ಮುಟ್ಟು ಎಂಬುದು ಅಂಗವೈಕಲ್ಯವಲ್ಲ, ಹೆಣ್ಣುಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ: ಸ್ಮೃತಿ ಇರಾನಿ

|

Updated on: Dec 14, 2023 | 11:18 AM

ಮುಟ್ಟು ಎಂಬುದು ಅಂಗವೈಕಲ್ಯವಲ್ಲ ಮಹಿಳೆಯರಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani)ಹೇಳಿದ್ದಾರೆ. ಕಾಂಗ್ರೆಸ್​ ಸಂಸದ ಶಶಿ ತರೂರ್ ಪ್ರಶ್ನೆಗೆ ಉತ್ತರಿಸಿದ ಇರಾನಿ, ಎಲ್ಲಾ ಕೆಲಸದ ಸ್ಥಳಗಳಲ್ಲಿ ವೇತನ ಸಹಿತ ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವನೆಯೂ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದಿದ್ದಾರೆ.

ಮುಟ್ಟು ಎಂಬುದು ಅಂಗವೈಕಲ್ಯವಲ್ಲ, ಹೆಣ್ಣುಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ: ಸ್ಮೃತಿ ಇರಾನಿ
ಸ್ಮೃತಿ ಇರಾನಿ
Image Credit source: Indian Express
Follow us on

ಮುಟ್ಟು(Menstruation) ಎಂಬುದು ಅಂಗವೈಕಲ್ಯವಲ್ಲ ಮಹಿಳೆಯರಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani)ಹೇಳಿದ್ದಾರೆ. ಕಾಂಗ್ರೆಸ್​ ಸಂಸದ ಶಶಿ ತರೂರ್ ಪ್ರಶ್ನೆಗೆ ಉತ್ತರಿಸಿದ ಇರಾನಿ, ಎಲ್ಲಾ ಕೆಲಸದ ಸ್ಥಳಗಳಲ್ಲಿ ವೇತನ ಸಹಿತ ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವನೆಯೂ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದಿದ್ದಾರೆ.

ಋತುಚಕ್ರವು ಮಹಿಳೆಯರ ಕೆಲಸಕ್ಕೆ ಎಂದೂ ಅಡ್ಡಿಯಾಗುವುದಿಲ್ಲ, ಅದು ಅಂಗವೈಕಲ್ಯವಲ್ಲ, ಇದು ಮಹಿಳೆಯರ ಜೀವನದ ಒಂದು ಭಾಗ ಹಾಗೂ ಸಹಜ ಪ್ರಕ್ರಿಯೆ ಎಂದು ಹೇಳಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಟ್ಟಿನ ನೈರ್ಮಲ್ಯದ ಕರಡು ನೀತಿಯನ್ನು ಸಿದ್ಧಪಡಿಸಿದೆ ಎಂದರು.
10-19 ವಯೋಮಾನದ ಬಾಲಕಿಯರಲ್ಲಿ ಮುಟ್ಟಿನ ನೈರ್ಮಲ್ಯವನ್ನು ಉತ್ತೇಜಿಸಲು ಕೇಂದ್ರವು ಈಗಾಗಲೇ ಯೋಜನೆಯನ್ನು ಜಾರಿಗೊಳಿಸುತ್ತಿದೆ ಎಂದು ಅವರು ಸದನಕ್ಕೆ ತಿಳಿಸಿದರು.

ಮತ್ತಷ್ರಟು ಓದಿ: Women Health: ಮುಟ್ಟಿನ ಸಮಯದಲ್ಲಿ ಮಹಿಳೆಯರು ಎದುರಿಸುವ ಸಮಸ್ಯೆಗಳ ಸುತ್ತ

ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಿಂದ ಸ್ವೀಕರಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ರಾಜ್ಯ ಕಾರ್ಯಕ್ರಮ ಅನುಷ್ಠಾನ ಯೋಜನೆ ಮಾರ್ಗದ ಮೂಲಕ ಈ ಯೋಜನೆಯನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ಬೆಂಬಲಿಸುತ್ತದೆ. ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಸ್ಮೃತಿ ಇರಾನಿ ಹೇಳಿದರು.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಜಾರಿಗೆ ತಂದಿರುವ ಮಿಷನ್ ಶಕ್ತಿಯ ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆ ಅಡಿಯಲ್ಲಿ ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ