AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಯುನಿಂದ ಬಿಜೆಪಿಗೆ ಆರು ಶಾಸಕರು; ನಿತೀಶ್​ ಕುಮಾರ್​ಗೆ ಭಾರಿ ಮುಖಭಂಗ

60 ಸದಸ್ಯರಿರುವ ಅರುಣಾಚಲ ಪ್ರದೇಶದಲ್ಲಿ ಜೆಡಿಯು 7 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ ಆರು ಶಾಸಕರು ಬಿಜೆಪಿ ಸೇರಿದ್ದಾರೆ. ಹೀಗಾಗಿ, ಪಕ್ಷಾಂತರ ಕಾಯ್ದೆ ಕೂಡ ಇದಕ್ಕೆ ಅನ್ವಯ ಆಗುವುದಿಲ್ಲ. ಪೀಪಲ್​ ಪಾರ್ಟಿ ಆಫ್​ ಅರುಣಾಚಲ ಪಕ್ಷದ ಬೆಂಬಲವೂ ಸೇರಿ ಬಿಜೆಪಿ ಈಗ 48 ಸದಸ್ಯ ಬಲವನ್ನು ಹೊಂದಿದಂತಾಗಿದೆ.

ಜೆಡಿಯುನಿಂದ ಬಿಜೆಪಿಗೆ ಆರು ಶಾಸಕರು; ನಿತೀಶ್​ ಕುಮಾರ್​ಗೆ ಭಾರಿ ಮುಖಭಂಗ
ಬಿಹಾರ ಸಿಎಂ ನಿತೀಶ್​ ಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Dec 25, 2020 | 4:14 PM

Share

ಪಾಟ್ನಾ: ಅರುಣಾಚಲ ಪ್ರದೇಶ ವಿಧಾನಸಭೆಯ 7 ಜೆಡಿಯು ಶಾಸಕರ ಪೈಕಿ ಆರು ಮಂದಿ ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ಗೆ ಭಾರೀ ಮುಖಭಂಗವಾಗಿದೆ.

60 ಸದಸ್ಯರಿರುವ ಅರುಣಾಚಲ ಪ್ರದೇಶದಲ್ಲಿ ಜೆಡಿಯು 7 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ ಆರು ಶಾಸಕರು ಬಿಜೆಪಿ ಸೇರಿದ್ದಾರೆ. ಹೀಗಾಗಿ, ಪಕ್ಷಾಂತರ ಕಾಯ್ದೆ ಕೂಡ ಇದಕ್ಕೆ ಅನ್ವಯ ಆಗುವುದಿಲ್ಲ. ಪೀಪಲ್​ ಪಾರ್ಟಿ ಆಫ್​ ಅರುಣಾಚಲ ಪಕ್ಷದ ಬೆಂಬಲವೂ ಸೇರಿ ಬಿಜೆಪಿ ಈಗ 48 ಸದಸ್ಯ ಬಲವನ್ನು ಹೊಂದಿದಂತಾಗಿದೆ.

ಹಯೇಂಗ್​ ಮಂಗ್​ಫಿ, ಜಿಕ್ಕೆ ತಕೊ, ಡೊಂಗ್ರು ಸಿಯೊಂಗ್ಜು, ತಲೇಮ್ ತಬೋಹ್, ಕಾಂಗ್ಗಾಂಗ್ ಟಕು ಮತ್ತು ಡೋರ್ಜಿ ವಾಂಗ್ಡಿ ಖರ್ಮಾ ಬಿಜೆಪಿ ಸೇರಿದ ಶಾಸಕರು. ಪಕ್ಷ ವಿರೋಧಿ ಕಾರ್ಯದಲ್ಲಿ ತೊಡಗಿದ ಆರೋಪದ ಮೇಲೆ ಮೂವರನ್ನು ಸಸ್ಪೆಂಡ್​ ಮಾಡಲಾಗಿತ್ತು ಮತ್ತು ನೋಟಿಸ್​ ಕೂಡ ನೀಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಮೆಚ್ಚಿ ಈ ಆರು ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಹೇಳಿದೆ.

ನಿತೀಶ್​ ಕುಮಾರ್​ ಅಸಮಾಧಾನ ಅರುಣಾಚಲ ರಾಜಕೀಯ ಬೆಳವಣಿಗೆಯಿಂದ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅಸಮಾಧಾನ ಹೊರ ಹಾಕಿದ್ದಾರೆ. ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಅರುಣಾಚಲ ಪ್ರದೇಶದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಬಿಜೆಪಿ (41) ನಂತರ ಅತಿ ಹೆಚ್ಚು ಸ್ಥಾನ ಗಳಿಸಿದ ಹೆಗ್ಗಳಿಕೆ ಜೆಡಿಯುನದ್ದಾಗಿತ್ತು. ಇನ್ನು, ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಜೆಡಿಯು ಸರ್ಕಾರ ರಚನೆ ಮಾಡಿದೆ. ಅರುಣಾಚಲದ ಈ ಬೆಳವಣಿಗೆ ಜೆಡಿಯುಗೆ ನುಂಗಲಾರದ ತುತ್ತಾಗಿದೆ.

ಬಿಹಾರದಲ್ಲಿ ಹೊಸ ರಾಜಕೀಯ ಸಂಚಲನ: ಎನ್​ಡಿಎ ಬಿಟ್ಟುಹೋಗಿದ್ದ ಉಪೇಂದ್ರ ಕುಶ್ವಾಹಾ ಜೊತೆ ನಿತೀಶ್​ ಚರ್ಚೆ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ