AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಇಡಿ ಸ್ಫೋಟಿಸಿ ಭದ್ರತಾ ಸಿಬ್ಬಂದಿ ಹತ್ಯೆಗೆ ಸ್ಕೆಚ್​ ಹಾಕಿದ್ದ 6 ಮಂದಿ ನಕ್ಸಲರನ್ನು ಕೊಂದ ಪೊಲೀಸರು

ಮೃತಪಟ್ಟ ಆರು ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲ ಚೆರ್ಲಾ ಪ್ರದೇಶ ಸಮಿತಿಯವರು ಎಂದು ಹೇಳಲಾಗಿದ್ದು, ನಕ್ಸಲರ ಹಿರಿಯ ನಾಯಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಐಇಡಿ ಸ್ಫೋಟಿಸಿ ಭದ್ರತಾ ಸಿಬ್ಬಂದಿ ಹತ್ಯೆಗೆ ಸ್ಕೆಚ್​ ಹಾಕಿದ್ದ 6 ಮಂದಿ ನಕ್ಸಲರನ್ನು ಕೊಂದ ಪೊಲೀಸರು
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Dec 27, 2021 | 11:38 AM

Share

ಛತ್ತೀಸ್​ಗಢ್​: ತೆಲಂಗಾಣ ಮತ್ತು ಛತ್ತೀಸ್​ಗಢ್​  ಗಡಿ ಪ್ರದೇಶದ ಕಿಸ್ತಾರಾಮ್ ಪಿಎಸ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆರು ಮಂದಿ ನಕ್ಸಲರನ್ನು ಪೊಲೀಸರು ಹತ್ಯೆ (Naxals killed) ಮಾಡಿದ್ದಾರೆ. ಛತ್ತೀಸ್​ಗಢ್​ ಮತ್ತು ತೆಲಂಗಾಣ ಪೊಲೀಸರು ಹಾಗೂ ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು ಎಂದು ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಎಸ್​ಪಿ ಸುನಿಲ್​ ದತ್ತ ತಿಳಿಸಿದ್ದಾರೆ. ಸದ್ಯ ಸ್ಥಳದಲ್ಲಿ ಇನ್ನೂ ನಕ್ಸಲ್​ ವಿರೋಧಿ ಕಾರ್ಯಾಚರಣೆ ನಡೆಯುತ್ತಲೇ ಇದೆ ಎಂದು ಮೂಲಗಳು ತಿಳಿಸಿವೆ.

ಛತ್ತೀಸ್​ಗಢ್​​ನಲ್ಲಿ ನಕ್ಸಲ್​ರ ಕಾಟ ಯಾವಾಗಲೂ ಹೆಚ್ಚು. ಇಲ್ಲಿ ಅದೆಷ್ಟೋ ಮುಗ್ಧ ನಾಗರಿಕರು, ಪೊಲಿಸ್​, ರಕ್ಷಣಾ ಸಿಬ್ಬಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಇಲ್ಲಿ ಪದೇಪದೆ ನಕ್ಸಲರು ಮತ್ತು ರಕ್ಷಣಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ನಡೆಯುತ್ತಲೇ ಇರುತ್ತದೆ. ಹಾಗೇ ನಿನ್ನೆ ತೆಲಂಗಾಣ ಗ್ರೇ ಹೌಂಡ್ಸ್​ ಪೊಲೀಸರು ಮತ್ತು ನಕ್ಸಲರ ನಡುವೆ ಎನ್​ಕೌಂಟರ್​ ಶುರುವಾಗಿತ್ತು. ಮೊದಲು ಛತ್ತೀಸ್​ಗಢ್​​ನ ನಾರಾಯಣಪುರ ಜಿಲ್ಲೆಯಲ್ಲಿ ತೆಲಂಗಾಣ ಪೊಲೀಸರು ಎರಡು ಸುಧಾರಿತ ಸ್ಫೋಟಕ ಸಾಧಕ (IED)ಗಳನ್ನು ವಶಪಡಿಸಿಕೊಂಡರು. ಅದರ ಬೆನ್ನಲ್ಲೇ  ಆ್ಯಂಟಿ-ನಕ್ಸಲ್​ ಕಾರ್ಯಾಚರಣೆ ಪ್ರಾರಂಭವಾಗಿತ್ತು. ಅಂದಹಾಗೆ ನಕ್ಸಲರು ಈ ಐಇಡಿಯನ್ನು ಭದ್ರತಾ ಸಿಬ್ಬಂದಿಯನ್ನು ಟಾರ್ಗೆಟ್​ ಮಾಡಿಯೇ ಇಟ್ಟಿದ್ದರು ಎಂದು ಹೇಳಲಾಗಿದೆ.

ಮೃತಪಟ್ಟ ಆರು ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲ ಚೆರ್ಲಾ ಪ್ರದೇಶ ಸಮಿತಿಯವರು ಎಂದು ಹೇಳಲಾಗಿದ್ದು, ನಕ್ಸಲರ ಹಿರಿಯ ನಾಯಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ನಿನ್ನೆಯಿಂದಲೂ ನಕ್ಸಲರು ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದರು. ಐಇಡಿ ಸ್ಫೋಟಕ್ಕೂ ಮೊದಲು ಅವರ ಸಂಚಿನ ಸುಳಿವು ಸಿಕ್ಕಿದೆ. ಇಲ್ಲದೆ ಇದ್ದರೆ ಭದ್ರತಾ ಸಿಬ್ಬಂದಿ ಪ್ರಾಣಕ್ಕೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿತ್ತು ಎಂದು ಸುನಿಲ್​ ದತ್ತ ತಿಳಿಸಿದ್ದಾರೆ.

ಇದನ್ನೂ ಓದಿ: GST: ಹೊಸ ವರ್ಷಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್: ಜ. 1 ರಿಂದ ಓಲಾ, ಉಬರ್‌, ಸ್ವಿಗ್ಗಿ, ಜೊಮ್ಯಾಟೋ ಸೇವೆ ದುಬಾರಿ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್