AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smuggling Drugs: ಡ್ರೋನ್‌ ಬಳಸಿ ಪಾಕ್‌ನಿಂದ ಡ್ರಗ್ಸ್ ಕಳ್ಳಸಾಗಣೆ, ಮೂವರು ಭಾರತೀಯರ ಬಂಧನ

ಪಾಕಿಸ್ತಾನಕ್ಕೆ ಡ್ರೋನ್​ ಮೂಲಕ ಮಾದಕ ವ್ಯಸನಗಳನ್ನು (Smuggling Drugs) ಸಾಗಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಾರತೀಯ ಪ್ರಜೆಗಳನ್ನು ದೆಹಲಿ ಪೊಲೀಸ್‌ನ ಕೌಂಟರ್ ಇಂಟೆಲಿಜೆನ್ಸ್ ಯುನಿಟ್ ಇಂದು ಬಂಧಿಸಿದೆ.

Smuggling Drugs: ಡ್ರೋನ್‌ ಬಳಸಿ ಪಾಕ್‌ನಿಂದ ಡ್ರಗ್ಸ್ ಕಳ್ಳಸಾಗಣೆ, ಮೂವರು ಭಾರತೀಯರ ಬಂಧನ
ಮೂವರ ಬಂಧನ
ಅಕ್ಷಯ್​ ಪಲ್ಲಮಜಲು​​
|

Updated on:May 12, 2023 | 12:05 PM

Share

ದೆಹಲಿ: ಪಾಕಿಸ್ತಾನಕ್ಕೆ ಡ್ರೋನ್​ ಮೂಲಕ ಮಾದಕ ವ್ಯಸನಗಳನ್ನು (Smuggling Drugs) ಸಾಗಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಾರತೀಯ ಪ್ರಜೆಗಳನ್ನು ದೆಹಲಿ ಪೊಲೀಸ್‌ನ ಕೌಂಟರ್ ಇಂಟೆಲಿಜೆನ್ಸ್ ಯುನಿಟ್ ಇಂದು ಬಂಧಿಸಿದೆ. ಆರೋಪಿಗಳಾದ ಮಲ್ಕಿತ್ ಸಿಂಗ್, ಧರ್ಮೇಂದ್ರ ಸಿಂಗ್ ಮತ್ತು ಹರ್ಪಾಲ್ ಸಿಂಗ್ ಅವರು ಪಂಜಾಬ್ ನಿವಾಸಿಗಳಾಗಿದ್ದು, ದೆಹಲಿಯ ಸರಾಯ್ ಕಾಲೇ ಖಾನ್‌ನಿಂದ ಕೌಂಟರ್ ಇಂಟೆಲಿಜೆನ್ಸ್ ಯುನಿಟ್‌ನ ವಿಶೇಷ ಇಲಾಖೆಯಿಂದ ಬಂಧಿಸಲಾಗಿದೆ.

ಪಂಜಾಬ್‌ನಲ್ಲಿ ಪರಾರಿಯಾಗಿರುವ ಮೂವರು ಡ್ರಗ್ ಪೂರೈಕೆದಾರರು ಯುಎಸ್ ಮತ್ತು ಫಿಲಿಪೈನ್ಸ್‌ ದೇಶದಲ್ಲಿ ಇದ್ದರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Crime Roundup: ಬೆಂಗಳೂರಿನಲ್ಲಿ 6 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಆರೋಪಿಗಳು ಡ್ರಗ್ಸ್​​​​ನ್ನು ಪಾಕಿಸ್ತಾನಕ್ಕೆ ಹವಾಲಾ ಜಾಲದ ಮೂಲಕ ವರ್ಗಾವಣೆ ಮಾಡಲಾಗುತ್ತಿತ್ತು. ಇದರ ಜತೆಗೆ ಹಣಕ್ಕೆ ಬದಲಾಗಿ ಡ್ರೋನ್‌ಗಳು, ಪಂಜಾಬ್ ಮತ್ತು ಇತರ ರಾಜ್ಯಗಳಲ್ಲಿ ಪಾಕಿಸ್ತಾನದಿಂದ ಡ್ರಗ್ಸ್ ಸಾಗಣೆ ಮಾಡುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಆರೋಪಿಯಿಂದ ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳಲ್ಲಿ ಫಿಲಿಪೈನ್ಸ್ ಮತ್ತು ಯುಎಸ್‌ನ ಫೋನ್ ಸಂಖ್ಯೆಗಳು ಪತ್ತೆಯಾಗಿವೆ. ಇದರ ಹಿಂದೆ ದೊಡ್ಡ ಜಾಲವೇ ಇದೆ, ಅವರನ್ನು ಪತ್ತೆ ಮಾಡಲು ಈ ಫೋನ್​​​ ಸಹಾಯವಾಗಬಹುದು ಎಂದು ಹೇಳಲಾಗಿದೆ.

Published On - 12:02 pm, Fri, 12 May 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!