆ. ಕುಡಿಯುವ ನೀರಿನ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಕಾಂಗ್ರೆಸ್ ಪರ ಮನವಿ ಮಾಡುತ್ತೇನೆ. ರಾಜ್ಯದ ಹಿತಕ್ಕೆ ಎಲ್ಲರೂ ಒಂದಾಗಬೇಕು ಎಂದು ಹೇಳಿದರು.
ಮುಂದುವರಿದು ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ವಾತಾವರಣ ನಿರ್ಮಾಣವಾಗುತ್ತಿದೆ. ಆಪರೇಷನ್ ಮೂಲಕ ಅಧಿಕಾರಕ್ಕೆ ಬಂದರೂ ಬಿಜೆಪಿ ಏನು ಅಭಿವೃದ್ಧಿ ಕೆಲಸ ಮಾಡಿಲ್ಲ. ರಾಜ್ಯದ ಜನರು ಶಾಪ ಹಾಕುತ್ತಿದ್ದಾರೆ, ಕಣ್ಣಿರಲ್ಲಿ ಕೈತೊಳೆಯುತ್ತಿದ್ದಾರೆ. ಕೊವಿಡ್ ಅನ್ನು ಸರಿಯಾಗಿ ನಿಭಾಯಿಸದ ನಿಷ್ಕ್ರಿಯ ಸರ್ಕಾರ. ರಾಜ್ಯವನ್ನು ಬಿಜೆಪಿ ಆರ್ಥಿಕವಾಗಿ ದಿವಾಳಿ ಮಾಡಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ರಾಜ್ಯದ ನಾಯಕರ ಜೊತೆಗೆ ಸಭೆ ನಡೆಸಿದರು. ರಾಜ್ಯದ ಪರಿಸ್ಥಿತಿಗಳ ಬಗ್ಗೆ ಚರ್ಚೆ ಮಾಡಿದರು. ಚುನಾವಣೆ ತಂತ್ರಗಳನ್ನು ಮಾಡುವ ಬಗ್ಗೆ ಸಮಾಲೋಚನೆ ನಡೆಸಿದರು. ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಹೈಕಮಾಂಡ್ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದರು.
ರಾಹುಲ್ ಗಾಂಧಿ ಅವರಿಗೆ ಎಲ್ಲೂ ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ ಎನ್ನುವ ಸಂದೇಶ ಸಿಕ್ಕಿದೆ. ಅಧ್ಯಕ್ಷರು, ಸಿಎಲ್ಪಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ ಎನ್ನುವ ಸಂದೇಶ ಸಿಕ್ಕಿದೆ. ನಾವು ಒಗ್ಗಟ್ಟಾಗಿ ಹೋರಾಡುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಬಿಜೆಪಿ ಭಿನ್ನಬಿಪ್ರಾಯಗಳಿದೆ ಎಂದು ತೋರಿಸುತ್ತಿದೆ. ನಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಹೀಗಾಗಿ ಸಣ್ಣಪುಟ್ಟ ವ್ಯತಾಸಗಳಿರುತ್ತೆ. ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ. ಈಶ್ವರಪ್ಪ ರಾಷ್ಟ್ರ ಧ್ವಜದ ಬಗ್ಗೆ ಮಾತನಾಡಿದ್ರೆ ಅದನ್ನು ಬಿಜೆಪಿ ನಾಯಕರು ಬೆಂಬಲಿಸುತ್ತಾರೆ. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ತಪ್ಪು ಎಂದು ಹೇಳಿದ್ದಾರೆ. ಇಷ್ಟೇಲ್ಲ ಆದರೂ ಸಿಎಂ, ರಾಜ್ಯಧ್ಯಕ್ಷರು ಈಶ್ವರಪ್ಪ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ಶವ ಇಟ್ಟುಕೊಂಡು ರಾಜಕೀಯ ಮಾಡಿದ್ದಾರೆ. 144 ಸೆಕ್ಷನ್ ಜಾರಿ ಇದ್ದರೂ ಶವಯಾತ್ರೆಯಲ್ಲಿ ಭಾಗಿಯಾಗಿ ಕಾನೂನು ಉಲ್ಲಂಘಿಸಿದ್ದಾರೆ. ಅದಕ್ಕೂ ಕ್ರಮ ತೆಗೆದುಕೊಳ್ಳಬೇಕಿತ್ತು. ಕ್ರಮ ಕೈಗೊಳ್ಳದ ಹಿನ್ನೆಲೆ ರಾಜ್ಯಪಾಲರನ್ನು ಭೇಟಿ ಮಾಡಿ ಈಶ್ವರಪ್ಪ ವಜಾ ಮಾಡಲು ಮನವಿ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮೇಕೆದಾಟು ಯೋಜನೆ ನೆನೆಗುದಿಗೆ ಬಿದ್ದ ಯೋಜನೆ. ನಮ್ಮ ಸರ್ಕಾರ ಡಿಪಿಆರ್ ತಯಾರು ಮಾಡಿತ್ತು. ಕೆಲವು ಪರಿಶೀಲನೆ ನಡೆಸಿ ವಾಪಸ್ ಕಳುಹಿಸಿದ್ದರು. ಆಗ ಮೈತ್ರಿ ಸರ್ಕಾರ ಇತ್ತು, ಡಿ.ಕೆ ಶಿವಕುಮಾರ್ ಮರು ಮನವಿ ಮಾಡಲಾಯಿತು. ಕೇವಲ ಪರಿಸರ ಅನುಮತಿ ಮಾತ್ರ ಅವಶ್ಯಕತೆ ಇದೆ. ಈಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಈ ಸರ್ಕಾರ ಬಂದು 2 ವರ್ಷ ತಿಂಗಳಾಗಿದೆ. ಈ ಅವಧಿಯಲ್ಲಿ ಒಂದು ಪರಿಸರ ಅನುನತಿ ಪಡೆಯಲು ಸಾಧ್ಯವಾಗಲಿಲ್ಲ. ನಮ್ಮ ರಾಜ್ಯದಲ್ಲಿ ಮಾಡುವ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿಗೆ ಸಾಧ್ಯವಾಗಿಲ್ಲ. ಇದನ್ನು ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಳ್ಳುತ್ತಾರೆ. ಈ ಯೋಜನೆಯಿಂದ ಕುಡಿಯುವ ನೀರು, ವಿದ್ಯುತ್ ಪೂರೈಕೆಯಾಗಲಿದೆ. ಬಿಜೆಪಿ ಮನಸ್ಸು ಮಾಡಿದ್ರೆ ಎರಡು ಮೂರು ತಿಂಗಳಲ್ಲಿ ಅನುಮತಿ ಪಡೆಯಬಹುದಿತ್ತು. ಈವರೆಗೂ ಅನುಮತಿ ಪಡೆದಿಲ್ಲ. ಹೀಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಪಾದಯಾತ್ರೆ ಮಾಡುತ್ತಿದ್ದೇವೆ. ರಾಜಕೀಯ ಕಾರಣಕ್ಕೆ ಪಾದಯಾತ್ರೆ ಮಾಡುತ್ತಿಲ್ಲ ಅಂತ ಸಿದ್ದರಾಮಯ್ಯ ದೆಹಲಿಯಲ್ಲಿ ಸುದ್ದಿಗೋಷ್ಠಿ ವೇಳೆ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ
ದೇವಾತನಯಂ ಸಮ್ಮೇಳನಕ್ಕೆ ಚಾಲನೆ: ವಿಜಯನಗರ ಸಾಮ್ರಾಜ್ಯ ದಲ್ಲಿ ಹುಟ್ಟಿದ ನಾವೆಲ್ಲರೂ ಹೆಮ್ಮೆಪಡಬೇಕು -ಸಚಿವ ಆನಂದ್ ಸಿಂಗ್
ರಷ್ಯಾವನ್ನು ಎದುರಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಿರ್ಣಯ ಅಂಗೀಕಾರ
Published On - 12:13 pm, Fri, 25 February 22