Andhra Pradesh Accident ಆಟೋಗೆ ಲಾರಿ ಡಿಕ್ಕಿ, 6 ಕಾರ್ಮಿಕರು ಸ್ಥಳದಲ್ಲೇ ಸಾವು
ಆಟೋಗೆ ಲಾರಿ ಡಿಕ್ಕಿಯಾಗಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರದ ಕೃಷ್ಣಾ ಜಿಲ್ಲೆಯ ಗೊಲ್ಲಪಲ್ಲಿಯ ಬಳಿ ನಡೆದಿದೆ. ಇನ್ನು ಆಟೋದಲ್ಲಿದ್ದ 7 ಜನರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.
ಹೈದರಾಬಾದ್: ಆಟೋಗೆ ಲಾರಿ ಡಿಕ್ಕಿಯಾಗಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರದ ಕೃಷ್ಣಾ ಜಿಲ್ಲೆಯ ಗೊಲ್ಲಪಲ್ಲಿಯ ಬಳಿ ನಡೆದಿದೆ. ಇನ್ನು ಆಟೋದಲ್ಲಿದ್ದ 7 ಜನರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ವಿಜಯವಾಡದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆ ಹೋಗ್ತಿದ್ದಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಅಪಘಾತಕ್ಕೀಡಾದ ಆಟೋದಲ್ಲಿ ಒಟ್ಟು 14ಜನ ಕೂಲಿ ಕಾರ್ಮಿಕರು ಕೆಲಸಕ್ಕೆಂದು ಹೊರಟಿದ್ದರು. ಈ ವೇಳೆ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, 7ಜನರಿಗೆ ಗಾಯಗಳಾಗಿವೆ, ಇಬ್ಬರ ಸ್ಥಿತಿ ಗಂಭೀರವಾಗಿದೆ. ಇನ್ನು ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಹೆಚ್ಚಿನ ಮಾಹಿತಿ ಬರಬೇಕಿದೆ.
ಇದನ್ನೂ ಓದಿ: ಪ್ರತ್ಯೇಕ ಘಟನೆಯಲ್ಲಿ ನಾಲ್ವರ ದುರ್ಮರಣ: ಚಿತ್ರದುರ್ಗ, ವಿಜಯಪುರ, ಹಾಸನದಲ್ಲಿ ಅಪಘಾತ