ಕರ್ನಾಟಕ ಕಾಂಗ್ರೆಸ್​ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯವಿಲ್ಲ; ದೆಹಲಿಯಲ್ಲಿ ಸಿದ್ದರಾಮಯ್ಯ ಹೇಳಿಕೆ

ರಾಜ್ಯ ಕಾಂಗ್ರೆಸ್ ಪ್ರಸ್ತುತ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈ ಸರ್ಕಾರವನ್ನು ಕಿತ್ತೊಗೆಯಲು ಎಲ್ಲರೂ ಸೇರಿ ಹೋರಾಟ ಮಾಡುತ್ತಿದ್ದೇವೆ.

ಕರ್ನಾಟಕ ಕಾಂಗ್ರೆಸ್​ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯವಿಲ್ಲ; ದೆಹಲಿಯಲ್ಲಿ ಸಿದ್ದರಾಮಯ್ಯ ಹೇಳಿಕೆ
ಸಿದ್ದರಾಮಯ್ಯ
Follow us
| Updated By: sandhya thejappa

Updated on: Jul 20, 2021 | 11:54 AM

ದೆಹಲಿ: ರಾಜ್ಯ ಕಾಂಗ್ರೆಸ್ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯವಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಒಡಕು ಇದೆ ಎಂಬ ಮಾತುಗಳು ಸತ್ಯಕ್ಕೆ ದೂರ ಎಂದರು. ನಾವೀಗ ಪ್ರತಿಪಕ್ಷದಲ್ಲಿ ಇದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತೇಕೆ ಬರುತ್ತದೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಪ್ರಸ್ತುತ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈ ಸರ್ಕಾರವನ್ನು ಕಿತ್ತೊಗೆಯಲು ಎಲ್ಲರೂ ಸೇರಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಂದಿನ ಮುಖ್ಯಮಂತ್ರಿ ವಿಷಯದ ಬಗ್ಗೆ ಚರ್ಚೆ ಅಪ್ರಸ್ತುತ. ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವೇ ಅಂತಿಮ. ಅವರ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಹುಲ್ ಭೇಟಿಗೆ ಟೈಂ ಫಿಕ್ಸ್ ಇಂದು ಸಂಜೆ 4ಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿಯಾಗಲಿದ್ದಾರೆ. ಇಬ್ಬರು ಕೈ ನಾಯಕರು ಒಟ್ಟಿಗೆ ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿದ್ದಾರೆ. ರಾಹುಲ್ ಭೇಟಿಗೂ ಮುನ್ನ ಅಂದರೆ ಮಧ್ಯಾಹ್ನ 1ಗಂಟೆಗೆ ಗುಲಾಂ ನಬಿ ಆಜಾದ್ರವರನ್ನ ಭೇಟಿ ಮಾಡುತ್ತಾರೆ.

ನಾಳೆಯೂ ಪ್ರವಾಸ ಮುಂದುವರಿಯುವ ಸಾಧ್ಯತೆ ಸಿದ್ದರಾಮಯ್ಯ ನಾಳೆಯೂ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆಯಿದೆ. ಸುರ್ಜೇವಾಲ ಮತ್ತು ಕೆ.ಸಿ.ವೇಣುಗೋಪಾಲ್ರವರನ್ನು ಭೇಟಿಯಾಗುತ್ತಾರೆ ಎಂದು ಹೇಳಲಾಗುತ್ತಿದ್ದು, ಪದಾಧಿಕಾರಿಗಳ ನೇಮಕ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ

ತಿರುಪತಿ ವೆಂಕಟೇಶ್ವರ ಸ್ವಾಮಿ ದೇವರಿಗೆ 4 ಕೋಟಿ ರೂ.ಮೌಲ್ಯದ ಬಂಗಾರದ ಖಡ್ಗ ಸಮರ್ಪಣೆ; ಫೋಟೋಗಳು ಇಲ್ಲಿವೆ..

ಸಂಪುಟ ಬದಲಾದ್ರೆ ನಾನೂ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುವೆ: ಶಾಸಕ ದುರ್ಯೋಧನ ಐಹೊಳೆ

(Siddaramaiah says there was no disagreement in Karnataka Congress at delhi)