Andhra Pradesh Accident ಆಟೋಗೆ ಲಾರಿ ಡಿಕ್ಕಿ, 6 ಕಾರ್ಮಿಕರು ಸ್ಥಳದಲ್ಲೇ ಸಾವು

ಆಟೋಗೆ ಲಾರಿ ಡಿಕ್ಕಿಯಾಗಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರದ ಕೃಷ್ಣಾ ಜಿಲ್ಲೆಯ ಗೊಲ್ಲಪಲ್ಲಿಯ ಬಳಿ ನಡೆದಿದೆ. ಇನ್ನು ಆಟೋದಲ್ಲಿದ್ದ 7 ಜನರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.

Andhra Pradesh Accident ಆಟೋಗೆ ಲಾರಿ ಡಿಕ್ಕಿ, 6 ಕಾರ್ಮಿಕರು ಸ್ಥಳದಲ್ಲೇ ಸಾವು
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜು
ಆಯೇಷಾ ಬಾನು

Updated on: Mar 14, 2021 | 10:21 AM

ಹೈದರಾಬಾದ್: ಆಟೋಗೆ ಲಾರಿ ಡಿಕ್ಕಿಯಾಗಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರದ ಕೃಷ್ಣಾ ಜಿಲ್ಲೆಯ ಗೊಲ್ಲಪಲ್ಲಿಯ ಬಳಿ ನಡೆದಿದೆ. ಇನ್ನು ಆಟೋದಲ್ಲಿದ್ದ 7 ಜನರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ವಿಜಯವಾಡದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆ ಹೋಗ್ತಿದ್ದಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಅಪಘಾತಕ್ಕೀಡಾದ ಆಟೋದಲ್ಲಿ‌ ಒಟ್ಟು 14ಜನ ಕೂಲಿ‌ ಕಾರ್ಮಿಕರು ಕೆಲಸಕ್ಕೆಂದು ಹೊರಟಿದ್ದರು. ಈ ವೇಳೆ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, 7ಜನರಿಗೆ ಗಾಯಗಳಾಗಿವೆ, ಇಬ್ಬರ ಸ್ಥಿತಿ ಗಂಭೀರವಾಗಿದೆ. ಇನ್ನು ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಹೆಚ್ಚಿನ ಮಾಹಿತಿ ಬರಬೇಕಿದೆ.

ಆಟೋಗೆ ಲಾರಿ ಡಿಕ್ಕಿ ಹೊಡೆದಿದ್ದು 6 ಕಾರ್ಮಿಕರು ಸ್ಥಳದಲ್ಲೇ ಸಾವು

ಇದನ್ನೂ ಓದಿ: ಪ್ರತ್ಯೇಕ ಘಟನೆಯಲ್ಲಿ ನಾಲ್ವರ ದುರ್ಮರಣ: ಚಿತ್ರದುರ್ಗ, ವಿಜಯಪುರ, ಹಾಸನದಲ್ಲಿ ಅಪಘಾತ

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us