ಹೈದರಾಬಾದ್: ಸೋಮವಾರ ತಡರಾತ್ರಿ ಹೈದರಾಬಾದ್ನ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಕಂದರಾಬಾದ್‌ನಲ್ಲಿ ಅಗ್ನಿ ದುರಂತ ಸಂಭವಿಸಿದೆ. ರೂಬಿ ಹೋಟೆಲ್ನಲ್ಲಿ(Hotel Fire) ಆದ ಅಗ್ನಿ ಅವಘಡದಲ್ಲಿ 6 ಜನರು ಮೃತಪಟ್ಟಿದ್ದಾರೆ. ಹಾಗೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು, ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿ.ವಿ.ಆನಂದ್ ಅಪಘಾತ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಅಗ್ನಿ ದುರಂತದಲ್ಲಿ ಮಹಿಳೆ ಸೇರಿದಂತೆ 8 ಜನರು ಮೃತಪಟ್ಟಿದ್ದು 10 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಟ್ಟಡದ ಗ್ರೌಂಡ್ ಫ್ಲೋರ್ನಲ್ಲಿನ ಎಲೆಕ್ಟ್ರಿಕ್ ವೆಹಿಕಲ್ ಶೋರೂಂನಲ್ಲಿ ಬ್ಯಾಟರಿ ಸ್ಫೋಟಗೊಂಡು ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಈ ಪರಿಣಾಮ ಕಟ್ಟಡದ ಮೇಲಿನ ಮಹಡಿಯಲ್ಲಿದ್ದ ಹೋಟೆಲ್ನಲ್ಲೂ ಅವಘಡ ಸಂಭವಿಸಿದೆ. ಹೋಟೆಲ್ನಲ್ಲಿ 25-30 ಪ್ರವಾಸಿಗರು ತಂಗಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಪೈಕಿ 8 ಜನರು ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ರಕ್ಷಣಾ ಸಿಬ್ಬಂದಿ ಹಲವರನ್ನ ಹೋಟೆಲ್ನಿಂದ ರಕ್ಷಿಸುವಲ್ಲಿ ಸಫಲರಾಗಿದ್ದಾರೆ. 2 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ.
ಇನ್ನು ಅಧಿಕಾರಿಗಳು ಎಲ್ಲಾ ಮಹಡಿಗಳನ್ನು ಪರಿಶೀಲಿಸಿದ ನಂತರ, 8 ಜನರು ಮೃತಪಟ್ಟಿದ್ದಾರೆ. ಹಾಗೂ 5 ಮೃತದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದರು. ಗಾಯಾಳುಗಳನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಯಶೋದಾ ಆಸ್ಪತ್ರೆಯ ಹಿರಿಯ ಸಿಬ್ಬಂದಿ ತಿಳಿಸಿದ್ದಾರೆ.
ಕೆಲವು ಸ್ಥಳೀಯರು ಶೋರೂಮ್‌ನಿಂದ ಹೊಗೆ ಹೊರ ಬರುವುತ್ತಿರುವುದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಬಳಿಕ ಮಾರ್ಕೆಟ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಂಜನೇಯುಲು ತಮ್ಮ ಸಿಬ್ಬಂದಿಯೊಂದಿಗೆ ಹಾಗೂ ಕೆಲವು ಯುವಕರು ಪಕ್ಕದ ಹೋಟೆಲ್ ನಿಂದ ಕಟ್ಟಡದ ಮೇಲಿನ ಮಹಡಿಗೆ ತೆರಳಿ ಅವಘಡ ಸಂಭವಿಸಿದ ಹೋಟೆಲ್ ಒಳಗೆ ಹೋಗಿದ್ದಾರೆ. ಅಲ್ಲಿ ಕಾರಿಡಾರ್‌ನಲ್ಲಿ ಕೆಲವು ಅತಿಥಿಗಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ. ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಯುವಕರು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ತಕ್ಷಣ ಕೆಲವರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.
ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ
ಇನ್ನು ಸಿಕಂದರಾಬಾದ್‌ನಲ್ಲಿ ಹೋಟೆಲ್ನಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿ ಟ್ವಿಟರ್ನಲ್ಲಿ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
Saddened by the loss of lives due to a fire in Secunderabad, Telangana. Condolences to the bereaved families. May the injured recover soon. Rs. 2 lakh from PMNRF would be paid to the next of kin of each deceased. Rs. 50,000 would be paid to the injured: PM @narendramodi
— PMO India (@PMOIndia) September 13, 2022
ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 6:46 am, Tue, 13 September 22