AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ

ಸ್ಮೃತಿ ಇರಾನಿ ತೆಳ್ಳಗಾಗಿರುವ ಫೋಟೋ ನೋಡಿ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ನಟಿ ಸೋನಂ ಕಪೂರ್, ಮೌನಿ ರಾಯ್ ಮುಂತಾದ ನಟಿಯರು ಕೂಡ ಅಚ್ಚರಿ ಪಟ್ಟಿದ್ದಾರೆ.

Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ
ತೂಕ ಇಳಿಸಿದ ಸ್ಮೃತಿ ಇರಾನಿ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 18, 2021 | 5:38 PM

Share

ಹಿಂದಿ ಕಿರುತೆರೆಯ ಖ್ಯಾತ ನಟಿಯಾಗಿದ್ದ ಸ್ಮೃತಿ ಇರಾನಿ (Smriti Irani) ಬಳಿಕ ರಾಜಕಾರಣದಲ್ಲಿ ಸಕ್ರಿಯರಾದವರು. ಇದೀಗ ಕೇಂದ್ರ ಸಚಿವೆಯೂ ಆಗಿರುವ ಸ್ಮೃತಿ ಇರಾನಿ ಯುವತಿಯೂ ನಾಚುವಂತೆ ತೂಕ ಇಳಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸ್ಮೃತಿ ಇರಾನಿ ಮಾಡಿರುವ ಹೊಸ ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿ ತಮ್ಮ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಆ ಫೋಟೋವನ್ನು ನೋಡಿದ ಸ್ಮೃತಿ ಇರಾನಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ದಪ್ಪಗಾಗಿದ್ದ ಸ್ಮೃತಿ ಇರಾನಿ ತೆಳ್ಳಗಾಗಿರುವ ರೀತಿಯನ್ನು ನೋಡಿ ಅಭಿಮಾನಿಗಳು ದಂಗಾಗಿದ್ದಾರೆ. ತೆಳ್ಳಗೆ ಯುವತಿಯಂತೆ ಕಾಣುತ್ತಿರುವ ಸ್ಮೃತಿ ಇರಾನಿ ಮರದಿಂದ ಹೂವನ್ನು ಕೊಯ್ಯುತ್ತಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋ ನೋಡಿ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ನಟಿ ಸೋನಂ ಕಪೂರ್, ಮೌನಿ ರಾಯ್ ಮುಂತಾದ ನಟಿಯರು ಕೂಡ ಅಚ್ಚರಿ ಪಟ್ಟಿದ್ದಾರೆ.

ಭಾರತದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮತ್ತು ಮಾಜಿ ನಟಿಯೂ ಆಗಿರುವ ಸ್ಮೃತಿ ಇರಾನಿ ಪಾರ್ಕ್​ನಲ್ಲಿ ನಿಂತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದು, ಅರ್ಧಕ್ಕರ್ಧ ತೂಕ ಇಳಿಸಿರುವ ಫೋಟೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹಾಗೇ, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೂಡ ಇಳಿಸಿ ಮೇಡಂ ಎಂದು ಕೆಲವರು ಕಿಚಾಯಿಸಿದ್ದಾರೆ.

ನೀವು ಹೇಗೆ ತೂಕ ಇಳಿಸಿಕೊಂಡಿದ್ದೀರ ಎಂಬುದನ್ನು ನಮಗೆ ವಿವರಿಸುತ್ತೀರ? ನೀವು ಎಲ್ಲ ಕ್ಷೇತ್ರಗಳಲ್ಲೂ ಸಾಧಕರಾಗಿದ್ದೀರಿ. ಈ ವಯಸ್ಸಿನಲ್ಲಿ ಇಷ್ಟು ತೂಕ ಇಳಿಸಲು ಹೇಗೆ ಸಾಧ್ಯವಾಯಿತು? ಎಂದು ಹಲವರು ಪ್ರಶ್ನಿಸಿದ್ದಾರೆ. ಇದಕ್ಕೂ ಮೊದಲು ತಮ್ಮ ಕುಟುಂಬದವರೊಂದಿಗೆ ಇದ್ದ ಸೆಲ್ಫೀಯನ್ನು ಕೂಡ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಆ ಸೆಲ್ಫೀಯಲ್ಲಿ ಕೆಂಪು ಕುರ್ತಾ ಧರಿಸಿದ್ದ ಸ್ಮೃತಿ ಇರಾನಿ ತೂಕ ಇಳಿಸಿದ್ದನ್ನು ಅನೇಕರು ಗಮನಿಸಿದ್ದರು.

ಇದನ್ನೂ ಓದಿ: Lal Salaam: ಲಾಲ್ ಸಲಾಂ ಕಾದಂಬರಿ ಮೂಲಕ ಲೇಖಕಿಯಾದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಉತ್ತರ ಪ್ರದೇಶದ ಪ್ರೊಫೆಸರ್​ಗೆ ಜೈಲು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ