AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಹೈಕೋರ್ಟ್​ನ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ

ಹೈಕೋರ್ಟ್​ನ ಎಲ್ಲಾ ಮಹಿಳಾ ಸಿಬ್ಬಂದಿಗೆ ಇನ್ನುಮುಂದೆ ಮುಟ್ಟಿನ ರಜೆ ಸಿಗಲಿದೆ. ಈ ಮಹತ್ವದ ನಿರ್ಧಾರವನ್ನು ಸಿಕ್ಕಿ ಹೈಕೋರ್ಟ್​ ತೆಗೆದುಕೊಂಡಿದೆ.

ಇನ್ಮುಂದೆ ಹೈಕೋರ್ಟ್​ನ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ
ನಯನಾ ರಾಜೀವ್
|

Updated on: May 30, 2024 | 12:38 PM

Share

ಇನ್ಮುಂದೆ ಹೈಕೋರ್ಟ್​ನಲ್ಲಿ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ(Menstrual Leave) ಸಿಗಲಿದೆ. ಸಿಕ್ಕಿಂ ಹೈಕೋರ್ಟ್​ ಈ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಹೈಕೋರ್ಟ್​ನ ಮಹಿಳಾ ಉದ್ಯೋಗಿಗಳು ತಿಂಗಳಲ್ಲಿ 2-3 ದಿನ ಮುಟ್ಟಿನ ರಜೆ ಪಡೆಯಬಹುದು ಎಂದು ಹೇಳಲಾಗಿದ್ದು, ಇದರಿಂದ ಮಹಿಳಾ ಸಿಬ್ಬಂದಿ ಸಂತಸಪಟ್ಟಿದ್ದಾರೆ.

ಆದರೆ ಈ ರಜೆಯನ್ನು ಹೈಕೋರ್ಟ್​ನ ವೈದ್ಯಾಧಿಕಾರಿಗಳ ಶಿಫಾರಸಿನ ಮೇರೆಗೆ ನೀಡಲಾಗುತ್ತದೆ. ಇದನ್ನು ಒಟ್ಟಾರೆ ರಜೆ ಜತೆಗೆ ಪರಿಗಣಿಸಲಾಗುವುದಿಲ್ಲ.

ಸಿಕ್ಕಿಂ ಹೈಕೋರ್ಟ್​ ದೇಶದ ಅತ್ಯಂತ ಚಿಕ್ಕ ಹೈಕೋರ್ಟ್​ ಆಗಿದ್ದು ದೊಡ್ಡ ನಿರ್ಧಾರವನ್ನೇ ಕೈಕೊಂಡಿದೆ. ಇದರಲ್ಲಿ ಮೂವರು ನ್ಯಾಯಮೂರ್ತಿಗಳು ಇದ್ದಾರೆ, ಒಬ್ಬರು ಮಹಿಳಾ ಅಧಿಕಾರಿ ಸೇರಿದಂತೆ ಕೇವಲ 9 ಮಂದಿ ಇದ್ದಾರೆ.

ಸಿಕ್ಕಿಂ ಹೈಕೋರ್ಟ್ ಮುಟ್ಟಿನ ರಜೆ ನೀತಿಯನ್ನು ಪರಿಚಯಿಸಿದ ಮೊದಲ ಹೈಕೋರ್ಟ್ ಆಗಿದೆ. ಪ್ರಸ್ತುತ, ಮುಟ್ಟಿನ ರಜೆಗೆ ಯಾವುದೇ ರಾಷ್ಟ್ರೀಯ ನೀತಿ ಅಥವಾ ಕಾನೂನು ಇಲ್ಲ.

ಮತ್ತಷ್ಟು ಓದಿ: ವೇತನ ಸಹಿತ ಮುಟ್ಟಿನ ರಜೆ: ಸ್ಮೃತಿ ಇರಾನಿ ಹೇಳಿಕೆ ಬೆಂಬಲಿಸಿದ ನಟಿ ಕಂಗನಾ

ಫೆಬ್ರವರಿ 2023 ರಲ್ಲಿ, ದೇಶದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಕೋರುವ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತು.

ಡಿಸೆಂಬರ್ 2023 ರಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಮುಟ್ಟಿನ ರಜೆ ನೀತಿಯನ್ನು ವಿರೋಧಿಸಿದರು. ಋತುಚಕ್ರ ಅಂಗವೈಕಲ್ಯವಲ್ಲ ಎಂದು ಹೇಳಿದ್ದರು.

ಅದೇ ತಿಂಗಳಿನಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಟ್ಟಿನ ನೈರ್ಮಲ್ಯದ ಕರಡು ನೀತಿಯನ್ನು ರೂಪಿಸಿತು, ಅದು ಮಹಿಳೆಯರಿಗೆ ಯಾವುದೇ ತಾರತಮ್ಯವಾಗದಂತೆ ಮನೆಯಿಂದ ಕೆಲಸ ಅಥವಾ ಬೆಂಬಲ ರಜೆಗಳು ಲಭ್ಯವಿರಬೇಕು ಎಂದು ಹೇಳಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ