ಮತ ಬ್ಯಾಂಕ್ಗಾಗಿ ಮಮತಾ ಬ್ಯಾನರ್ಜಿ ಸಿಎಎ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ: ಸ್ಮೃತಿ ಇರಾನಿ
ಸಿಎಎ ಅನುಷ್ಠಾನದ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧದ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಟೀಕಿಸಿದ್ದಾರೆ. ತೃಣಮೂಲ ಕಾಂಗ್ರೆಸ್‌ನೊಳಗೆ ಸಂಘರ್ಷ ನಡೆಯುತ್ತಿದೆ, ಮಮತಾ ಬ್ಯಾನರ್ಜಿ ಅವರು ಸನಾತನ ಧರ್ಮವನ್ನು ಅವಮಾನಿಸುವ ವಿರೋಧ ಪಕ್ಷದ ನಾಯಕರೊಂದಿಗೆ ಕೈಜೋಡಿಸಿದ್ದಾರೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ವಿರೋಧಿಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಅವರನ್ನು ಟೀಕಿಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) , ತೃಣಮೂಲ ಕಾಂಗ್ರೆಸ್ ವರಿಷ್ಠರು ತಮ್ಮ ಮತ ಬ್ಯಾಂಕ್ ಅನ್ನು ರಕ್ಷಿಸಲು ಕೆಲವು ಸಮುದಾಯಗಳನ್ನು ದಾರಿ ತಪ್ಪಿಸುತ್ತಾರೆ ಎಂದು ದೂರಿದ್ದಾರೆ. ಬಿಜೆಪಿ ಸಭೆಗಾಗಿ ಇರಾನಿ ಮಂಗಳವಾರ ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್ ಜಿಲ್ಲೆಗೆ ಭೇಟಿ ನೀಡಿದ್ದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸ್ಮೃತಿ, ಹಿಂದೂ, ಸಿಖ್, ಜೈನ ಮತ್ತು ಬೌದ್ಧ ಸಮುದಾಯಗಳಿಗೆ ಸೇರಿದ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಜನರು ತಮ್ಮ ದೇಶಗಳಲ್ಲಿ ಕಿರುಕುಳ ಅನುಭವಿಸಿದ ನಂತರ ತಮ್ಮ ಧರ್ಮಗಳನ್ನು ರಕ್ಷಿಸಲು ಭಾರತಕ್ಕೆ ಬಂದಿದ್ದಾರೆ ಎಂದು ಹೇಳಿದರು.
ಮಮತಾ ಬ್ಯಾನರ್ಜಿ ಅವರು ತಮ್ಮ ಮತ ಬ್ಯಾಂಕ್ ರಕ್ಷಿಸಿಕೊಳ್ಳಲು ಕೆಲವು ಸಮುದಾಯಗಳನ್ನು ತಪ್ಪುದಾರಿಗೆ ಎಳೆಯುತ್ತಾರೆ ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದ್ದಾರೆ.
ಆದರೆ ಪ್ರಧಾನಿ ನರೇಂದ್ರ ಮೋದಿಯವರ ಈ ನಿರ್ಧಾರವು ನ್ಯಾಯೋಚಿತ ಮತ್ತು ಸರಿಯಾದದ್ದು, ಹಾಗೆಯೇ ಮಾನವೀಯ ನಿರ್ಧಾರವಾಗಿದೆ ಎಂದು ಪ್ರತಿಯೊಬ್ಬ ಭಾರತೀಯರಿಗೂ ತಿಳಿದಿದೆ ಎಂದು ಇರಾನಿ ಹೇಳಿದರು. ತೃಣಮೂಲ ಕಾಂಗ್ರೆಸ್‌ನೊಳಗೆ ಸಂಘರ್ಷ ನಡೆಯುತ್ತಿದೆ, ಮಮತಾ ಬ್ಯಾನರ್ಜಿ ಅವರು ಸನಾತನ ಧರ್ಮವನ್ನು ಅವಮಾನಿಸುವ ವಿರೋಧ ಪಕ್ಷದ ನಾಯಕರೊಂದಿಗೆ ಕೈಜೋಡಿಸಿದ್ದಾರೆ.
ಮತ್ತಷ್ಟು ಓದಿ: ಸಿಎಎ ಸ್ವೀಕಾರಾರ್ಹವಲ್ಲ ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು: ದಳಪತಿ ವಿಜಯ್
ಪಶ್ಚಿಮ ಬಂಗಾಳದಲ್ಲಿ ಸಿಎಎಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮಮತಾ ಹೇಳಿದ್ದಾರೆ. ನನ್ನ ಪ್ರಾಣದ ಹಂಗು ತೊರೆದು, ಅನ್ಯಾಯದ ವಿರುದ್ಧ ನಿಲ್ಲಲು ನಾನು ಸಿದ್ಧ, ಇತರ ರಾಜ್ಯಗಳು ಹೋರಾಡಲು ನಾನು ಒತ್ತಾಯಿಸುತ್ತೇನೆ. ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ನಾವು ಬಿಡುವುದಿಲ್ಲ. ಇತರ ರಾಜ್ಯಗಳು ಸಹ ಮಾಡಬೇಕು ಎಂದರು.
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕೂಡ ಯಾವುದೇ ಕಾರಣಕ್ಕೂ ತಮಿಳುನಾಡಿನಲ್ಲಿ ಸಿಎಎ ಜಾರಿಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಸಿಎಎ ಎಂದರೇನು?
ಪೌರತ್ವ ತಿದ್ದುಪಡಿ ಮಸೂದೆ ಭಾರತದ ನೆರೆಯ ದೇಶಗಳಾದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಮುಂಚೆ ಭಾರತಕ್ಕೆ ಬಂದ ಆರು ಅಲ್ಪಸಂಖ್ಯಾತ ಸಮುದಾಯಗಳ ಜನರಿಗೆ ಭಾರತೀಯ ಪೌರತ್ವ ಹೊಂದುವ ಅವಕಾಶ ಕೊಡುತ್ತದೆ. ಆ ಮೂರು ಮುಸ್ಲಿಮ್ ದೇಶಗಳಲ್ಲಿನ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ಧ ಮತ್ತು ಪಾರ್ಸಿ ಸಮುದಾಯಗಳ ಜನರಿಗೆ ಈ ಮನ್ನಣೆ ಕೊಡಲಾಗಿದೆ.
ಮಾಮೂಲಿಯ ಕಾನೂನು ಪ್ರಕಾರ ಯಾವುದೇ ವ್ಯಕ್ತಿ ಭಾರತೀಯ ಪೌರತ್ವ ಹೊಂದಬೇಕಾದರೆ 11 ವರ್ಷ ಇಲ್ಲಿ ವಾಸ ಮಾಡಿರಬೇಕು. ಸಿಎಎಯಲ್ಲಿ ನೆರೆಯ ದೇಶಗಳ ಅಲ್ಪಸಂಖ್ಯಾತ ಸಮುದಾಯಗಳಿಗೆ ಒಂದಷ್ಟು ವಿನಾಯಿತಿ ಕೊಡಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ