AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಕುಮಾರ್​ ರೇಪ್​ ಕುರಿತಾದ ಹೇಳಿಕೆ: ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಿ, ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸ್ಮೃತಿ ಇರಾನಿ

ಇಂದು ಲೋಕಸಭೆಯಲ್ಲೂ ರಮೇಶ್​ ಕುಮಾರ್​ ಹೇಳಿಕೆಯ ವಿಚಾರ ಪ್ರಸ್ತಾಪವಾಗಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮೇಶ್​ ಕುಮಾರ್​ ರೇಪ್​ ಕುರಿತಾದ ಹೇಳಿಕೆ: ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಿ, ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸ್ಮೃತಿ ಇರಾನಿ
ಸ್ಮೃತಿ ಇರಾನಿ
Follow us
TV9 Web
| Updated By: Pavitra Bhat Jigalemane

Updated on: Dec 17, 2021 | 3:10 PM

ನವದೆಹಲಿ: ವಿಧಾನಸಭೆಯಲ್ಲಿ ನಿನ್ನೆ ಕಾಂಗ್ರೆಸ್​ ಶಾಸಕ ರಮೇಶ್​ ಕುಮಾರ್​ ಅವರ ರೇಪ್​ ಕುರಿತಾದ ಹೇಳಿಕೆ ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗಿದೆ. ಇಂದು ಲೋಕಸಭೆಯಲ್ಲೂ ರಮೇಶ್​ ಕುಮಾರ್​ ಹೇಳಿಕೆಯ ವಿಚಾರ ಪ್ರಸ್ತಾಪವಾಗಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಬೇಕು ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಶಾಸಕರ ಈ ರೀತಿಯ ಹೇಳಿಕೆ ಹೆಣ್ಣಿಗೆ ಅವಮಾನ ಮಾಡಿದಂತೆ ನಾನೂ ಹೆಣ್ಣು, ನಾನೂ ಹೋರಾಡಬಲ್ಲೆ ಎಂದು ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಕಾಂಗ್ರೆಸ್​ ಶಾಸಕ ರಮೇಶ್​ ಕುಮಾರ್​ ಸದನದಲ್ಲಿ ರೇಪ್​ ಅಗುವುದನ್ನು ತಡೆಯಲು ಆಗದಿದ್ದರೆ ಅದನ್ನು ಎಂಜಾಯ್​ ಮಾಡಿ ಎಂದು ಹೆಣ್ಣು ಮಕ್ಕಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ರಾಜ್ಯದಲ್ಲಿ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ರಮೇಶ್ ಕುಮಾರ್ ಬೆಳಗ್ಗೆ ಟ್ವೀಟ್​ ಮೂಲಕ ಕ್ಷಮೆಯಾಚಿಸಿದ್ದರು.

ಸದನದಲ್ಲಿ ನಾನು ನೀಡಿದ ಅಸಡ್ಡೆ ಹಾಗೂ ನಿರ್ಲಕ್ಷ್ಯದ ಕಾಮೆಂಟ್​ ಬಗ್ಗೆ ಪ್ರಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ಈ ನೀಚ ಕೃತ್ಯವನ್ನು ಕ್ಷುಲಕ ಎಂದು ಹೇಳುವುದು ನನ್ನ ಉದ್ದೇಶವಾಗಿರಲಿಲ್ಲ. ಆದರೆ ಇನ್ನು ಮುಂದೆ ನಾನು ಪದಗಳನ್ನು ಆಯ್ಕೆ ಮಾಡಿ ಮಾತನಾಡುವುದ ರ ಬಗ್ಗೆ ಎಚ್ಚರಿಕೆ ವಹಿಸುತ್ತೇನೆ ಎಂದು ಬರೆದುಕೊಂಡು ಕ್ಷಮೆ ಕೇಳಿದ್ದರು. ಇದೀಗ ಲೋಕಸಭೆಯಲ್ಲಿಯೂ ರಮೇಶ್​​ ಕುಮಾರ್​ ವಿಚಾರ ಚರ್ಚೆಗೆ ಬಂದಿದ್ದು ಕಾಂಗ್ರೆಸ್​ ಶಾಸಕರ ಹೇಳಿಕೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. ರಮೇಶ್​ ಕುಮಾರ್​ ಈ ಹಿಂದೆಯೂ ಹೆಣ್ಣು ಮಕ್ಕಳ ಬಗ್ಗೆ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಸಿಲುಕಿದ್ದರು. ಇದೀಗ ಮತ್ತೆ ಅವರ ಹೇಳಿಕೆ ರಾಷ್ಟ್ರಮಟ್ಟದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:

ಶಾಸಕ ರಮೇಶ್ ಕುಮಾರ್ ಹೇಳಿಕೆಯಿಂದ ಮುಜುಗರಕ್ಕೀಡಾದ ಕಾಂಗ್ರೆಸ್; ಪಕ್ಷದ ನಾಯಕರಿಂದಲೂ ಖಂಡನೆ

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ