AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಜನರ ಮೇಲೆ ನಿಗೂಢ ಪ್ರಾಣಿಯಿಂದ ದಾಳಿ, 6 ಮಂದಿ ಸಾವು

ನಿಗೂಢ ಪ್ರಾಣಿಯೊಂದು ಜನರಿಗೆ ಕಚ್ಚಿದ್ದು, ಅದರಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಆಗ ಗ್ರಾಮದ 17 ಮಂದಿ ಮಲಗಿದ್ದರು, ಜನರು ಮಲಗಿದ್ದಾಗ ಪ್ರಾಣಿ ದಾಳಿ ಮಾಡಿದೆ. ಪ್ರಾಣಿ ಯಾವುದೆಂದು ಗುರುಸಲು ಸಾಧ್ಯವಾಗಲಿಲ್ಲ. ಲಿಂಬೈ ಗ್ರಾಮದ ಮೂರು ಸ್ಥಳಗಳಲ್ಲಿ ಆ ಪ್ರಾಣಿ ದಾಳಿ ನಡೆಸಿದೆ. ಒಬ್ಬರು ಅಂಗಳ ಗುಡಿಸುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿದೆ. ಬದುಕುಳಿದವರು ಆ ಪ್ರಾಣಿ ನಾಯಿಯಂತೆ ಕಾಣುತ್ತಿತ್ತು ಎಂದು ಹೇಳಿದ್ದಾರೆ.

ಮಧ್ಯಪ್ರದೇಶ: ಜನರ ಮೇಲೆ ನಿಗೂಢ ಪ್ರಾಣಿಯಿಂದ ದಾಳಿ, 6 ಮಂದಿ ಸಾವು
ಹಳ್ಳಿImage Credit source: NDTV
ನಯನಾ ರಾಜೀವ್
|

Updated on: Jun 04, 2025 | 9:32 AM

Share

ಬರ್ವಾನಿ, ಜೂನ್ 04: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ನಿಗೂಢ ಪ್ರಾಣಿ(Animal)ಯೊಂದು 6 ಮಂದಿಯನ್ನು ಹತ್ಯೆ ಮಾಡಿದೆ. ಸ್ಥಳೀಯರು ನೀಡಿರುವ ಮಾಹಿತಿ ಪ್ರಕಾರ ಅವರೆಲ್ಲರಿಗೂ ರೇಬಿಸ್ ಚುಚ್ಚುಮದ್ದನ್ನು ಚುಚ್ಚಲಾಯಿತು ಆದರೂ ಯಾರೂ ಬದುಕುಳಿಯಲಿಲ್ಲ. ಮೇ 5ರಂದು ಬೆಳಗಿನ ಜಾವ 1 ರಿಂದ 5 ಗಂಟೆ ನಡುವೆ ಈ ಘಟನೆ ನಡೆದಿದೆ.

ಆಗ ಗ್ರಾಮದ 17 ಮಂದಿ ಮಲಗಿದ್ದರು, ಜನರು ಮಲಗಿದ್ದಾಗ ಪ್ರಾಣಿ ದಾಳಿ ಮಾಡಿದೆ. ಪ್ರಾಣಿ ಯಾವುದೆಂದು ಗುರುತಿಸಲು ಸಾಧ್ಯವಾಗಲಿಲ್ಲ. ಲಿಂಬೈ ಗ್ರಾಮದ ಮೂರು ಸ್ಥಳಗಳಲ್ಲಿ ಆ ಪ್ರಾಣಿ ದಾಳಿ ನಡೆಸಿದೆ. ಒಬ್ಬರು ಅಂಗಳ ಗುಡಿಸುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿದೆ. ಬದುಕುಳಿದವರು ಆ ಪ್ರಾಣಿ ನಾಯಿಯಂತೆ ಕಾಣುತ್ತಿತ್ತು ಎಂದು ಹೇಳಿದ್ದಾರೆ.

ಬೊಗಳಲಿಲ್ಲ, ಗುರುಗುಟ್ಟಲೂ ಇಲ್ಲ ನೆರಳಿನಂತೆ ಬಂದು ಕಚ್ಚಿ ಕಣ್ಮರೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಎಲ್ಲಾ 17 ಮಂದಿಗೆ ಬರ್ವಾನಿ ಮತ್ತು ಇಂದೋರ್‌ನ ವೈದ್ಯಕೀಯ ಕೇಂದ್ರಗಳಲ್ಲಿ ರೇಬೀಸ್ ವಿರೋಧಿ ಲಸಿಕೆ ನೀಡಲಾಯಿತು. ಆದರೆ ಮೇ 23 ಮತ್ತು ಜೂನ್ 2 ರ ನಡುವೆ, ಅವರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ . ಅವರಲ್ಲಿ  ಇಬ್ಬರು ಮಹಿಳೆಯರು ಮತ್ತು 40 ರಿಂದ 60 ವರ್ಷ ವಯಸ್ಸಿನ ನಾಲ್ವರು ಪುರುಷರು.

ಇತ್ತೀಚಿನ ಪ್ರಕರಣವೆಂದರೆ 40 ವರ್ಷದ ಸುನಿಲ್, ಅವರು ವೈದ್ಯಕೀಯ ಸಲಹೆಯನ್ನು ಪಾಲಿಸದೆ ಇಂದೋರ್‌ನ ಎಂವೈ ಆಸ್ಪತ್ರೆಯಿಂದ ಹೊರಬಂದರು. ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ನಿಧನರಾದರು.

ಮತ್ತಷ್ಟು ಓದಿ: ಗೋವಾದಲ್ಲಿ ಬೀದಿ ನಾಯಿ ದಾಳಿಯಿಂದ 18 ತಿಂಗಳ ಹೆಣ್ಣು ಮಗು ಸಾವು

ವೈದ್ಯರು ಹಿಂದೆಂದೂ ಈ ರೀತಿ ಕಚ್ಚಿರುವ ಗುರುತನ್ನು ನೋಡಿಯೇ ಇಲ್ಲ ಎಂದಿದ್ದಾರೆ. ಎಲ್ಲಾ ವೈದ್ಯಕೀಯ ಶಿಷ್ಟಾಚಾರಗಳನ್ನು ಅನುಸರಿಸಲಾಗಿದೆ ಮತ್ತು ಲಸಿಕೆಯನ್ನು ಮಾರ್ಗಸೂಚಿಗಳ ಪ್ರಕಾರ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮೃತರ ಮೆದುಳಿನ ಅಂಗಾಂಶ, ಗಂಟಲಿನ ಬಯಾಪ್ಸಿಯನ್ನು ವಿವರವಾದ ವಿಶ್ಲೇಷಣೆಗಾಗಿ ದೆಹಲಿಗೆ ಕಳುಹಿಸಲಾಗಿದೆ. ಅವರೆಲ್ಲರ ಸಾವಿಗೆ ರೇಬಿಸ್ ಚುಚ್ಚುಮದ್ದು ಕಾರಣವೇ ಅದರ ಆ ಪ್ರಾಣಿ ಕಚ್ಚಿದ್ದು ಕಾರಣವೇ ಎಂಬುದು ತಿಳಿದುಬರಲಿದೆ.

ಅರಣ್ಯ ಇಲಾಖೆಯು ಪ್ರಾಣಿಗಾಗಿ ನಡೆಸಿದ ಹುಡುಕಾಟದಲ್ಲಿ ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಯಾವುದೇ ಹೆಜ್ಜೆಗುರುತುಗಳು, ದೃಶ್ಯಗಳು, ಭೌತಿಕ ಸುಳಿವುಗಳು ಇಲ್ಲ ಎಂದು ಡಿಎಎಫ್‌ಒ ಆಶಿಶ್ ಬನ್ಸೋದ್ ಹೇಳಿದ್ದಾರೆ.ಕಾಡು ಗ್ರಾಮದಿಂದ ಕೇವಲ 4.5 ಕಿ.ಮೀ ದೂರದಲ್ಲಿದೆ. ನೀವು ರಸ್ತೆಯಲ್ಲಿ ವಾಹನ ಚಲಾಯಿಸುವ ಮೂಲಕ ಅಂತಹ ಪ್ರಾಣಿಯನ್ನು ಹಿಡಿಯಲು ಸಾಧ್ಯವಿಲ್ಲ. ಡ್ರೋನ್‌ಗಳನ್ನು ಬಳಸಿ, ತಂಡಗಳ ಸಂಖ್ಯೆಯನ್ನು ಹೆಚ್ಚಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ಮೂರು ಸಾಕು ಪ್ರಾಣಿಗಳು ನಿಗೂಢ ಸಂದರ್ಭಗಳಲ್ಲಿ ಸಾವನ್ನಪ್ಪಿವೆ,ಅರಣ್ಯ ಇಲಾಖೆಯಿಂದ ಸಂತ್ರಸ್ತ ಕುಟುಂಬಗಳಿಗೆ ತಲಾ 8 ಲಕ್ಷ ರೂ.ಗಳ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ