AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sini Shetty: ಕರ್ನಾಟಕದ ಸಿನಿ ಶೆಟ್ಟಿಗೆ ಮಿಸ್ ಇಂಡಿಯಾ 2022 ಕಿರೀಟ

Femina Miss India World 2022: ಕರ್ನಾಟಕ ಮೂಲದ 21 ವರ್ಷದ ಸಿನಿ ಶೆಟ್ಟಿ(Sini Shetty) ಅವರು ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022(Femina Miss India World 2022) ಪ್ರಶಸ್ತಿ ಗೆದ್ದಿದ್ದಾರೆ. ರಾಜಸ್ಥಾನದ ರೂಬಲ್ ಶೇಖಾವತ್, ಫೆಮಿನಾ ಮಿಸ್ ಇಂಡಿಯಾ 2022 ರ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

Sini Shetty: ಕರ್ನಾಟಕದ ಸಿನಿ ಶೆಟ್ಟಿಗೆ ಮಿಸ್ ಇಂಡಿಯಾ 2022 ಕಿರೀಟ
ಕರ್ನಾಟಕದ ಸಿನಿ ಶೆಟ್ಟಿಗೆ ಮಿಸ್ ಇಂಡಿಯಾ 2022 ಕಿರೀಟ
TV9 Web
| Updated By: Digi Tech Desk|

Updated on:Jul 04, 2022 | 9:28 AM

Share

ಮುಂಬೈ: ಭಾನುವಾರ (ಜುಲೈ 03) ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ವಿಎಲ್‌ಸಿಸಿ (VLCC) ಫೆಮಿನಾ ಮಿಸ್ ಇಂಡಿಯಾದ ಗ್ರ್ಯಾಂಡ್ ಫಿನಾಲೆಯಲ್ಲಿ ಕರ್ನಾಟಕ ಮೂಲದ 21 ವರ್ಷದ ಸಿನಿ ಶೆಟ್ಟಿ (Sini Shetty) ಅವರು ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 (Femina Miss India World 2022) ಪ್ರಶಸ್ತಿ ಗೆದ್ದಿದ್ದಾರೆ. ರಾಜಸ್ಥಾನದ ರೂಬಲ್ ಶೇಖಾವತ್, ಫೆಮಿನಾ ಮಿಸ್ ಇಂಡಿಯಾ 2022 ರ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಮತ್ತು ಉತ್ತರ ಪ್ರದೇಶದ ಶಿನಾತಾ ಚೌಹಾನ್ ಅವರು ಫೆಮಿನಾ ಮಿಸ್ ಇಂಡಿಯಾ 2022 ಎರಡನೇ ರನ್ನರ್ ಅಪ್ ಆಗಿದ್ದಾರೆ.

ಫೆಮಿನಾ ಮಿಸ್ ಇಂಡಿಯಾ 2021 ಮಾನಸ ವಾರಣಾಸಿ ಮಿಸ್ ಇಂಡಿಯಾ 2022 ಸಿನಿ ಶೆಟ್ಟಿಗೆ ಕಿರೀಟವನ್ನು ಮುಡಿಗೇರಿಸಿದ್ದಾರೆ. ಸಿನಿ ಶೆಟ್ಟಿ, ರುಬಲ್ ಶೇಖಾವತ್, ಶಿನಾತಾ ಚೌಹಾಣ್, ಪ್ರಜ್ಞಾ ಅಯ್ಯಗರಿ ಮತ್ತು ಗಾರ್ಗಿ ನಂದಿ ಮೊದಲ ಐದು ಸ್ಥಾನಗಳಲ್ಲಿದ್ದಾರೆ. ನಟರಾದ ನೇಹಾ ಧೂಪಿಯಾ, ಡಿನೋ ಮೋರಿಯಾ ಮತ್ತು ಮಲೈಕಾ ಅರೋರಾ, ವಿನ್ಯಾಸಕರಾದ ರೋಹಿತ್ ಗಾಂಧಿ ಮತ್ತು ರಾಹುಲ್ ಖನ್ನಾ, ನೃತ್ಯ ನಿರ್ದೇಶಕ ಶಿಯಾಮಕ್ ದಾವರ್ ಮತ್ತು ಮಾಜಿ ಕ್ರಿಕೆಟಿಗ ಮಿಥಾಲಿ ರಾಜ್ ಫಿನಾಲೆಯ ತೀರ್ಪುಗಾರರ ಸಮಿತಿಯ ಭಾಗವಾಗಿದ್ದರು. ಇದನ್ನೂ ಓದಿ: Sai Pallavi: ‘ವಿರಾಟ ಪರ್ವಂ’ ಬೆನ್ನಲ್ಲೇ ರಿಲೀಸ್​ ಆಗ್ತಿದೆ ಸಾಯಿ ಪಲ್ಲವಿ ಹೊಸ ಚಿತ್ರ; ಜುಲೈ 15ಕ್ಕೆ ‘ಗಾರ್ಗಿ’ ಬಿಡುಗಡೆ

ಸಿನಿ ಶೆಟ್ಟಿ ಯಾರು? ಸಿನಿ ಶೆಟ್ಟಿ ಮುಂಬೈನಲ್ಲಿ ಜನಿಸಿದರು. ಆದರೆ ಕರ್ನಾಟಕ ಮೂಲದವರು ಮತ್ತು ಪ್ರಸ್ತುತ ಚಾರ್ಟರ್ಡ್ ಫೈನಾನ್ಷಿಯಲ್ ಅನಾಲಿಸ್ಟ್ (ಸಿಎಫ್‌ಎ) ವೃತ್ತಿಪರ ಕೋರ್ಸ್ ಮಾಡುತ್ತಿದ್ದಾರೆ. ಸಿನಿ ಶೆಟ್ಟಿ ನೃತ್ಯಗಾರ್ತಿ ಕೂಡ. ತಮ್ಮ ನಾಲ್ಕನೇ ವಯಸ್ಸಿನಲ್ಲಿ ನೃತ್ಯ ಮಾಡಲು ಪ್ರಾರಂಭಿಸಿ ಹದಿನಾಲ್ಕು ವರ್ಷದವಳಿದ್ದಾಗ ತನ್ನ ಅರಂಗೇತ್ರಂ ಮತ್ತು ಭರತನಾಟ್ಯವನ್ನು ಪೂರ್ಣಗೊಳಿಸಿದರು. ಇನ್ನು ಮಿಸ್ ಇಂಡಿಯಾ 2022 ರನ್ನರ್ ಅಪ್ ರುಬಲ್ ಶೇಖಾವತ್ ಅವರು ನೃತ್ಯ, ನಟನೆ, ಚಿತ್ರಕಲೆಯಂತಹ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದಾರೆ ಮತ್ತು ಬ್ಯಾಡ್ಮಿಂಟನ್ ಆಡಲು ಇಷ್ಟಪಡುತ್ತಾರೆ.

Published On - 8:03 am, Mon, 4 July 22