Sidhu Moosewala: 2022ರಲ್ಲಿ ಹತ್ಯೆಯಾಗಿದ್ದ ಗಾಯಕ ಸಿಧು ಮೂಸೆವಾಲಾ ತಾಯಿ ಈಗ ಗರ್ಭಿಣಿ

2022ರಲ್ಲಿ ಹತ್ಯೆಯಾಗಿದ್ದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ತಾಯಿ ಮತ್ತೆ ಗರ್ಭಿಣಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 58 ವರ್ಷದ ಚರಣ್ ಕೌರ್ ಗರ್ಭಿಣಿಯಾಗಿದ್ದಾರೆ.

Sidhu Moosewala: 2022ರಲ್ಲಿ ಹತ್ಯೆಯಾಗಿದ್ದ ಗಾಯಕ ಸಿಧು ಮೂಸೆವಾಲಾ ತಾಯಿ ಈಗ ಗರ್ಭಿಣಿ
ಸಿಧು ಮೂಸೆವಾಲಾ
Image Credit source: ABP Live

Updated on: Feb 27, 2024 | 2:52 PM

ಮಗನನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ್ದ ಪಂಜಾಬಿ ಗಾಯಕ ಸಿಧು ಮೂಸೆವಾಲಾ(Sidhu Moosewala) ಮನೆಯವರ ಮುಖದಲ್ಲಿ ಮಂದಹಾಸ ಮೂಡಿದೆ. ಸಿಧು ಮೂಸೆವಾಲಾ ತಾಯಿ 58 ವರ್ಷದ ಚರಣ್ ಕೌರ್ ಗರ್ಭಿಣಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಚರಣ್ ಕೌರ್ ಶೀಘ್ರದಲ್ಲೇ ಮಗುವಿಗೆ ಜನ್ಮ ನೀಡಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬಲ್ಕೌರ್ ಸಿಂಗ್ 60ನೇ ವಯಸ್ಸಿನಲ್ಲಿ ಮತ್ತೆ ತಂದೆಯಾಗಲಿದ್ದಾರೆ. ಸಿಧು ಮೂಸೆವಾಲಾ ಅವರ ತಂದೆ ತಾಯಿಗೆ ಒಬ್ಬನೇ ಮಗನಾಗಿದ್ದರು.

ಈ ಬಗ್ಗೆ ಸಿಧು ಮೂಸೆವಾಲ ಪೋಷಕರಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ, ಚರಣ್ ಕೌರ್ ಸುಮಾರು ಆರು ತಿಂಗಳ ಕಾಲ ಸಾರ್ವಜನಿಕ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಕೌರ್ ಐವಿಎಫ್​ ಮೂಲಕ ಮಗು ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಮೂಸೆವಾಲಾ ಅವರ ತಂದೆ ಬಲ್ಕೌರ್ ಸಿಂಗ್ ಅವರು ಬಟಿಂಡಾ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಕೂಡ ಕೇಳಿಬರುತ್ತಿವೆ.

ಮತ್ತಷ್ಟು ಓದಿ: ಸಿಧು ಮೂಸೆ ವಾಲಾ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್​ಗೆ ಶಸ್ತ್ರಾಸ್ತ್ರ ಪೂರೈಸಿದ್ದ ವ್ಯಕ್ತಿಯ ಬಂಧನ

2022ರ ಮೇ 29ರಂದು ಸಿದ್ದು ಮೂಸೆವಾಲಾ ಕೊಲೆಯಾಗಿದ್ದರು
ಪಂಜಾಬಿ ಗಾಯಕ ಸಿಧು ಮೂಸೆವಾಲಾ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿದ್ದಾರೆ. ಅವರು 2022 ರಲ್ಲಿ ಕಾಂಗ್ರೆಸ್ ಪರವಾಗಿ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಆದರೆ ಅವರು ಸೋಲು ಕಂಡಿದ್ದರು. ನಂತರ ಈ ವರ್ಷ 29 ಮೇ 2022 ರಂದು ಸಿದ್ದು ಮೂಸೆವಾಲಾ ಅವರನ್ನು ಕೊಲೆ ಮಾಡಲಾಯಿತು. ಕೊಲೆಯ ಹೊಣೆಯನ್ನು ಸ್ವತಃ ಗೋಲ್ಡಿ ಬ್ರಾರ್ ವಹಿಸಿಕೊಂಡರು. ಕೊಲೆ ಪ್ರಕರಣದಲ್ಲಿ 31 ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿದ್ದು, ಈ ಪೈಕಿ 25 ಆರೋಪಿಗಳನ್ನು ಇದುವರೆಗೆ ಬಂಧಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:52 pm, Tue, 27 February 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us