Sidhu Moose Wala Murder: ಮೂಸೆವಾಲಾ ಕೊಲೆ ಪ್ರಕರಣ; ಲಾರೆನ್ಸ್​ ಬಿಷ್ಣೋಯ್​ಗೆ ಬುಲೆಟ್ ಪ್ರೂಫ್ ವಾಹನ, 100 ಪೊಲೀಸರಿಂದ ಭದ್ರತೆ

Lawrence Bishnoi: ಕುಖ್ಯಾತ ಗ್ಯಾಂಗ್​ಸ್ಟರ್​ ಆಗಿರುವ ಲಾರೆನ್ಸ್​ ಬಿಷ್ಣೋಯ್​ನನ್ನು ಬುಲೆಟ್ ಪ್ರೂಫ್ ವಾಹನದಲ್ಲಿ ಸ್ಥಳಾಂತರಿಸಲಾಗುತ್ತಿದೆ. 24ಕ್ಕೂ ಹೆಚ್ಚು ಬೆಂಗಾವಲು ಪಡೆಯ ವಾಹನಗಳನ್ನು ನಿಯೋಜಿಸಲಾಗಿದ್ದು, 100 ಪೊಲೀಸರು ಆತನಿಗೆ ಸೆಕ್ಯುರಿಟಿ ನೀಡುತ್ತಿದ್ದಾರೆ.

Sidhu Moose Wala Murder: ಮೂಸೆವಾಲಾ ಕೊಲೆ ಪ್ರಕರಣ; ಲಾರೆನ್ಸ್​ ಬಿಷ್ಣೋಯ್​ಗೆ ಬುಲೆಟ್ ಪ್ರೂಫ್ ವಾಹನ, 100 ಪೊಲೀಸರಿಂದ ಭದ್ರತೆ
ಲಾರೆನ್ಸ್​ ಬಿಷ್ಣೋಯ್Image Credit source: India Today
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 15, 2022 | 9:55 AM

ಪಂಜಾಬ್: ಪಂಜಾಬಿ ಗಾಯಕ ಸಿಧು ಮೂಸೆವಾಲಾ (Sidhu Moose Wala) ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ಗೆ ಪಂಜಾಬ್ ನ್ಯಾಯಾಲಯವು (Punjab Court) ಏಳು ದಿನಗಳ ಜೈಲು ಶಿಕ್ಷೆಯನ್ನು ನೀಡಿದೆ. ಹೈ ಪ್ರೊಫೈಲ್ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಗ್ಯಾಂಗ್​ಸ್ಟರ್ ಬಿಷ್ಣೋಯ್​ಗೆ ಪೊಲೀಸರಿಂದ ಭಾರೀ ಬಿಗಿ ಬಂದೋಬಸ್ತ್​​ ನೀಡಲಾಗಿದೆ. ಬಿಗಿ ಭದ್ರತೆಯ ನಡುವೆ ಆತನನ್ನು ಮಾನ್ಸಾದಿಂದ ಮೊಹಾಲಿಗೆ ಸಾಗಿಸಲಾಗುತ್ತಿದೆ. ಕುಖ್ಯಾತ ಗ್ಯಾಂಗ್​ಸ್ಟರ್​ ಆಗಿರುವ ಲಾರೆನ್ಸ್​ ಬಿಷ್ಣೋಯ್​ನನ್ನು (Lawrence Bishnoi) ಬುಲೆಟ್ ಪ್ರೂಫ್ ವಾಹನದಲ್ಲಿ ಸ್ಥಳಾಂತರಿಸಲಾಗುತ್ತಿದೆ. 24ಕ್ಕೂ ಹೆಚ್ಚು ಬೆಂಗಾವಲು ಪಡೆಯ ವಾಹನಗಳನ್ನು ನಿಯೋಜಿಸಲಾಗಿದ್ದು, 100 ಪೊಲೀಸರು ಆತನಿಗೆ ಸೆಕ್ಯುರಿಟಿ ನೀಡುತ್ತಿದ್ದಾರೆ.

ಮೊಹಾಲಿಯಲ್ಲಿ ಪಂಜಾಬ್ ಪೊಲೀಸರು ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಗ್ಯಾಂಗ್​ಸ್ಟರ್​ ವಿರುದ್ಧದ ಕಾರ್ಯಪಡೆ ಮತ್ತು ಇತರ ಏಜೆನ್ಸಿಗಳು ಗಾಯಕ ಹಾಗೂ ರಾಜಕಾರಣಿ ಸಿಧು ಮೂಸೆವಾಲಾ ಅವರ ಹತ್ಯೆಯಲ್ಲಿ ಬಿಷ್ಣೋಯ್ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸುತ್ತಿವೆ. ಪಂಜಾಬ್ ಪೊಲೀಸರು ಲಾರೆನ್ಸ್ ಬಿಷ್ಣೋಯ್​ನನ್ನು ಇಂದು ಮುಂಜಾನೆ ಮಾನಸಾ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ
Image
ಪಂಜಾಬಿ ಗಾಯಕ ಮೂಸೆವಾಲಾ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ
Image
Sidhu Moosewala Murder Case ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದಲ್ಲಿ ಆರೋಪಿ ಅರೆಸ್ಟ್; 5 ದಿನ ಪೊಲೀಸ್ ವಶಕ್ಕೆ
Image
ಸಿಧು ಮೂಸೆ ವಾಲಾ ಕೊಲೆ ಬಳಿಕ ಪಂಜಾಬಿ ಖ್ಯಾತ ಗಾಯಕ ಮನ್ಕೀರತ್ ಔಲಾಖ್ ಭದ್ರತೆ ಹೆಚ್ಚಿಸುವಂತೆ ಕೋರಿದ್ದಾರೆ

ಇದನ್ನೂ ಓದಿ: Sidhu Moosewala murder ಸಿಧು ಮೂಸೆ ವಾಲಾ ಹತ್ಯೆ ಪ್ರಕರಣ: ಸೆಲ್ಫಿ ಕ್ಲಿಕ್ಕಿಸಿದ್ದ ಅಭಿಮಾನಿ ಸೇರಿ 8 ಮಂದಿ ಬಂಧನ

ಮುಖ್ಯಮಂತ್ರಿಯ ನಿರ್ದೇಶನದ ಮೇರೆಗೆ ಪಂಜಾಬ್‌ನ ಅಡ್ವೊಕೇಟ್ ಜನರಲ್ ಸ್ವತಃ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರಾಗಿ ರಿಮಾಂಡ್‌ಗೆ ಒತ್ತಾಯಿಸಿದ್ದಾರೆ. ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಯು ಲಾರೆನ್ಸ್ ಬಿಷ್ಣೋಯ್​ನನ್ನು ಬಂಧಿಸಲು ನ್ಯಾಯಾಲಯದ ಅನುಮತಿ ಪಡೆಯಲು ಅರ್ಜಿ ಸಲ್ಲಿಸಿದ್ದು, ಆತನ ವಿರುದ್ಧ ಸ್ಥಳೀಯ ಮಾನ್ಸಾ ನ್ಯಾಯಾಲಯ ಈಗಾಗಲೇ ಬಂಧನ ವಾರಂಟ್ ಹೊರಡಿಸಿದೆ.

ಗಾಯಕ ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರು ಕೇಳಿಬಂದ ನಂತರ ಲಾರೆನ್ಸ್ ಬಿಷ್ಣೋಯ್ ಅವರ ವಕೀಲರು ದೆಹಲಿಯ ಪಟಿಯಾಲಾ ನ್ಯಾಯಾಲಯದಲ್ಲಿ ಜೈಲಿನಲ್ಲಿರುವ ದರೋಡೆಕೋರರಿಗೆ ಭದ್ರತೆಯನ್ನು ಹೆಚ್ಚಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಲಾರೆನ್ಸ್ ಬಿಷ್ಣೋಯ್​ನನ್ನು ಪೊಲೀಸರು ನಕಲಿ ಎನ್‌ಕೌಂಟರ್​ನಲ್ಲಿ ಕೊಲ್ಲಬಹುದು ಅಥವಾ ಆತನ ಎದುರಾಳಿ ಗ್ಯಾಂಗ್ ಆತನ ಮೇಲೆ ದಾಳಿ ನಡೆಸಬಹುದು ಎಂದು ವಕೀಲರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:44 am, Wed, 15 June 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್