ಮೂರ್ಖರು ಇತರರನ್ನು ಮರುಳು ಮಾಡಲು ಪ್ರಯತ್ನಿಸಿದಾಗ ಅವರೆಷ್ಟು ಮೂರ್ಖರೆಂಬುದು ತಿಳಿಯುತ್ತೆ: ಸ್ಮೃತಿ ಇರಾನಿ

ಮೂರ್ಖರು ಇತರರನ್ನು ಮರುಳು ಮಾಡಲು ಪ್ರಯತ್ನಿಸಿದಾಗ ಅವರೆಷ್ಟು ಮೂರ್ಖರೆಂಬುದು ತಿಳಿಯುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಕಾಂಗ್ರೆಸ್​ನ ಜೈರಾಮ್ ರಮೇಶ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಹಳ ಕಾಲದಿಂದ ಭಾರತದ ಸರಿಯಾದ ವಾರಸುದಾರರೆಂದು ಬಿಂಬಿಸಿಕೊಳ್ಳುತ್ತಿರುವ ರಾಜವಂಶದ ಆಡಳಿತಗಾರರು ಅದರ ಸಂಪತ್ತನ್ನು ಲೂಟಿ ಮಾಡಿದ್ದಾರೆ. ಅವರ ಪತನದ ನಂತರವೂ, ಅವರ ಆಸ್ಥಾನಿಕರು ಸತ್ಯಗಳನ್ನು ತಿರುಚುವುದನ್ನು ಮುಂದುವರೆಸಿದ್ದಾರೆ ಎಂದಿದ್ದಾರೆ.

ಸ್ಮೃತಿ ಇರಾನಿ
Follow us
ನಯನಾ ರಾಜೀವ್
|

Updated on: Mar 26, 2024 | 9:59 AM

ಮೂರ್ಖರು ಇತರರನ್ನು ಮರುಳು ಮಾಡಲು ಪ್ರಯತ್ನಿಸಿದಾಗ ಅವರೆಷ್ಟು ಮೂರ್ಖರೆಂಬುದು ತಿಳಿಯುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಕಾಂಗ್ರೆಸ್​ನ ಜೈರಾಮ್ ರಮೇಶ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಹಳ ಕಾಲದಿಂದ ಭಾರತದ ಸರಿಯಾದ ವಾರಸುದಾರರೆಂದು ಬಿಂಬಿಸಿಕೊಳ್ಳುತ್ತಿರುವ ರಾಜವಂಶದ ಆಡಳಿತಗಾರರು ಅದರ ಸಂಪತ್ತನ್ನು ಲೂಟಿ ಮಾಡಿದ್ದಾರೆ. ಅವರ ಪತನದ ನಂತರವೂ, ಅವರ ಆಸ್ಥಾನಿಕರು ಸತ್ಯಗಳನ್ನು ತಿರುಚುವುದನ್ನು ಮುಂದುವರೆಸಿದ್ದಾರೆ ಎಂದಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಭಾರತೀಯ ಜನತಾ ಪಕ್ಷದ ಸರ್ಕಾರದ ನಾರಿ ಶಕ್ತಿ ಘೋಷಣೆಗಳು ನಿಜವಾದ ಕ್ರಿಯೆಯಿಲ್ಲದೆ ಪದಗಳಾಗಿ ಉಳಿದಿವೆ ಎಂದು ಆರೋಪಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಮಹಿಳಾ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರ ಹಮ್ಮಿಕೊಂಡಿರುವ ಹಲವು ಯೋಜನೆಗಳನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಮೃತಿ ಹೇಳಿದ್ದಾರೆ. ಬಿಜೆಪಿ ಸರ್ಕಾರವು ನಾರಿ ಶಕ್ತಿಗಾಗಿ ಮಹತ್ವದ ಕೆಲಸ ಮಾಡಿದೆ. ನಿರ್ಭಯಾ ನಿಧಿಯ ಮೂಲಕ ರಾಷ್ಟ್ರದಾದ್ಯಂತ ಒಟ್ಟು 40 ಯೋಜನೆಗಳನ್ನು ಹೊರತರಲಾಗಿದೆ. FY 2023-24 ರಂತೆ, ಒಟ್ಟು 7212.85 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

ಅದರಲ್ಲಿ 75 ಪ್ರತಿಶತವನ್ನು ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದ ಉಪಕ್ರಮಗಳ ಮೇಲೆ ಬಳಸಿಕೊಳ್ಳಲಾಗಿದೆ. ಯುಪಿಎ ಆಡಳಿತದ ದುರುಪಯೋಗ ಮತ್ತು ದುರಾಡಳಿತಕ್ಕೆ ತದ್ವಿರುದ್ಧವಾಗಿ ಬಿಜೆಪಿ ಸರ್ಕಾರವು ಮಹಿಳೆಯರ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸುತ್ತಿದೆ.

ಮತ್ತಷ್ಟು ಓದಿ:ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

ಆಯುಷ್ಮಾನ್ ಭಾರತ್ ಮತ್ತು ಪಿಎಂ ಜೀವನ್ ಜ್ಯೋತಿ ಮತ್ತು ಸುರಕ್ಷಾ ಬಿಮಾ ಯೋಜನೆಯಂತಹ ವಿವಿಧ ವಿಮಾ ಯೋಜನೆಗಳಂತಹ ಪ್ರಮುಖ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ. ಕಾಂಗ್ರೆಸ್​ ನಾಯಕಿ ಸುಪ್ರಿಯಾ ಇನ್​ಸ್ಟಾಗ್ರಾಂನಲ್ಲಿ ನಟಿ ಕಂಗನಾ ರಣಾವತ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್​ ಹಂಚಿಕೊಂಡ ಬಳಿಕ ವಿವಾದ ಎದ್ದಿದೆ.

ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಗೆ ಬಿಜೆಪಿ ಕಂಗನಾರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಕಾಂಗ್ರೆಸ್​ ನಾಯಕರ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಕಂಗನಾ ಅವರ ಚಿತ್ರವನ್ನು ಅವಹೇಳನಕಾರಿ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ವಿವಾದದ ಬಳಿಕ ಪೋಸ್ಟ್​ ಅನ್ನು ಡಿಲೀಟ್ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್