AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪ್ರಮುಖ ಹುದ್ದೆಗಳಲ್ಲಿ ಮಹತ್ವದ ಬದಲಾವಣೆ, ಯಾರಿಗೆ? ಯಾವ ಸ್ಥಾನ?

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಹುದ್ದೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪ್ರಮುಖ ಹುದ್ದೆಗಳಲ್ಲಿ ಮಹತ್ವದ ಬದಲಾವಣೆ, ಯಾರಿಗೆ? ಯಾವ ಸ್ಥಾನ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 29, 2023 | 3:31 PM

Share

ದೆಹಲಿ,ಜು.29: ಬಿಜೆಪಿ ಪಕ್ಷ ರಾಷ್ಟ್ರೀಯ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಹುದ್ದೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುವ ನಿಟ್ಟಿನಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಬಿಜೆಪಿ ಮೂಲಗಳ ತಿಳಿಸಿದೆ. ಇಂದು (ಜು.29) ಈ ಕುರಿತಂತೆ ಬಿಜೆಪಿ ಒಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. 3 ಉಪಾಧ್ಯಕ್ಷರು, ಒಂಬತ್ತು ಪ್ರಧಾನ ಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ 13 ಕಾರ್ಯದರ್ಶಿಗಳ ನೇಮಕ ಮಾಡಲಾಗಿದೆ. ಇನ್ನೂ ಕೆಲವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸಿದ್ದು, ಇನ್ನೂ ಅನೇಕ ನಾಯಕರನ್ನು ಕೈಬಿಡಲಾಗಿದೆ.

ಬಂಡಿ ಸಂಜಯ್, ಅನಿಲ್ ಆಂಟೋನಿ ಮತ್ತು ಕಾಮಾಖ್ಯ ಪಿ ತಾಸಾ ಸೇರಿದಂತೆ ಹೊಸ ಮುಖಗಳಿಗೆ ಪ್ರಮುಖ ಹುದ್ದೆಗಳನ್ನು ನೀಡಲಾಗಿದ್ದು. ಸಿಟಿ ರವಿ, ದಿಲೀಪ್ ಘೋಷ್, ದಿಲೀಪ್ ಸೈಕಿಯಾ ಮತ್ತು ಸುನೀಲ್ ದಿಯೋಧರ್ ಅವರನ್ನು ಪ್ರಮುಖ ಹುದ್ದೆಗಳಿಂದ ಕೈಬಿಟ್ಟಿದೆ.

ಇನ್ನೂ ಉತ್ತರ ಪ್ರದೇಶದ ಎಂಎಲ್‌ಸಿ ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಮಾಜಿ ಉಪಕುಲಪತಿ ತಾರಿಕ್ ಮನ್ಸೂರ್ ಅವರನ್ನು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ತೆಲಂಗಾಣ ಬಿಜೆಪಿಯ ಮಾಜಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದ್ದು, ಇತ್ತಿಚೇಗೆ ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರಿದ ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಅವರನ್ನೂ ರಾಷ್ಟ್ರೀಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್, ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ?

ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಟಿ ರವಿ?

ಸಿ,ಟಿ ರವಿ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಟ್ಟಿದ್ದು, ಅನೇಕ ರಾಜಕೀಯ ಊಹಾಪೋಹಕ್ಕೆ ಕಾರಣವಾಗಿದೆ. ಇತ್ತಿಚೇಗೆ ಮಾಜಿ ಪ್ರಧಾನಿ ಹೆಚ್​​ ಡಿ ದೇವೇಗೌಡ ಅವರು ನೀಡಿರುವ ಹೇಳಿಕೆಯಂತೆ ಸಿ.ಟಿ ರವಿ ಅವರನ್ನು ರಾಜ್ಯಾಧ್ಯಕ್ಷರಾಗುತ್ತಾರೆ, ಯತ್ನಾಳ್​​ ವಿರೋಧ ಪಕ್ಷದ ನಾಯಕರಾಗುತ್ತಾರೆ ಎಂಬುದು ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ಈ ಹೇಳಿಕೆಗೆ ಪುಷ್ಠಿ ನೀಡುವಂತೆ ಬಿಜೆಪಿ ಪಕ್ಷ ಸಿ.ಟಿ ರವಿ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಇಳಿಸಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:17 pm, Sat, 29 July 23

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!