AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಲಡ್ಡುವಿನ ಕಲಬೆರಕೆ ಆಗಿದೆ ಎಂಬುದಕ್ಕೆ ಸಾಕ್ಷಿ ನೀಡಿದ ಎಸ್‌ಐಟಿ! ನಾಲ್ವರ ಬಂಧನ

ಭಾರಿ ವಿವಾದವನ್ನು ಸೃಷ್ಟಿಸಿದ ತಿರಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ಆರೋಪಕ್ಕೆ ಬಲವಾದ ಸಾಕ್ಷಿಯನ್ನು ಎಸ್​​ಐಟಿ ನೀಡಿದೆ.  ಇದರ ಇದರ ಜತೆಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬದರ ಬಗ್ಗೆ ಸಿಬಿಐ ತನಿಖೆಯನ್ನು ನಡೆಸಿ ವರದಿಯನ್ನು ನೀಡಿದೆ.  ಇದೀಗ ಮೂರು ಡೈರಿಗಳ ವ್ಯಕ್ತಿಯನ್ನು ಬಂಧಿಸಲಾಗಿದೆ. ಇದರಲ್ಲಿ ಅಕ್ರಮ ದಾಖಲೆಗಳನ್ನು ನೀಡಿ ಟಿಟಿಡಿಗೆ ವಂಚನೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಷ್ಟಕ್ಕೂ ಎಸ್​​ಐಟಿ ಹಾಗೂ ಸಿಬಿಐ ಅಧಿಕಾರಿಗಳು ನೀಡಿದ ಸಾಕ್ಷಿಗಳೇನು. ತನಿಖಾ ವರದಿಯಲ್ಲಿ ಏನಿದೆ? ಈ ಬಗ್ಗೆ ಇಲ್ಲಿದೆ ನೋಡಿ. 

ತಿರುಪತಿ ಲಡ್ಡುವಿನ ಕಲಬೆರಕೆ ಆಗಿದೆ ಎಂಬುದಕ್ಕೆ ಸಾಕ್ಷಿ ನೀಡಿದ ಎಸ್‌ಐಟಿ! ನಾಲ್ವರ ಬಂಧನ
ಸಾಂದರ್ಭಿ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Feb 10, 2025 | 12:25 PM

Share

ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಮಾಡಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ನೇತೃತ್ವದ ವಿಶೇಷ ತನಿಖಾ ತಂಡವು ನಾಲ್ವರನ್ನು ಬಂಧಿಸಿದೆ. ಬಂಧಿತ ಆರೋಪಿಗಳನ್ನು ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೋಮಿಲ್ ಜೈನ್, ವೈಷ್ಣವಿ ಡೈರಿಯ ಅಪೂರ್ವ್ ಚಾವ್ಡಾ ಮತ್ತು ಎಆರ್ ಡೈರಿಯ ರಾಜು ರಾಜಶೇಖರನ್ ಎಂದು ಗುರುತಿಸಲಾಗಿದೆ. ನಾಲ್ವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರ ಹೇಳಿದ್ದಾರೆ. ಬಿಪಿನ್ ಜೈನ್ ಮತ್ತು ಪೋಮಿ ಜೈನ್ ಭೋಲೆ ಬಾಬಾ ಡೈರಿ ಹಾಗೂ ಅಪೂರ್ವ್ ಚಾವ್ಡಾ ವೈಷ್ಣವಿ ಡೈರಿಯೊಂದಿಗೆ ಸಂಬಂಧ ಹೊಂದಿದ್ದಾರೆ ಹಾಗೂ ರಾಜಶೇಖರನ್ ಎಂಬ ವ್ಯಕ್ತಿ ಎ.ಆರ್. ಡೈರಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗಿದೆ.

ಟೆಂಡರ್ ಪಡೆಯುವಲ್ಲಿ ವಂಚನೆ

ಮೂಲಗಳ ಪ್ರಕಾರ, ಎಸ್‌ಐಟಿ ತನಿಖೆಯು ತುಪ್ಪ ಪೂರೈಕೆಯ ಪ್ರತಿಯೊಂದು ಹಂತದಲ್ಲೂ ಅಕ್ರಮಗಳು ನಡೆದಿದೆ. ಈ ಕಾರಣಕ್ಕಾಗಿಯೇ ಬಂಧಿಸಲಾಗಿದೆ. ದೇವಸ್ಥಾನಕ್ಕೆ ತುಪ್ಪ ಪೂರೈಸಲು ವೈಷ್ಣವಿ ಡೈರಿ ಅಧಿಕಾರಿಗಳು ಎಆರ್ ಡೈರಿಯ ಹೆಸರಿನಲ್ಲಿ ಟೆಂಡರ್‌ಗಳನ್ನು ಪಡೆದುಕೊಂಡಿದ್ದಾರೆ. ಇದರ ಟೆಂಡರ್ ಪಡೆಯಲು ನಕಲಿ ದಾಖಲೆಗಳನ್ನು ರಚಿಸುವಲ್ಲಿ ಭಾಗಿಯಾಗಿದ್ದಾರೆ.

ಐದು ಸದಸ್ಯರ ಎಸ್‌ಐಟಿ ರಚನೆ

ತಿರುಮಲ ತಿರುಪತಿ ದೇವಾಲಯ ಮಂಡಳಿಯ ಬೇಡಿಕೆಯನ್ನು ಪೂರೈಸುವ ಸಾಮರ್ಥ್ಯವನ್ನು ಭೋಲೆ ಬಾಬಾ ಡೈರಿ ಹೊಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಭೋಲೆ ಬಾಬಾ ಡೈರಿಯಿಂದ ತುಪ್ಪವನ್ನು ಖರೀದಿಸಲಾಗಿದೆ ಎಂದು ವೈಷ್ಣವಿ ಡೈರಿ ಸುಳ್ಳು ಹೇಳಿಕೊಂಡಿದೆ ಎಂದು ಎಸ್‌ಐಟಿ ಬಹಿರಂಗಪಡಿಸಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನ ಬಳಕೆಯ ಆರೋಪದ ತನಿಖೆ ಮಾಡಲು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸಿಬಿಐ ಕಳೆದ ವರ್ಷ ನವೆಂಬರ್‌ನಲ್ಲಿ ಐದು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.

ಇದನ್ನೂ ಓದಿ: ಹಿಂದೂ ಧಾರ್ಮಿಕ ಪದ್ಧತಿಗಳನ್ನು ಪಾಲಿಸದ 18 ನೌಕರರ ವಿರುದ್ಧ ಕ್ರಮ ಕೈಗೊಂಡ ಟಿಟಿಡಿ

ಸಿಬಿಐ ಮೇಲ್ವಿಚಾರಣೆಯಲ್ಲಿ ತನಿಖೆ

ಈ ತಂಡದಲ್ಲಿ ಕೇಂದ್ರ ಸಂಸ್ಥೆಯ ಇಬ್ಬರು ಅಧಿಕಾರಿಗಳು, ಆಂಧ್ರಪ್ರದೇಶ ಪೊಲೀಸ್‌ನ ಇಬ್ಬರು ಅಧಿಕಾರಿಗಳು ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಒಬ್ಬ ಅಧಿಕಾರಿ ಇದ್ದಾರೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ವೈಎಸ್‌ಆರ್‌ಸಿಪಿ (ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ) ರಾಜ್ಯಸಭಾ ಸದಸ್ಯ ವೈ ವಿ ಸುಬ್ಬಾ ರೆಡ್ಡಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನಂತರ, ಸುಪ್ರೀಂ ಕೋರ್ಟ್ ಕಳೆದ ವರ್ಷ ಅಕ್ಟೋಬರ್ 4 ರಂದು ತನ್ನ ಆದೇಶದಲ್ಲಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿದ ಆರೋಪವನ್ನು ಎಸ್‌ಐಟಿ ತನಿಖೆ ನಡೆಸಲಿದೆ ಮತ್ತು ಸಿಬಿಐ ನಿರ್ದೇಶಕರು ಅದನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಹೇಳಿತ್ತು.

ಆಂಧ್ರಪ್ರದೇಶದ ಹಿಂದಿನ ವೈ ಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ನಾಯ್ಡು ಅವರ ಈ ಹೇಳಿಕೆ ದೊಡ್ಡ ರಾಜಕೀಯ ವಿವಾದವನ್ನು ಸೃಷ್ಟಿಸಿತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ