ಸತತ 2ನೇ ಅವಧಿಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರೇಮ್ ಸಿಂಗ್ ತಮಾಂಗ್ ಪ್ರಮಾಣ ವಚನ ಸ್ವೀಕಾರ
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಸಿಕ್ಕಿಂ ರಾಜ್ಯದ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪಾಲ್ಜೋರ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಪ್ರೇಮ್ ಸಿಂಗ್ ತಮಾಂಗ್ ಮತ್ತು ಅವರ ಸಚಿವ ಸಂಪುಟಕ್ಕೆ ಪ್ರಮಾಣ ವಚನ ಬೋಧಿಸಿದರು.
ನವದೆಹಲಿ: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ (Prem Singh Tamang) ಅವರು ಇಂದು (ಸೋಮವಾರ) ಗ್ಯಾಂಗ್ಟಾಕ್‌ನಲ್ಲಿ ನಡೆದ ಸಮಾರಂಭದಲ್ಲಿ ಸತತ ಎರಡನೇ ಅವಧಿಗೆ ಹಿಮಾಲಯ ರಾಜ್ಯವಾದ ಸಿಕ್ಕಿಂ ಮುಖ್ಯಮಂತ್ರಿಯಾಗಿ (Sikkim Chief Minister) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿಕ್ಕಿಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಪ್ರಮಾಣ ವಚನ ಬೋಧಿಸಿದ್ದಾರೆ.
ಪಾಲ್ಜೋರ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮತ್ತು ಅವರ ಮಂತ್ರಿ ಮಂಡಳಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) 32 ಸ್ಥಾನಗಳ ಪೈಕಿ 31 ಸ್ಥಾನಗಳನ್ನು ಗೆದ್ದುಕೊಂಡಿತು. ಹೀಗಾಗಿ, ಸಿಕ್ಕಿಂ ರಾಜ್ಯದಲ್ಲಿನ ಅಸೆಂಬ್ಲಿ ಚುನಾವಣೆಯಲ್ಲಿ ಪ್ರತಿಪಕ್ಷ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (SDF) ಏಕೈಕ ಸ್ಥಾನಕ್ಕೆ ಸೀಮಿತವಾಯಿತು.
ಇದನ್ನೂ ಓದಿ: ಮಣಿಪುರ ಮುಖ್ಯಮಂತ್ರಿ ಬೆಂಗಾವಲು ವಾಹನದ ಮೇಲೆ ದಾಳಿ, ಓರ್ವ ಭದ್ರತಾ ಸಿಬ್ಬಂದಿಗೆ ಗಾಯ
ಕಳೆದ 5 ವರ್ಷಗಳಲ್ಲಿ ನಾವು ಚುನಾವಣೆಯ ಸಮಯದಲ್ಲಿ ಮಾಡಿದ ಎಲ್ಲಾ ಘೋಷಣೆಗಳನ್ನು ನಾವು ಈಡೇರಿಸುತ್ತೇವೆ. ನನ್ನ ಎಲ್ಲಾ ಕಾರ್ಯಕರ್ತರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಅವರು ನನ್ನ ಗೆಲುವಿಗೆ ಶ್ರಮಿಸಿದ್ದಾರೆ. ನಾನು ಸಾರ್ವಜನಿಕರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದು ಅತ್ಯಂತ ಶಾಂತಿಯುತ ಚುನಾವಣೆಯಾಗಿದೆ. ಸಿಕ್ಕಿಂನಲ್ಲಿ ಇದೊಂದು ದಾಖಲೆ’’ ಎಂದು ಹೇಳಿದ್ದಾರೆ.
#WATCH | Prem Singh Tamang (Golay) takes oath as the Chief Minister of Sikkim for a second consecutive term
Visuals from Paljor Stadium in Gangtok pic.twitter.com/LVEqJ6EHCv
— ANI (@ANI) June 10, 2024
ಪ್ರೇಮ್ ಸಿಂಗ್ ತಮಾಂಗ್ ಅವರು ರೆನಾಕ್ ಅಸೆಂಬ್ಲಿ ಸ್ಥಾನದಿಂದ ಎಸ್‌ಡಿಎಫ್‌ನ ಸೋಮ್ ನಾಥ್ ಪೌಡ್ಯಾಲ್ ಅವರನ್ನು 7,396 ಮತಗಳಿಂದ ಸೋಲಿಸಿದರು. ಸಿಕ್ಕಿಂನಲ್ಲಿ 32 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 19ರಂದು ಮೊದಲ ಹಂತದಲ್ಲಿ ಲೋಕಸಭೆ ಚುನಾವಣೆಯೊಂದಿಗೆ ಏಕಕಾಲದಲ್ಲಿ ಮತದಾನ ನಡೆಯಿತು.
ಇದನ್ನೂ ಓದಿ: ಜೂ. 12ರಂದು 3ನೇ ಬಾರಿಗೆ ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ
1989 ಮತ್ತು 2009ರಲ್ಲಿ ಸಿಕ್ಕಿಂ ಸಂಗ್ರಾಮ್ ಪರಿಷತ್ ಮತ್ತು ಎಸ್‌ಡಿಎಫ್‌ನಿಂದ ಇದೇ ರೀತಿಯ ಫಲಿತಾಂಶಗಳನ್ನು ಪಡೆದಿದ್ದರಿಂದ ಇದು ಮೂರನೇ ಬಾರಿಗೆ ಸಿಕ್ಕಿಂ ರಾಜಕೀಯ ಪಕ್ಷದ ಪ್ರಚಂಡ ವಿಜಯಕ್ಕೆ ಸಾಕ್ಷಿಯಾಗಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ SKM 17 ಸ್ಥಾನಗಳನ್ನು ಗೆದ್ದರೆ, SDF 32 ಸ್ಥಾನಗಳಲ್ಲಿ 15 ಸ್ಥಾನಗಳನ್ನು ಪಡೆದುಕೊಂಡಿತು. SKM 2014ರಲ್ಲಿ ತನ್ನ ಮೊದಲ ವಿಧಾನಸಭಾ ಚುನಾವಣೆಯನ್ನು ಎದುರಿಸಿದ್ದರಿಂದ 10 ಸ್ಥಾನಗಳನ್ನು ಗೆದ್ದುಕೊಂಡಿತು.
#WATCH | Sikkim CM-designate Prem Singh Tamang (Golay) to take oath as the Chief Minister for a second consecutive term shortly.
Visuals from Paljor Stadium in Gangtok. pic.twitter.com/LFm44bH39G
— ANI (@ANI) June 10, 2024
ಕುತೂಹಲಕಾರಿಯಾಗಿ, ಎಸ್‌ಕೆಎಂ 2019 ರಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಜೊತೆ ಕೈಜೋಡಿಸಿತು. ಆದರೆ, ಅಂತಿಮವಾಗಿ ಅದರೊಂದಿಗೆ ಸಂಬಂಧವನ್ನು ಕಡಿದುಕೊಂಡು 2019ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ