Himachal Politics: ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆ
ಹಿಮಾಚಲ ಪ್ರದೇಶದ ಬಂಡಾಯ ಶಾಸಕರಾದ ಸುಧೀರ್ ಶರ್ಮಾ, ರವಿ ಠಾಕೂರ್, ಇಂದರ್ ದತ್ ಲಖನ್‌ಪಾಲ್, ದೇವೇಂದ್ರ ಭುಟ್ಟೋ, ರಾಜೇಂದ್ರ ರಾಣಾ ಮತ್ತು ಚೈತನ್ಯ ಶರ್ಮಾ ಅವರು ಹಿಮಾಚಲ ಪ್ರದೇಶ ಬಿಜೆಪಿ ಅಧ್ಯಕ್ಷ ರಾಜೀವ್ ಬಿಂದಾಲ್ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಶುಕ್ರವಾರ ಬಿಜೆಪಿ ಸೇರಿದ್ದಾರೆ.
ದೆಹಲಿ ಮಾರ್ಚ್ 23: ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ಹಿಮಾಚಲ ಪ್ರದೇಶದ (Himachal Pradesh) ಆರು ಕಾಂಗ್ರೆಸ್ (Congress) ಬಂಡಾಯ ಶಾಸಕರು, ಮೂವರು ಪಕ್ಷೇತರ ಶಾಸಕರು ಶುಕ್ರವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸದನದಲ್ಲಿ ಉಪಸ್ಥಿತರಿರುವ ವಿಪ್ ಅನ್ನು ಧಿಕ್ಕರಿಸಿದ ಕಾರಣಕ್ಕಾಗಿ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿದ್ದು, ಕಟ್ ಮೋಷನ್ ಮತ್ತು ಬಜೆಟ್ ಸಮಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದರು. ಹಿಮಾಚಲ ಪ್ರದೇಶದ ಆರು ಬಂಡಾಯ ಶಾಸಕರು- ಸುಧೀರ್ ಶರ್ಮಾ, ರವಿ ಠಾಕೂರ್, ಇಂದರ್ ದತ್ ಲಖನ್‌ಪಾಲ್, ದೇವೇಂದ್ರ ಭುಟ್ಟೋ, ರಾಜೇಂದ್ರ ರಾಣಾ ಮತ್ತು ಚೈತನ್ಯ ಶರ್ಮಾ ಅವರು ಹಿಮಾಚಲ ಪ್ರದೇಶ ಬಿಜೆಪಿ ಅಧ್ಯಕ್ಷ ರಾಜೀವ್ ಬಿಂದಾಲ್ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.
ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಸರ್ಕಾರವನ್ನು ಬೆಂಬಲಿಸಿದ ಆರು ಬಂಡಾಯ ಕಾಂಗ್ರೆಸ್ ಶಾಸಕರು ಮತ್ತು ಮೂವರು ಸ್ವತಂತ್ರರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿದ ನಂತರ ಹಿಮಾಚಲದ ರಾಜಕೀಯ ಸನ್ನಿವೇಶವು ನಾಟಕೀಯ ತಿರುವು ಪಡೆದುಕೊಂಡಿತು.
ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕರು
#WATCH | Six rebel MLAs of Himachal Pradesh- Sudhir Sharma, Ravi Thakur, Inder Dutt Lakhanpal, Devendra Bhutto, Rajendra Rana, and Chaitanya Sharma, join BJP in the presence of Himachal Pradesh BJP President Rajiv Bindal and Union Minister Anurag Thakur. pic.twitter.com/IftAl6U1T5
— ANI (@ANI) March 23, 2024
ಬಂಡಾಯ ಕಾಂಗ್ರೆಸ್ ನಾಯಕರನ್ನು ಅನರ್ಹಗೊಳಿಸಿದ ಹಿಮಾಚಲ ಪ್ರದೇಶ ವಿಧಾನಸಭಾ ಸ್ಪೀಕರ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಕಳೆದ ವಾರ ನಿರಾಕರಿಸಿತ್ತು.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ದ್ವಿಸದಸ್ಯ ಪೀಠವು ನಾಲ್ಕು ವಾರಗಳಲ್ಲಿ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರ ಪ್ರತಿಕ್ರಿಯೆಯನ್ನು ಕೇಳಿದೆ. ಅವರ ಮನವಿಯ ತೀರ್ಪು ಬಾಕಿ ಉಳಿದಿದ್ದು, ಆರು ಬಂಡಾಯ ಕಾಂಗ್ರೆಸ್ ಶಾಸಕರಿಗೆ ಮತ ಚಲಾಯಿಸಲು ಅಥವಾ ವಿಧಾನಸಭೆ ಕಲಾಪಗಳಲ್ಲಿ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ಅದು ಹೇಳಿದೆ. ಇದು ಮೇ 6 ರಂದು ವಿಚಾರಣೆ ನಡೆಸಲಿರುವ ನ್ಯಾಯಾಲಯ ಬಂಡಾಯ ಶಾಸಕರಿಗೆ ತಮ್ಮ ಮರುಪ್ರತಿಕ್ರಿಯೆ ಸಲ್ಲಿಸಲು ಒಂದು ವಾರದ ಸಮಯವನ್ನು ನೀಡಿತ್ತು.
ಈ ತಿಂಗಳ ಆರಂಭದಲ್ಲಿ, ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು ಆರು ಬಂಡಾಯ ಕಾಂಗ್ರೆಸ್ ಶಾಸಕರನ್ನು ಹರ್ಯಾಣದ ಪಂಚಕುಲದ ಹೋಟೆಲ್‌ನಲ್ಲಿ ಭೇಟಿಯಾಗಿದ್ದರು ಎಂದು ವರದಿಯಾಗಿದೆ. ಸಿಂಗ್ ಹಿಮಾಚಲ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್ ಅವರ ಪುತ್ರ. ಶಾಸಕರನ್ನು ವಾಪಸ್ ಕರೆದುಕೊಳ್ಳುವಂತೆ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರಿಗೆ ಹೇಳಿದ್ದರು ಎನ್ನಲಾಗಿದೆ.
ಬಂಡಾಯ ಶಾಸಕರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ರಾಜಕೀಯದಲ್ಲಿ ಏನು ಬೇಕಾದರೂ ಸಾಧ್ಯವಾದ್ದರಿಂದ ನಾವು ಮರುಪರಿಶೀಲಿಸಬೇಕು ಎಂದು ಸಿಂಗ್ ಅವರು ಸುಖು ಅವರಿಗೆ ಹೇಳಿರುವುದಾಗಿ ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ. ನಂತರದ ದಿನದಲ್ಲಿ, ಇತರ ಇಬ್ಬರು-ಮೂವರು ಕಾಂಗ್ರೆಸ್ ಶಾಸಕರು ಸಹ ಬಂಡಾಯ ಶಾಸಕರನ್ನು ಭೇಟಿ ಮಾಡಲು ತೆರಳಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ಸುಪ್ರೀಂ ಕೋರ್ಟ್‌ಗೆ ತೆರಳುವ ಮೊದಲು, ಆರು ಬಂಡಾಯ ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ಇದರಲ್ಲಿ ನಿಜವಾದ ರಾಹುಲ್ ಗಾಂಧಿ ಯಾರು?; ಕಾಂಗ್ರೆಸ್ ನಾಯನ ದ್ವಂದ್ವ ನಿಲುವು ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನದ ಹೊರತಾಗಿ, ಆರು ಮಂದಿ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಮತದಾನದಿಂದ ದೂರ ಉಳಿದಿದ್ದರು, ಹಣಕಾಸು ಮಸೂದೆಯಲ್ಲಿ ಸರ್ಕಾರದ ಪರವಾಗಿ ಮತ ಚಲಾಯಿಸಲು ಪಕ್ಷದ ವಿಪ್ ಅನ್ನು ಧಿಕ್ಕರಿಸಿದರು. ಇದರ ಆಧಾರದ ಮೇಲೆ ಆಡಳಿತಾರೂಢ ಕಾಂಗ್ರೆಸ್ ಅವರನ್ನು ಅನರ್ಹಗೊಳಿಸುವಂತೆ ಕೋರಿತ್ತು. ಹಿಮಾಚಲ ಪ್ರದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಪಕ್ಷಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಯಾವುದೇ ಶಾಸಕರನ್ನು ಅನರ್ಹಗೊಳಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಆರು ಬಂಡಾಯ ಶಾಸಕರ ಅನರ್ಹತೆಯನ್ನು ಘೋಷಿಸಿದ ಸ್ಪೀಕರ್, ಅವರು ವಿಪ್ ಅನ್ನು ಧಿಕ್ಕರಿಸಿ ತಕ್ಷಣವೇ ಜಾರಿಗೆ ಬರುವಂತೆ ಸದನದ ಸದಸ್ಯತ್ವವನ್ನು ನಿಲ್ಲಿಸಿದ್ದರಿಂದ ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಅನರ್ಹಗೊಳಿಸಲಾಗಿದೆ ಎಂದು ಹೇಳಿದರು.
ಬಂಡಾಯ ಶಾಸಕರ ಅನರ್ಹತೆಯ ನಂತರ, ಹಿಮಾಚಲ ವಿಧಾನಸಭೆಯ ಸಂಖ್ಯಾ ಬಲವು 68 ರಿಂದ 62 ಕ್ಕೆ ಇಳಿದಿದ್ದು, ಕಾಂಗ್ರೆಸ್ ಶಾಸಕರ ಸಂಖ್ಯೆ 40 ರಿಂದ 34 ಕ್ಕೆ ಕುಗ್ಗಿತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:29 pm, Sat, 23 March 24