Video: ನಾಸಿಕ್ನಲ್ಲಿ ಕಂದಕಕ್ಕೆ ಉರುಳಿದ ಕಾರು, ಆರು ಮಂದಿ ಸಾವು
ಮಹಾರಾಷ್ಟ್ರದ ನಾಸಿಕ್ನ ವಾನಿಯಲ್ಲಿರುವ ಗಣೇಶ್ ಪಾಯಿಂಟ್ ಬಳಿ ಕಾರೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪೂಜ್ಯ ಸಪ್ತಶೃಂಗಿ ದೇವಿ ದೇವಸ್ಥಾನಕ್ಕೆ ತೀರ್ಥಯಾತ್ರೆಯಿಂದ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನಲ್ಲಿದ್ದ ಆರು ಮಂದಿಯೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಠಿಣ ಪರ್ವತ ರಸ್ತೆಯಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರದ ನಾಸಿಕ್ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಸಿಕ್, ಡಿಸೆಂಬರ್ 08: ಮಹಾರಾಷ್ಟ್ರದ ನಾಸಿಕ್ನ ವಾನಿಯಲ್ಲಿರುವ ಗಣೇಶ್ ಪಾಯಿಂಟ್ ಬಳಿ ಕಾರೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪೂಜ್ಯ ಸಪ್ತಶೃಂಗಿ ದೇವಿ ದೇವಸ್ಥಾನಕ್ಕೆ ತೀರ್ಥಯಾತ್ರೆಯಿಂದ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನಲ್ಲಿದ್ದ ಆರು ಮಂದಿಯೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಠಿಣ ಪರ್ವತ ರಸ್ತೆಯಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರದ ನಾಸಿಕ್ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಪಘಾತದ ವರದಿಗಳ ನಂತರ ಸ್ಥಳೀಯ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಮೃತರನ್ನು ಹೊರತೆಗೆಯಲು ಸಾಕಷ್ಟು ಕಷ್ಟ ಪಡಬೇಕಾಯಿತು.ಮತ್ತೊಂದು ಘಟನೆಯಲ್ಲಿ, ಮಹಾರಾಷ್ಟ್ರದ ಲೋನಾವಾಲ ಗಿರಿಧಾಮದ ಲಯನ್ಸ್ ಪಾಯಿಂಟ್ ಬಳಿ ಕಾರು ಮತ್ತು ಮಿನಿ ಟ್ರಕ್ ನಡುವೆ ಸಂಭವಿಸಿದ ದುರಂತ ಡಿಕ್ಕಿಯಲ್ಲಿ ಗೋವಾದ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ