ತೆಲಂಗಾಣದಲ್ಲಿ ಎನ್‌ಕೌಂಟರ್ 6 ನಕ್ಸಲರ ಹತ್ಯೆ, ಇಬ್ಬರು ಪೊಲೀಸರಿಗೆ ಗಾಯ
ತೆಲಂಗಾಣದಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 6 ಮಂದಿ ನಕ್ಸಲರು ಸಾವನ್ನಪ್ಪಿದ್ದು, ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ. ತೆಲಂಗಾಣದ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಗಾಯಗೊಂಡ ಇಬ್ಬರು ಭದ್ರತಾ ಸಿಬ್ಬಂದಿ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಛತ್ತೀಸ್‌ಗಢದಲ್ಲಿ 9 ನಕ್ಸಲರ ಹತ್ಯೆ ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 9 ನಕ್ಸಲರು ಹತರಾಗಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ ವಲಯದ ಐಜಿ ಸುಂದರರಾಜ್ ತಿಳಿಸಿದ್ದಾರೆ.
ಮತ್ತಷ್ಟು ಓದಿ: Naxal Encounter: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್; 9 ನಕ್ಸಲರ ಹತ್ಯೆ
ಗುಂಡಿನ ಚಕಮಕಿಯು ದೀರ್ಘ ಸಮಯ ನಡೆಯಿತು. ಸಮವಸ್ತ್ರಧಾರಿ ಒಂಬತ್ತು ನಕ್ಸಲರ ಶವಗಳು ಸ್ಥಳದಲ್ಲಿ ಸಿಕ್ಕಿವೆ. ಅಲ್ಲದೆ, ಎನ್‌ಕೌಂಟರ್ ಸ್ಥಳದಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ