ಬಿಜೆಪಿ ಸೇರಲು ಟಿಆರ್‌ಎಸ್ ಶಾಸಕರಿಗೆ ಹಣದ ಆಮಿಷ ಪ್ರಕರಣ: ಬಿ.ಎಲ್.ಸಂತೋಷ್‌ಗೆ ನೋಟಿಸ್
ಟಿಆರ್‌ಎಸ್ ಶಾಸಕರಿಗೆ ಹಣದ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಎಸ್‌ಐಟಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್‌ಗೆ ನೋಟಿಸ್ ಜಾರಿ ಮಾಡಿದೆ.
ಹೈದರಾಬಾದ್: ಬಿಜೆಪಿ (BJP) ಸೇರುವಂತೆ ಟಿಆರ್‌ಎಸ್ ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ಗೆ (BL Santosh) ಎಸ್‌ಐಟಿ ನೋಟಿಸ್ ನೀಡಿದೆ. ನವೆಂಬರ್ 21ರಂದು ಖುದ್ದು ಹಾಜರಾಗುವಂತೆ ಬಿ.ಎಲ್ ಸಂತೋಷ್‌ಗೆ ಹೈದರಾಬಾದ್‌ನ ಎಸ್‌ಐಟಿ ನೋಟಿಸ್‌ನಲ್ಲಿ ಸೂಚಿಸಿದ್ದು, ಹಾಜರಾಗದಿದ್ರೆ ಬಂಧನದ ಎಚ್ಚರಿಕೆ ಸಹ ನೀಡಿದೆ.
ಆಪರೇಷನ್ ಕಮಲ ಆರೋಪ: ಶಾಸಕ-ಸ್ವಾಮೀಜಿ ಆಡಿಯೋ ಲೀಕ್, ಬಿಎಲ್ ಸಂತೋಷ್ ಹೆಸರು ಪ್ರಸ್ತಾಪ
ಪ್ರಕರಣ ಹಿನ್ನೆಲೆ
ಅಕ್ಟೋಬರ್ 26ರಂದುತೆಲಂಗಾಣದ ಸೈಬರಾಬಾದ್ ಪೊಲೀಸರು ಅಝಿಜ್ ನಗರದ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಬರೋಬ್ಬರಿ 15 ಕೋಟಿ ರೂ. ಹಣವನ್ನು ಸೀಜ್ ಮಾಡಿದ್ದರು. ಅಲ್ಲದೇ ಆಪರೇಷನ್ ಕಮಲಕ್ಕೆ ಈ ಹಣ ತರಲಾಗಿತ್ತು ಎನ್ನಲಾಗಿತ್ತು. ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್‌ಎಸ್) ನಾಲ್ವರು ಶಾಸಕರಿಗೆ ಪಕ್ಷ ಬದಲಿಸಲು ಬಿಜೆಪಿ ಹಣದ ಆಮಿಷ ಒಡ್ಡಲಾಗಿತ್ತು. ಶಾಸಕರನ್ನು ಖರೀದಿಸಲು ತಂದಿದ್ದ ಎನ್ನಲಾದ 15 ಕೋಟಿ ರೂ. ಹಣದ ಜೊತೆಗೆ ಮೂವರನ್ನು ಪೊಲೀಸರ ಬಂಧಿಸಿದ್ದರು.
ಅಲ್ಲದೇ ಆಪರೇಷನ್ ಕಮಲದ ಬಗ್ಗೆ ಆಡಿಯೋವೊಂದು ವೈರಲ್ ಆಗಿತ್ತು. ಆ ಆಡಿಯೋದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರು ಪ್ರಸ್ತಾಪಿಸಲಾಗಿತ್ತು. ಈ ಪ್ರಕರಣ ತೆಲಂಗಾಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು.
ಶಾಸಕ ರೋಹಿತ್ ರೆಡ್ಡಿ ಹಾಗೂ ರಾಮಚಂದ್ರ ಭಾರತಿ ಸ್ವಾಮಿಜಿ ನಡುವಿನ ಸಂಭಾಷಣೆ ಆಡಿಯೋನಲ್ಲಿ, ಬಿ.ಎಲ್ ಸಂತೋಷ್ ಪರವಾಗಿ ಮಾತನಾಡುತ್ತಿದ್ದೇನೆ ಎಂದು ಸ್ವಾಮೀಜಿ ಹೇಳಿಕೊಂಡಿದ್ದರು. ನೀವು ಬಿಜೆಪಿ ಸೇರಿ. ನಮ್ಮ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ಸಂತೋಷ್ ಎಲ್ಲವನ್ನು ನೋಡಿಕೊಳ್ಳುತ್ತಾರೆ ಎಂದು ಟಿಆರ್ ಎಸ್ ಶಾಸಕನಿಗೆ ಆಮಿಷ ಒಡ್ಡಲಾಗಿತ್ತು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 10:48 pm, Fri, 18 November 22