ಎಸ್‌ಐಆರ್ ವಿವಾದ; ಚುನಾವಣಾ ಆಯುಕ್ತರಿಗೆ 48 ಪ್ರಶ್ನೆ ಕೇಳಲು ಸುಪ್ರೀಂ ಕೋರ್ಟ್ ಅನುಮತಿ ಕೋರಿದ ಇಂಡಿಯ ಮೈತ್ರಿಕೂಟ
ಭಾರತದಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದ ವಿವಾದವು ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅಫಿಡವಿಟ್ ಸಲ್ಲಿಸಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳನ್ನು ಖುದ್ದಾಗಿ ಪ್ರಶ್ನಿಸಲು ಅನುಮತಿ ಕೋರಿದ್ದಾರೆ. ಇದಕ್ಕಾಗಿ ವಿರೋಧ ಪಕ್ಷಗಳು ಸಿದ್ಧಪಡಿಸಿರುವ 48 ಪ್ರಶ್ನೆಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ನವದೆಹಲಿ, ನವೆಂಬರ್ 16: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ಇಂಡಿಯ ಮೈತ್ರಿಕೂಟದ ನಾಯಕರು ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅಫಿಡವಿಟ್ ಸಲ್ಲಿಸಿದ್ದಾರೆ. ನಿಗದಿತ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಸಲ್ಲಿಸಲಾದ ಈ ಅಫಿಡವಿಟ್‌ನಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಇಬ್ಬರು ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯೋಗದ ಐಟಿ ವಿಭಾಗದ ಮಹಾನಿರ್ದೇಶಕರನ್ನು ಖುದ್ದಾಗಿ ಪ್ರಶ್ನಿಸಲು ವಿರೋಧ ಪಕ್ಷಗಳ ನಾಯಕರು ಅನುಮತಿ ಕೋರಿದ್ದಾರೆ. ಇದಕ್ಕಾಗಿ ಭಾರತೀಯ ಚುನಾವಣಾ ಆಯೋಗಕ್ಕೆ ಕೇಳಲು 48 ಪ್ರಶ್ನೆಗಳ ಪಟ್ಟಿಯನ್ನು ಅವರು ಸಿದ್ಧಪಡಿಸಿದ್ದಾರೆ.
‘ಮತ ಕಳ್ಳತನ’ ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ಎತ್ತಲಾಗಿರುವ ಪ್ರಮುಖ ಪ್ರಶ್ನೆಗಳಿಗೆ ಉತ್ತರಿಸುವಲ್ಲಿ ಚುನಾವಣಾ ಆಯೋಗದ ಅಫಿಡವಿಟ್ ವಿಫಲವಾಗಿದೆ ಎಂದು ‘ಇಂಡಿಯ’ ಮೈತ್ರಿಕೂಟವು ತನ್ನ ಅಫಿಡವಿಟ್‌ನಲ್ಲಿ ಆರೋಪಿಸಿದೆ.
The Election Commission of India’s affidavit in the Supreme Court has not answered a single question raised on Vote Chori.
INDIA Alliance leaders have now sought the Supreme Court’s nod for an interrogatory to the ECI including the CEC and two Election Commissioners personally and the Director General of IT for the huge lapses in SIR which have paved the way for Vote Chori.
A list of 48 questions that Election Commissioners of India must answer has been submitted, some of which include:
👉 On how many decisions did the other two Election Commissioners disagree with the CEC? 👉 Who decided to conduct a nationwide SIR? 👉 Who decided to change Form 6? 👉 Who decided to centralise ERONET and ECINET and centrally control access to voter rolls?
🔹Here are the 48 questions👇
— Congress (@INCIndia) November 16, 2026
ಇಂಡಿಯಾ ಮೈತ್ರಿಕೂಟದ ಪ್ರಶ್ನೆಗಳೇನು?:
ಮತದಾರರ ಪಟ್ಟಿ ಪರಿಷ್ಕರಣೆಗೆ (SIR) ಮೊದಲು ಆದೇಶ ನೀಡಿದವರು ಯಾರು?, ಮತದಾರರ ಪಟ್ಟಿಯ ಪರಿಷ್ಕರಣೆಯ ಮಾನದಂಡಗಳೇನು? ‘ಮತ ಕಳ್ಳತನ’ ಆರೋಪಗಳ ಹಿನ್ನೆಲೆಯೇನು? ಎಂಬುದನ್ನು ಒಳಗೊಂಡಂತೆ ಒಟ್ಟು 48 ಪ್ರಶ್ನೆಗಳನ್ನು ವಿರೋಧ ಪಕ್ಷಗಳ ನಾಯಕರು ಸಿದ್ಧಪಡಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಇತರ ಇಬ್ಬರು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಹಾಗೂ ಚುನಾವಣಾ ಆಯೋಗದ ಐಟಿ ವಿಭಾಗದ ಮಹಾನಿರ್ದೇಶಕರನ್ನು ಪ್ರಶ್ನಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಲಾಗಿದೆ.
ಇದನ್ನೂ ಓದಿ: ಎಸ್ಐಆರ್ಗೂ ಮೊದಲಿನ ಹಳೆ ಮತದಾರರ ಪಟ್ಟಿಯಲ್ಲೇ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ಗೆ ರಾಜ್ಯ ಚುನಾವಣಾ ಆಯೋಗ ಮನವಿ!
ಚುನಾವಣಾ ಆಯೋಗವು ಈ ಹಿಂದೆ ಸಲ್ಲಿಸಿರುವ ಪ್ರತಿ-ಅಫಿಡವಿಟ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಪಾರದರ್ಶಕತೆಯ ಕುರಿತು ಎತ್ತಲಾಗಿರುವ ಗಂಭೀರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿಲ್ಲ ಎಂದು ‘ಇಂಡಿಯಾ’ ಮೈತ್ರಿಕೂಟ ಆರೋಪಿಸಿದೆ. ಅಲ್ಲದೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಇತರ ಆಯುಕ್ತರ ಸಹಮತವಿಲ್ಲದೆ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಮತ್ತು ಫಾರ್ಮ್ 6 ನಿಯಮಗಳಲ್ಲಿ ಬದಲಾವಣೆ ಮಾಡಿದ್ದಾರೆ ಎಂಬ ಆರೋಪವನ್ನೂ ವಿಪಕ್ಷಗಳು ಪುನರುಚ್ಚರಿಸಿವೆ.
ಸರ್ವಾನುಮತದ ನಿರ್ಧಾರ ಎಂದಿರುವ ಚುನಾವಣಾ ಆಯೋಗ:
ವಿರೋಧ ಪಕ್ಷಗಳ ಆರೋಪಗಳಿಗೆ ಈಗಾಗಲೇ ಸುಮಾರು 250 ಪುಟಗಳ ಅಫಿಡವಿಟ್ ಸಲ್ಲಿಸಿರುವ ಚುನಾವಣಾ ಆಯೋಗ ಮತ್ತು ಮೂವರು ಆಯುಕ್ತರು, ಎಸ್‌ಐಆರ್ ಪ್ರಕ್ರಿಯೆಯ ಎಲ್ಲಾ ಪ್ರಮುಖ ನಿರ್ಧಾರಗಳನ್ನು ಸರ್ವಾನುಮತದಿಂದಲೇ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಅನ್ವಯವಾಗುವ ಸಾಂವಿಧಾನಿಕ ಪ್ರಕ್ರಿಯೆಯ ಹೊರತಾಗಿ ಮುಖ್ಯ ಚುನಾವಣಾ ಆಯುಕ್ತರನ್ನು ಕರ್ತವ್ಯದಿಂದ ತಡೆಯಲು ಅಥವಾ ಪದಚ್ಯುತಗೊಳಿಸಲು ಸಾಧ್ಯವಿಲ್ಲ ಎಂದೂ ಆಯೋಗ ತಿಳಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:03 pm, Mon, 16 November 26
