ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹುಡುಗಿಯರಿಗೆ ಸ್ಕೂಟರ್​​, ಸ್ಮಾರ್ಟ್​ಫೋನ್​: ಪ್ರಿಯಾಂಕಾ ಗಾಂಧಿ ಭರವಸೆ

ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಣೆಯಲ್ಲಿ ಹೇಗಾದರೂ ಗೆಲ್ಲಲೇಬೇಕು ಎಂಬ ಆಶಯ ಕಾಂಗ್ರೆಸ್​​ನದ್ದು. ಅದರ ಸಿದ್ಧತೆಯನ್ನೂ ಪಕ್ಷ ಈಗಿನಿಂದಲೇ ಶುರು ಮಾಡಿಕೊಂಡಿದೆ. ಈ ಬಾರಿ ಶೇ.40ರಷ್ಟು ಟಿಕೆಟ್​​ನ್ನು ಮಹಿಳೆಯರಿಗೆ ನೀಡುವುದಾಗಿ ಕಾಂಗ್ರೆಸ್​ ಹೇಳಿಕೊಂಡಿದೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹುಡುಗಿಯರಿಗೆ ಸ್ಕೂಟರ್​​, ಸ್ಮಾರ್ಟ್​ಫೋನ್​: ಪ್ರಿಯಾಂಕಾ ಗಾಂಧಿ ಭರವಸೆ
ಪ್ರಿಯಾಂಕಾ ಗಾಂಧಿ
Follow us
TV9 Web
| Updated By: Lakshmi Hegde

Updated on:Oct 21, 2021 | 2:30 PM

ದೆಹಲಿ: ಉತ್ತರಪ್ರದೇಶದ ಮುಂದಿನ ವಿಧಾನಸಭಾ ಚುನಾವಣೆ (Uttarpradesh Assembly Elections)ಯಲ್ಲಿ ಕಾಂಗ್ರೆಸ್​ನಿಂದ ಶೇ.40ರಷ್ಟು ಟಿಕೆಟ್​​ನ್ನು ಮಹಿಳೆಯರಿಗೆ ನೀಡಲಾಗುವುದು ಎಂದು ಘೋಷಿಸಿದ್ದ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷ ಚುನಾವಣೆಯಲ್ಲಿ ಕಾಂಗ್ರೆಸ್​ (Congress) ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ 12ನೇ ತರಗತಿ ಪಾಸ್​ ಆದ ಹುಡುಗಿಯರಿಗೆ ಸ್ಮಾರ್ಟ್​​ಫೋನ್​ ಮತ್ತು ಪದವಿಧರ ಯುವತಿಯರಿಗೆ ಎಲೆಕ್ಟ್ರಿಕ್​ ಸ್ಕೂಟರ್​​ ನೀಡುವುದಾಗಿ ಹೇಳಿದ್ದಾರೆ.  

ಈ ಬಗ್ಗೆ ಟ್ವೀಟ್​ ಮಾಡಿರುವ ಪ್ರಿಯಾಂಕಾ ಗಾಂಧಿ, ನಾನು ಉತ್ತರಪ್ರದೇಶದಲ್ಲಿ ಹಲವು ವಿದ್ಯಾರ್ಥಿಗಳನ್ನು ಭೇಟಿಯಾದೆ. ಅದರಲ್ಲಿ ಅನೇಕರು ತಮಗೆ ವಿದ್ಯಾಭ್ಯಾಸಕ್ಕೆ ಮತ್ತು ನಮ್ಮ ಸುರಕ್ಷತೆ ದೃಷ್ಟಿಯಿಂದಲೂ ಸ್ಮಾರ್ಟ್​ಫೋನ್​ ಬೇಕು ಎಂದು ಕೇಳಿದ್ದಾರೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಂಟರ್​ಮೀಡಿಯಟ್​ ಮುಗಿಸಿದ ಹುಡುಗಿಯರಿಗೆ ಸ್ಮಾರ್ಟ್​ಫೋನ್​ ಮತ್ತು ಪದವಿ ಮುಗಿಸಿದ ಯುವತಿಯರಿಗೆ ಸ್ಕೂಟಿ ನೀಡಲಿದ್ದೇವೆ. ಇದಕ್ಕೆ ನಮ್ಮ ಪ್ರಣಾಳಿಕೆ ಸಮಿತಿ ಒಪ್ಪಿರುವುದು ತುಂಬ ಸಂತೋಷದ ಸಂಗತಿ ಎಂದಿದ್ದಾರೆ.

ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಣೆಯಲ್ಲಿ ಹೇಗಾದರೂ ಗೆಲ್ಲಲೇಬೇಕು ಎಂಬ ಆಶಯ ಕಾಂಗ್ರೆಸ್​​ನದ್ದು. ಅದರ ಸಿದ್ಧತೆಯನ್ನೂ ಪಕ್ಷ ಈಗಿನಿಂದಲೇ ಶುರು ಮಾಡಿಕೊಂಡಿದೆ. ಈ ಬಾರಿ ಶೇ.40ರಷ್ಟು ಟಿಕೆಟ್​​ನ್ನು ಮಹಿಳೆಯರಿಗೆ ನೀಡುವುದಾಗಿ ಕಾಂಗ್ರೆಸ್​ ಹೇಳಿಕೊಂಡಿದೆ. ಇದೂ ಕೂಡ ಒಂದು ಮಹತ್ವದ ಘೋಷಣೆಯೇ ಆಗಿದೆ.  ನಮ್ಮ ದೇಶದಲ್ಲಿ ರಾಜಕೀಯ ದ್ವೇಷವಿದೆ. ಅದನ್ನು ಮಹಿಳೆಯರು ಮಾತ್ರ ಕೊನೆಗೊಳಿಸಬಹುದಾಗಿದೆ. ಅಷ್ಟೇ ಅಲ್ಲ, ಇಲ್ಲಿ ಧರ್ಮರಾಜಕೀಯವಿದೆ. ಅದರಿಂದಲೂ ದೇಶವನ್ನು ಹೊರತರುವ ಶಕ್ತಿ ಸ್ತ್ರೀಯರಿಗೇ ಇದೆ. ರಾಜಕೀಯದಲ್ಲಿ ನನ್ನೊಂದಿಗೆ ಹೆಚ್ಚಿನ ಸ್ತ್ರೀಯರು ಹೆಗಲುಕೊಡಿ ಎಂದು ಕರೆ ನೀಡಿದರು. ಹಾಗೇ, ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇರುವ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್​ 15ರವರೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು ಎಂದೂ ತಿಳಿಸಿದ್ದರು.  ಉತ್ತರಪ್ರದೇಶದಲ್ಲಿ 1989ರಿಂದ ಈಚೆಗೆ ಕಾಂಗ್ರೆಸ್​​ಗೆ ಅಧಿಕಾರ ಸಿಕ್ಕಿಲ್ಲ. ಆಗಿನಿಂದಲೂ ಅಲ್ಲಿ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಕಾಂಗ್ರೆಸ್​ ಮುಂದಿನ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿಕೊಂಡಿದೆ. ಇಂಥ ಭರವಸೆಗಳೊಂದಿಗೆ ಜನರನ್ನು ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಖ್ಯಾತ ನಿರ್ದೇಶಕ ಶಂಕರ್​ ಅಳಿಯನಿಂದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ? ಮದುವೆಯಾಗಿ ನಾಲ್ಕೇ ತಿಂಗಳಿಗೆ ಸಂಸಾರದಲ್ಲಿ ಬಿರುಗಾಳಿ

‘ರಮ್ಯಾ ಕೇವಲ ವಿಶ್​ ಮಾಡೋದಲ್ಲ, ನಮ್ಮ ಜತೆ ಸಿನಿಮಾ ಮಾಡಬೇಕು’; ಮನದಾಳದ ಮಾತು ಹೇಳಿಕೊಂಡ ಧನಂಜಯ​

Published On - 2:28 pm, Thu, 21 October 21

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ