AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕಂದರಾಬಾದ್‌ನಲ್ಲಿ ಅಗ್ನಿ ದುರಂತ: ಹೋಟೆಲ್​​ನಲ್ಲಿ ತಂಗಿದ್ದ 8 ಜನರ ಸಾವು, ಹಲವರಿಗೆ ಗಾಯ

ಹೈದರಾಬಾದ್​​ನ ರೂಬಿ ಹೋಟೆಲ್​​ನಲ್ಲಿ ಅಗ್ನಿ ಅವಘಡವಾಗಿದ್ದು ಮಹಿಳೆ ಸೇರಿದಂತೆ 8 ಜನರು ಮೃತಪಟ್ಟಿದ್ದಾರೆ. 10 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಕಂದರಾಬಾದ್‌ನಲ್ಲಿ ಅಗ್ನಿ ದುರಂತ: ಹೋಟೆಲ್​​ನಲ್ಲಿ ತಂಗಿದ್ದ 8 ಜನರ ಸಾವು, ಹಲವರಿಗೆ ಗಾಯ
ಸಿಕಂದರಾಬಾದ್‌ನಲ್ಲಿ ಅಗ್ನಿ ದುರಂತ
TV9 Web
| Edited By: ಆಯೇಷಾ ಬಾನು|

Updated on:Sep 13, 2022 | 9:09 AM

Share

ಹೈದರಾಬಾದ್: ಸೋಮವಾರ ತಡರಾತ್ರಿ ಹೈದರಾಬಾದ್​ನ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಕಂದರಾಬಾದ್‌ನಲ್ಲಿ ಅಗ್ನಿ ದುರಂತ ಸಂಭವಿಸಿದೆ. ರೂಬಿ ಹೋಟೆಲ್​​ನಲ್ಲಿ(Hotel Fire) ಆದ ಅಗ್ನಿ ಅವಘಡದಲ್ಲಿ 6 ಜನರು ಮೃತಪಟ್ಟಿದ್ದಾರೆ. ಹಾಗೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು, ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿ.ವಿ.ಆನಂದ್ ಅಪಘಾತ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಅಗ್ನಿ ದುರಂತದಲ್ಲಿ ಮಹಿಳೆ ಸೇರಿದಂತೆ 8 ಜನರು ಮೃತಪಟ್ಟಿದ್ದು 10 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಟ್ಟಡದ ಗ್ರೌಂಡ್​​ ಫ್ಲೋರ್​​ನಲ್ಲಿನ ಎಲೆಕ್ಟ್ರಿಕ್ ವೆಹಿಕಲ್ ಶೋರೂಂನಲ್ಲಿ ಬ್ಯಾಟರಿ ಸ್ಫೋಟಗೊಂಡು ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಈ ಪರಿಣಾಮ ಕಟ್ಟಡದ ಮೇಲಿನ ಮಹಡಿಯಲ್ಲಿದ್ದ ಹೋಟೆಲ್​​ನಲ್ಲೂ ಅವಘಡ ಸಂಭವಿಸಿದೆ. ಹೋಟೆಲ್​​ನಲ್ಲಿ 25-30 ಪ್ರವಾಸಿಗರು ತಂಗಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಪೈಕಿ 8 ಜನರು ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ರಕ್ಷಣಾ ಸಿಬ್ಬಂದಿ ಹಲವರನ್ನ ಹೋಟೆಲ್​​ನಿಂದ ರಕ್ಷಿಸುವಲ್ಲಿ ಸಫಲರಾಗಿದ್ದಾರೆ. 2 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ.

ಇನ್ನು ಅಧಿಕಾರಿಗಳು ಎಲ್ಲಾ ಮಹಡಿಗಳನ್ನು ಪರಿಶೀಲಿಸಿದ ನಂತರ, 8 ಜನರು ಮೃತಪಟ್ಟಿದ್ದಾರೆ. ಹಾಗೂ 5 ಮೃತದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದರು. ಗಾಯಾಳುಗಳನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಯಶೋದಾ ಆಸ್ಪತ್ರೆಯ ಹಿರಿಯ ಸಿಬ್ಬಂದಿ ತಿಳಿಸಿದ್ದಾರೆ.

ಕೆಲವು ಸ್ಥಳೀಯರು ಶೋರೂಮ್‌ನಿಂದ ಹೊಗೆ ಹೊರ ಬರುವುತ್ತಿರುವುದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಬಳಿಕ ಮಾರ್ಕೆಟ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಂಜನೇಯುಲು ತಮ್ಮ ಸಿಬ್ಬಂದಿಯೊಂದಿಗೆ ಹಾಗೂ ಕೆಲವು ಯುವಕರು ಪಕ್ಕದ ಹೋಟೆಲ್ ನಿಂದ ಕಟ್ಟಡದ ಮೇಲಿನ ಮಹಡಿಗೆ ತೆರಳಿ ಅವಘಡ ಸಂಭವಿಸಿದ ಹೋಟೆಲ್​ ಒಳಗೆ ಹೋಗಿದ್ದಾರೆ. ಅಲ್ಲಿ ಕಾರಿಡಾರ್‌ನಲ್ಲಿ ಕೆಲವು ಅತಿಥಿಗಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ. ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಯುವಕರು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ತಕ್ಷಣ ಕೆಲವರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.

ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

ಇನ್ನು ಸಿಕಂದರಾಬಾದ್​​ನಲ್ಲಿ ಹೋಟೆಲ್​​ನಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿ ಟ್ವಿಟರ್​​ನಲ್ಲಿ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:46 am, Tue, 13 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ