Lata Mangeshkar: ಕೊವಿಡ್​ನಿಂದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ

| Updated By: ರಾಜೇಶ್ ದುಗ್ಗುಮನೆ

Updated on: Jan 11, 2022 | 1:05 PM

Lata Mangeshkar Health: ಕೊರೊನಾ ಸೋಂಕಿನಿಂದ ಭಾರತದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Lata Mangeshkar: ಕೊವಿಡ್​ನಿಂದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ
ಲತಾ ಮಂಗೇಶ್ಕರ್
Follow us on

ಮುಂಬೈ: ಭಾರತದ ಸಂಗೀತ ಲೋಕದ ದಿಗ್ಗಜರಲ್ಲೊಬ್ಬರಾದ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಕೋವಿಡ್-19 ಸೋಂಕಿಗೆ ತುತ್ತಾಗಿದ್ದಾರೆ. ಕೊರೊನಾದಿಂದ ಅವರ ಆರೋಗ್ಯ ಭಾರೀ ಹದಗೆಟ್ಟ ಹಿನ್ನೆಲೆಯಲ್ಲಿ 92 ವರ್ಷದ ಲತಾ ಮಂಗೇಶ್ವರ್ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರು ಯಾವುದೇ ಮಾಹಿತಿ ನೀಡಿಲ್ಲ.

ಕೊರೊನಾ ಸೋಂಕಿನಿಂದ ಭಾರತದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಕೇಂದ್ರ ಸಚಿವರು, ರಾಜ್ಯಗಳ ಮುಖ್ಯಮಂತ್ರಿಯನ್ನೂ ಒಳಗೊಂಡು ಸೆಲೆಬ್ರಿಟಿಗಳು, ಗಣ್ಯರು ಕೂಡ ಕೊವಿಡ್ ಸೋಂಕಿಗೆ ಒಳಗಾಗಿದ್ದಾರೆ. ಲತಾ ಮಂಗೇಶ್ಕರ್ ಅವರಿಗೆ 2001ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗಿತ್ತು.

1929ರ ಸೆಪ್ಟೆಂಬರ್ 28ರಂದು ಜನಿಸಿದ ಲತಾ ಮಂಗೇಶ್ಕರ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಫ್ರಾನ್ಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ, ಆಫೀಸರ್ ಆಫ್ ದಿ ಲೀಜನ್ ಆಫ್ ಹಾನರ್, ಜೊತೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಅವರು 1948 ಮತ್ತು 1974 ರ ನಡುವೆ 25,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಗಿನ್ನೆಸ್ ವರ್ಲ್ಡ್​ ರೆಕಾರ್ಡ್ ಕೂಡ ಮಾಡಿದ್ದರು.

ಇದನ್ನೂ ಓದಿ: Rajnath Singh ಕೇಂದ್ರ ಸಚಿವ ರಾಜನಾಥ್ ಸಿಂಗ್‌ಗೆ ಕೊವಿಡ್-19 ಸೋಂಕು ದೃಢ

Basavaraj Bommai: ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್​

Published On - 12:33 pm, Tue, 11 January 22