AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ರಸ್ತೆಗಳಲ್ಲಿ ಹಿಮ: ಜನರ ಸುರಕ್ಷತೆಗಾಗಿ ವಾಹನಗಳಿಗೆ ಆಂಟಿ-ಸ್ಕಿಡ್ ಚೈನ್‌ ಕಡ್ಡಾಯ

ಜಮ್ಮು- ಕಾಶ್ಮೀರದ ಪ್ರದೇಶದಲ್ಲಿ ಸಂಚರಿಸುವ ವಾಹನಗಳಿಗೆ ಮಹತ್ವದ ಆದೇಶವನ್ನು ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಡಳಿತ ತಿಳಿಸಿದೆ. ಕೇಂದ್ರಾಡಳಿತ ಪ್ರದೇಶದ ಜನರ ಸುರಕ್ಷತೆಗಾಗಿ, ಹಿಮದಿಂದ ಆವೃತವಾದ ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಗೆ ಆಂಟಿ-ಸ್ಕಿಡ್ ಚೈನ್‌ಗಳನ್ನು ಕಡ್ಡಾಯಗೊಳಿಸಿದೆ

ಜಮ್ಮು ರಸ್ತೆಗಳಲ್ಲಿ ಹಿಮ: ಜನರ ಸುರಕ್ಷತೆಗಾಗಿ ವಾಹನಗಳಿಗೆ ಆಂಟಿ-ಸ್ಕಿಡ್ ಚೈನ್‌ ಕಡ್ಡಾಯ
ಸಾಂದರ್ಭಿಕ ಚಿತ್ರ Image Credit source: HT
TV9 Web
| Edited By: |

Updated on:Jan 09, 2023 | 6:10 PM

Share

ಜಮ್ಮು- ಕಾಶ್ಮೀರ: ಜಮ್ಮು ಪ್ರದೇಶದಲ್ಲಿ ಸಂಚರಿಸುವ ವಾಹನಗಳಿಗೆ ಮಹತ್ವದ ಆದೇಶವನ್ನು ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಡಳಿತ ತಿಳಿಸಿದೆ. ಕೇಂದ್ರಾಡಳಿತ ಪ್ರದೇಶದ ಜನರ ಸುರಕ್ಷತೆಗಾಗಿ, ಹಿಮದಿಂದ ಆವೃತವಾದ ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಗೆ ಆಂಟಿ-ಸ್ಕಿಡ್ ಚೈನ್‌ಗಳನ್ನು ಕಡ್ಡಾಯಗೊಳಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಲಡಾಖ್ ಪ್ರಸ್ತುತ ತೀವ್ರವಾದ ಶೀತ ವಲಯದ ಹಿಡಿತದಲ್ಲಿದೆ ಮತ್ತು ಘನೀಕರಿಸುವ ತಾಪಮಾನವು ಹಿಮಾವೃತ ರಸ್ತೆ ಪರಿಸ್ಥಿತಿಗಳನ್ನು ಸೃಷ್ಟಿಸುತ್ತದೆ ಎಂದು ಹೇಳಲಾಗಿದೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಹಿಮದಿಂದ ಆವೃತವಾಗಿರುವ ರಸ್ತೆಗಳಲ್ಲಿ ಸಂಚರಿಸುವ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ವಾಹನಗಳು ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಡ್ಡಾಯವಾಗಿ ಟೈರ್‌ಗಳಿಂದ ಕಟ್ಟಲಾದ ಆಂಟಿ-ಸ್ಕಿಡ್ ಚೈನ್‌ಗಳನ್ನು ಬಳಸಬೇಕು ಎಂದು ಲಡಾಖ್‌ನ ಆಯುಕ್ತ-ಕಾರ್ಯದರ್ಶಿ ಸಾರಿಗೆ ಇಲಾಖೆ ಸೌಘತ್ ಬಿಸ್ವಾಸ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಇದನ್ನು ಉಲ್ಲಂಘಿಸುವವರಿಗೆ ಮೋಟಾರು ವಾಹನ ಕಾಯ್ದೆ 1988ರ ಅಡಿಯಲ್ಲಿ 1000 ರೂ.ಗಳ ದಂಡ ವಿಧಿಸಲಾಗುವುದು ಎಂದು ಅವರು ಹೇಳಿದರು.

ಇದನ್ನು ಓದಿ:ಪ್ರಧಾನಿ ಮೋದಿಯವರ ಜಮ್ಮು- ಕಾಶ್ಮೀರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ; ಭಾರತ ತಿರುಗೇಟು

ಲೇಹ್‌ನಲ್ಲಿ ಕನಿಷ್ಠ ತಾಪಮಾನ ಮೈನಸ್ 15.2 ಡಿಗ್ರಿ ಸೆಲ್ಸಿಯಸ್, ಕಾರ್ಗಿಲ್ ಮೈನಸ್ 16.9 ಡಿಗ್ರಿ ಸೆಲ್ಸಿಯಸ್ ಮತ್ತು ದ್ರಾಸ್‌ನಲ್ಲಿ ಮೈನಸ್ 23.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಪಿಟಿಐಗೆ ತಿಳಿಸಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Mon, 9 January 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ