ತಿರುಪತಿ ಲಡ್ಡು ಕಲಬೆರಕೆ ಪ್ರಕರಣ; ಎಸ್‌ಐಟಿ ತನಿಖೆ ತಾತ್ಕಾಲಿಕವಾಗಿ ಸ್ಥಗಿತ: ಆಂಧ್ರ ಡಿಜಿಪಿ

"ಮೊದಲು ಅವರು (ಎಸ್‌ಐಟಿ) ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಬೇಕು, ಅದನ್ನು ಅಧ್ಯಯನ ಮಾಡಬೇಕು ಮತ್ತು ಎಲ್ಲಾ ಮಾಹಿತಿಯನ್ನು ತೆಗೆದುಕೊಳ್ಳಬೇಕು, ಆದರೆ ಈ ಮಧ್ಯೆ, ಸುಪ್ರೀಂಕೋರ್ಟ್‌ನಿಂದ ಆದೇಶ ಬಂದಿದೆ ಮತ್ತು ಅದಕ್ಕೆ ಅನುಗುಣವಾಗಿ ನಾವು ಅದನ್ನು (ತನಿಖೆ) ನಿಲ್ಲಿಸಿದ್ದೇವೆ" ಎಂದು ಆಂಧ್ರದ ಉನ್ನತ ಪೊಲೀಸ್ ಅಧಿಕಾರಿ ದ್ವಾರಕಾ ತಿರುಮಲ ರಾವ್ ಹೇಳಿದ್ದಾರೆ.

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ; ಎಸ್‌ಐಟಿ ತನಿಖೆ ತಾತ್ಕಾಲಿಕವಾಗಿ ಸ್ಥಗಿತ: ಆಂಧ್ರ ಡಿಜಿಪಿ
ತಿರುಪತಿ ಲಡ್ಡು
Follow us
ರಶ್ಮಿ ಕಲ್ಲಕಟ್ಟ
|

Updated on: Oct 01, 2024 | 4:51 PM

ದೆಹಲಿ ಅಕ್ಟೋಬರ್ 01: ತಿರುಪತಿ ಲಡ್ಡುಗಳ ಕಲಬೆರಕೆ ಪ್ರಕರಣವು ಸುಪ್ರೀಂಕೋರ್ಟ್‌ನ ವ್ಯಾಪ್ತಿಯಲ್ಲಿರುವುದರಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರಪ್ರದೇಶ ಡಿಜಿಪಿ ಮಂಗಳವಾರ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. “ಮೊದಲು ಅವರು (ಎಸ್‌ಐಟಿ) ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಬೇಕು, ಅದನ್ನು ಅಧ್ಯಯನ ಮಾಡಬೇಕು ಮತ್ತು ಎಲ್ಲಾ ಮಾಹಿತಿಯನ್ನು ತೆಗೆದುಕೊಳ್ಳಬೇಕು, ಆದರೆ ಈ ಮಧ್ಯೆ, ಸುಪ್ರೀಂಕೋರ್ಟ್‌ನಿಂದ ಆದೇಶ ಬಂದಿದೆ ಮತ್ತು ಅದಕ್ಕೆ ಅನುಗುಣವಾಗಿ ನಾವು ಅದನ್ನು (ತನಿಖೆ) ನಿಲ್ಲಿಸಿದ್ದೇವೆ” ಎಂದು ಆಂಧ್ರದ ಉನ್ನತ ಪೊಲೀಸ್ ಅಧಿಕಾರಿ ದ್ವಾರಕಾ ತಿರುಮಲ ರಾವ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸೋಮವಾರ, ಎಸ್‌ಐಟಿ ತಿರುಮಲದ ಹಿಟ್ಟಿನ ಗಿರಣಿಯಲ್ಲಿ ತುಪ್ಪವನ್ನು ಸಂಗ್ರಹಿಸಿ, ಲಡ್ಡುಗಳನ್ನು ತಯಾರಿಸಲು ಬಳಸುವ ಮೊದಲು ಲ್ಯಾಬ್‌ನಲ್ಲಿ ಪರೀಕ್ಷಿಸಲಾಯಿತು.

‘ದೇವರುಗಳನ್ನು ರಾಜಕೀಯದಿಂದ ದೂರವಿಡಿ’: ಲಡ್ಡು ವಿವಾದ ಬಗ್ಗೆ ಸುಪ್ರೀಂಕೋರ್ಟ್

ಹಿಂದಿನ ಜಗನ್ ಮೋಹನ್ ರೆಡ್ಡಿ ಸರ್ಕಾರದಲ್ಲಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂಬ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬಹಿರಂಗ ಹೇಳಿಕೆಯನ್ನು ಸೋಮವಾರ, ಸುಪ್ರೀಂಕೋರ್ಟ್ ಗಮನಿಸಿದಾಗ, ರಾಜಕೀಯದಿಂದ ದೇವರುಗಳನ್ನು ದೂರವಿಡಬೇಕು ಎಂದಿದೆ.

“ಇದು ಬಳಸಿದ ತುಪ್ಪ ಅಲ್ಲ ಎಂಬುದು ವರದಿಯಿಂದ ಸ್ಪಷ್ಟವಾಗಿದೆ, ನಿಮಗೆ ಖಚಿತವಾಗದಿದ್ದರೆ, ನೀವು ಅದನ್ನು ಹೇಗೆ ಸಾರ್ವಜನಿಕವಾಗಿ ಹೇಳಿದ್ದೀರಿ?” ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠ ಹೇಳಿದೆ.

ಇದನ್ನೂ ಓದಿ: ಸೋನಮ್ ವಾಂಗ್‌ಚುಕ್​​ನ್ನು ಪೊಲೀಸ್ ಠಾಣೆಯಲ್ಲಿ ಭೇಟಿಯಾಗಲು ಬಿಡಲಿಲ್ಲ: ದೆಹಲಿ ಸಿಎಂ ಅತಿಶಿ

ಕೇವಲ ಪ್ರಸಾದ ವಿಚಾರವಲ್ಲ: ಆಂಧ್ರ ಉಪ ಮುಖ್ಯಮಂತ್ರಿ

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, “ಅವರು ಹಾಗೆ ಹೇಳಿದ್ದಾರೆಂದು ನಾನು ಭಾವಿಸುತ್ತೇನೆ, ಅವರು ಅದನ್ನು ಕಲಬೆರಕೆ ಮಾಡಿಲ್ಲ ಎಂದು ಅವರು ಎಂದಿಗೂ ಹೇಳಲಿಲ್ಲ. ಅವರ ಕೈಯಲ್ಲಿರುವ ಮಾಹಿತಿ ಆಧಾರದಲ್ಲಿ ಅದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು.

“ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಇದು ಕಲಬೆರಕೆಯಿಲ್ಲ ಎಂದು ಹೇಳಲಿಲ್ಲ, ನಮ್ಮ ಸರ್ಕಾರ ಅದನ್ನು ಮುಂದಕ್ಕೆ ಕೊಂಡೊಯ್ಯುತ್ತದೆ. ಕಳೆದ 5 ವರ್ಷಗಳಲ್ಲಿ ಯಾವ ರೀತಿಯ ಉಲ್ಲಂಘನೆಗಳು ಸಂಭವಿಸಿವೆ? ಇದು ಕೇವಲ ಪ್ರಸಾದದ ವಿಷಯವಲ್ಲ, ”ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!