AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಜಾ ಮಾಡಲು ಹೋಗಿ ಹೆಣವಾಗಿ ಮರಳಿದ ಪ್ರವಾಸಿಗ; 10 ಅಡಿ ಎತ್ತರದಿಂದ ಸ್ವಿಮ್ಮಿಂಗ್ ಪೂಲ್‌ಗೆ ಜಂಪ್ ಮಾಡಿದ ಯುವಕ ಸ್ಥಳದಲ್ಲೇ ಸಾವು

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಮಾಲ್ವಣ್ ರೆಸಾರ್ಟ್‌ನ ಈಜುಕೊಳದಲ್ಲಿ ಯುವಕನ ದುರಂತ ಸಾವು ಸಂಭವಿಸಿದೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ 25 ವರ್ಷದ ಶ್ರೇಣಿಕ್ ಮಿಲಿಂದ್, ಎತ್ತರದಿಂದ ಈಜುಕೊಳದ ಆಳವಿಲ್ಲದ ಭಾಗಕ್ಕೆ ತಲೆಕೆಳಗಾಗಿ ದುಮುಕಿದಾಗ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪೊಲೀಸರು ಅಸ್ವಾಭಾವಿಕ ಮರಣ ಪ್ರಕರಣ ದಾಖಲಿಸಿದ್ದು, ಪ್ರವಾಸಿಗರಿಗೆ ಇಂತಹ ಸಾಹಸಗಳಿಂದ ದೂರವಿರಲು ಎಚ್ಚರಿಕೆ ನೀಡಿದ್ದಾರೆ.

ಮಜಾ ಮಾಡಲು ಹೋಗಿ ಹೆಣವಾಗಿ ಮರಳಿದ ಪ್ರವಾಸಿಗ; 10 ಅಡಿ ಎತ್ತರದಿಂದ ಸ್ವಿಮ್ಮಿಂಗ್ ಪೂಲ್‌ಗೆ ಜಂಪ್ ಮಾಡಿದ ಯುವಕ ಸ್ಥಳದಲ್ಲೇ ಸಾವು
ಈಜುಕೊಳ ಸಾವುದಲ್ಲಿ ಸಾವನ್ನಪ್ಪಿದ ಯುವಕ Image Credit source: social Media
ಅಕ್ಷಯ್​ ಪಲ್ಲಮಜಲು​​
|

Updated on: Jun 29, 2026 | 8:20 AM

Share

ಮುಖ್ಯಾಂಶಗಳು

  • ರೆಸಾರ್ಟ್ ಒಂದರಲ್ಲಿ ಮಜಾ ಮಾಡುತ್ತಿದ್ದ 25 ವರ್ಷದ ಯುವಕ
  • ಹತ್ತು ಅಡಿ ಎತ್ತರದಿಂದ ತಲೆಕೆಳಗಾಗಿ ದುಮುಕಿದ ಪರಿಣಾಮ ಸ್ಥಳದಲ್ಲೇ ಸಾವು
  • ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಮಾಲ್ವಣ್‌ನ ವಾಯರಿದಲ್ಲಿ ಘಟನೆ

ಸಿಂಧುದುರ್ಗ, ಜೂ.29: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದು ರೆಸಾರ್ಟ್ ಒಂದರಲ್ಲಿ ಮಜಾ ಮಾಡುತ್ತಿದ್ದ 25 ವರ್ಷದ ಯುವಕನೊಬ್ಬ, ಈಜುಕೊಳದ ಆಳ ತಿಳಿಯದೆ ಎಂಟರಿಂದ ಹತ್ತು ಅಡಿ ಎತ್ತರದಿಂದ ತಲೆಕೆಳಗಾಗಿ ದುಮುಕಿದ (Dive) ಪರಿಣಾಮ ಸ್ಥಳದಲ್ಲೇ ಭೀಕರವಾಗಿ ಸಾವನ್ನಪ್ಪಿದ್ದಾನೆ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಮಾಲ್ವಣ್‌ನ ವಾಯರಿ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೊಲ್ಲಾಪುರ ಜಿಲ್ಲೆಯ ಮೂಲದ ಶ್ರೇಣಿಕ್ ಮಿಲಿಂದ್ ಟಾಕಳೆ (25) ಮೃತಪಟ್ಟ ದುರ್ದೈವಿ ಯುವಕ ಎಂದು ಗುರುತಿಸಲಾಗಿದೆ.

ಮೃತ ಶ್ರೇಣಿಕ್ ಮಿಲಿಂದ್ ತನ್ನ ಒಂಬತ್ತು ಜನ ಸ್ನೇಹಿತರ ತಂಡದೊಂದಿಗೆ ಮಾಲ್ವಣ್‌ನ ವಾಯರಿ ವ್ಯಾಪ್ತಿಯ ರೆಸಾರ್ಟ್‌ಗೆ ಜೂನ್ 20 ರಂದು ಪ್ರವಾಸಕ್ಕೆ ಬಂದಿದ್ದನು. ದುರಂತ ಸಂಭವಿಸುವ ಕೆಲವೇ ಕ್ಷಣಗಳ ಮುನ್ನ ಇಡೀ ಸ್ನೇಹಿತರ ಬಳಗ ಈಜುಕೊಳದ ಪಕ್ಕದಲ್ಲಿ ಅತ್ಯಂತ ಸಡಗರದಿಂದ ಡ್ಯಾನ್ಸ್ ಮಾಡುತ್ತಿದ್ದರು. ಈ ದೃಶ್ಯವನ್ನು ಆತನ ಸ್ನೇಹಿತರೊಬ್ಬರು ಮೊಬೈಲ್‌ನಲ್ಲಿ ರೆಕಾರ್ಡ್​ ಮಾಡುತ್ತಿದ್ದರು. ಈ ವೇಳೆ ಶ್ರೇಣಿಕ್ ಸುಮಾರು 8 ರಿಂದ 10 ಅಡಿ ಎತ್ತರದ ಗೋಡೆಯನ್ನು ಹತ್ತಿ, ಅಲ್ಲಿಂದ ನೇರವಾಗಿ ಈಜುಕೊಳಕ್ಕೆ ತಲೆಕೆಳಗಾಗಿ ಡೈವ್ ಮಾಡಿದ್ದಾನೆ.

ಇಲ್ಲಿದೆ ನೋಡಿ ವಿಡಿಯೋ:

ಶ್ರೇಣಿಕ್ ಡೈವ್ ಮಾಡಿದ ಈಜುಕೊಳದ ಆ ಭಾಗ ಕೇವಲ 4 ಅಡಿ ಮಾತ್ರ ಆಳವಿತ್ತು ಹಾಗೂ ಅದನ್ನು ಮಕ್ಕಳಿಗಾಗಿ ಮೀಸಲಿಡಲಾಗಿತ್ತು. ಅತಿಯಾದ ಎತ್ತರ ಮತ್ತು ತೀವ್ರ ವೇಗದಿಂದ ದುಮುಕಿದ ಕಾರಣ ಶ್ರೇಣಿಕ್‌ನ ತಲೆ ನೇರವಾಗಿ ಈಜುಕೊಳದ ತಳಭಾಗದ ಕಾಂಕ್ರೀಟ್ ನೆಲಕ್ಕೆ ಅಪ್ಪಳಿಸಿದೆ. ತಲೆಯ ಮುಂಭಾಗಕ್ಕೆ ತೀವ್ರವಾದ ಪೆಟ್ಟು ಬಿದ್ದಿದ್ದರಿಂದ ಶ್ರೇಣಿಕ್ ಈಜುಕೊಳದ ನೀರಿನಲ್ಲೇ ಪ್ರಾಣಬಿಟ್ಟಿದ್ದಾನೆ. ತಕ್ಷಣವೇ ಆತನನ್ನು ನೀರಿನಿಂದ ಹೊರತೆಗೆದ ಸ್ನೇಹಿತರು ಮಾಲ್ವಣ್ ಗ್ರಾಮೀಣ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಪತ್ನಿ ಬಿಟ್ಟು ಹೋಗಿದ್ದಕ್ಕೆ ಇಡೀ ಪ್ರಪಂಚದ ಮೇಲೆ ಸೇಡು: ಮುಂಬೈನಲ್ಲಿ 15 ಸಾವಿರ ಜನರನ್ನು ಮುಗಿಸಲು ಇಲಿ ವಿಷದಿಂದಲೇ ಮಾತ್ರೆ ತಯಾರಿಸಿದ್ದ ಸೈಕೋ

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಮಾಲ್ವಣ್ ಪೊಲೀಸರು ಅಸ್ವಾಭಾವಿಕ ಮರಣಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವಪರೀಕ್ಷೆಯ ಪ್ರಕ್ರಿಯೆ ಮುಗಿದ ಬಳಿಕ ಯುವಕನ ಮೃತದೇಹವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಣೇಶ್ ಮಾನೆ ಅವರ ನೇತೃತ್ವದಲ್ಲಿ ಈ ಘಟನೆಯ ಮುಂದಿನ ತನಿಖೆ ನಡೆಯುತ್ತಿದ್ದು, ಪ್ರವಾಸಿಗರು ರೆಸಾರ್ಟ್‌ಗಳಲ್ಲಿ ಇಂತಹ ಸಾಹಸಗಳಿಗೆ ಕೈಹಾಕದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ