ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: 14 ಜನರು ಸ್ಥಳದಲ್ಲೇ ಸಾವು

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: 14 ಜನರು ಸ್ಥಳದಲ್ಲೇ ಸಾವು

ಪ್ರತಾಪ್​ಗಢ: ಟ್ರಕ್​ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದರ ಪರಿಣಾಮದಿಂದಾಗಿ ಆರು ಮಕ್ಕಳು ಸೇರಿದಂತೆ 14 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರತಾಪ್​ಗಢ ಜಿಲ್ಲೆಯ ಪ್ರಯಾಗ್​ರಾಜ್​-ಲಖನೌ ಹೆದ್ದಾರಿಯಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಈ ಅವಘಡ ಸಂಭವಿಸಿದ್ದು, ಉತ್ತರ ಪ್ರದೇಶದ ಪ್ರತಾಪ್‌ಗಢದಿಂದ ಪ್ರಯಾಣ ಹೊರಟಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಕ್ಕಳು ಸೇರಿದಂತೆ ಹದಿನಾಲ್ಕು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದ ಭೀಕರತೆಗೆ ಕಾರ್​ ನಜ್ಜುಗುಜ್ಜಾಗಿ ಹೋಗಿದೆ. ಮಣಿಕಪುರ ಪೊಲೀಸ್ ಠಾಣೆ […]

pruthvi Shankar

|

Nov 20, 2020 | 10:08 AM

ಪ್ರತಾಪ್​ಗಢ: ಟ್ರಕ್​ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದರ ಪರಿಣಾಮದಿಂದಾಗಿ ಆರು ಮಕ್ಕಳು ಸೇರಿದಂತೆ 14 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರತಾಪ್​ಗಢ ಜಿಲ್ಲೆಯ ಪ್ರಯಾಗ್​ರಾಜ್​-ಲಖನೌ ಹೆದ್ದಾರಿಯಲ್ಲಿ ನಡೆದಿದೆ.

ಗುರುವಾರ ತಡರಾತ್ರಿ ಈ ಅವಘಡ ಸಂಭವಿಸಿದ್ದು, ಉತ್ತರ ಪ್ರದೇಶದ ಪ್ರತಾಪ್‌ಗಢದಿಂದ ಪ್ರಯಾಣ ಹೊರಟಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಕ್ಕಳು ಸೇರಿದಂತೆ ಹದಿನಾಲ್ಕು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದ ಭೀಕರತೆಗೆ ಕಾರ್​ ನಜ್ಜುಗುಜ್ಜಾಗಿ ಹೋಗಿದೆ.

ಮಣಿಕಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪ್ರಯಾಗ್​ರಾಜ್​- ಲಕ್ನೋ ಹೆದ್ದಾರಿಯಲ್ಲಿರುವ ಸ್ಥಳದಲ್ಲಿ ಈ ಅಪಘಾತ ಸಂಭವಿಸಿದ್ದು, ಮಣಿಕಪುರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತಪಟ್ಟವರನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಅಸ್ಪತ್ರೆಗೆ ರವಾನಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಸ್ತೆ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಹಿರಿಯ ಅಧಿಕಾರಿಗಳಿಗೆ ಆದಷ್ಟು ಬೇಗ ಸ್ಥಳ ತಲುಪಲು ಮತ್ತು ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುವಂತೆ ನಿರ್ದೇಶಿಸಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಕಾರು ಡಿಕ್ಕಿ, ಬೈಕ್ ಓಡಿಸುತ್ತಿದ್ದ ಮಹಿಳಾ ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು

Follow us on

Related Stories

Most Read Stories

Click on your DTH Provider to Add TV9 Kannada