AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ಅನಾರೋಗ್ಯದಿಂದ ಅಣ್ಣಾ ಹಜಾರೆ ಆಸ್ಪತ್ರೆಯ ಐಸಿಯುಗೆ ದಾಖಲು

ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮಹಾರಾಷ್ಟ್ರದ ಅವರ ಹುಟ್ಟೂರು ರಾಲೇಗನ್ ಸಿದ್ಧಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ಹದಗೆಟ್ಟ ಕಾರಣದಿಂದ ಮುಂಬೈನ ಬಾಂಬೆ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ತೀವ್ರ ವೈರಲ್ ಸೋಂಕು ಮತ್ತು ತೀವ್ರ ನಿರ್ಜಲೀಕರಣದಿಂದ ಬಳಲುತ್ತಿದ್ದ ಹಜಾರೆ ಅವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಮುಂಬೈಗೆ ಸ್ಥಳಾಂತರಿಸಲಾಗಿದೆ. ಅವರು ಪ್ರಸ್ತುತ ಬಾಂಬೆ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದು, ಐಸಿಯುನಲ್ಲಿ ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.

ತೀವ್ರ ಅನಾರೋಗ್ಯದಿಂದ ಅಣ್ಣಾ ಹಜಾರೆ ಆಸ್ಪತ್ರೆಯ ಐಸಿಯುಗೆ ದಾಖಲು
Anna HazareImage Credit source: TV9
ಸುಷ್ಮಾ ಚಕ್ರೆ
|

Updated on: Aug 31, 2026 | 11:13 PM

Share

ಮುಂಬೈ, ಆಗಸ್ಟ್ 31: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ತೀವ್ರ ವೈರಲ್ ಸೋಂಕು ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿದೆ. ಅಣ್ಣಾ ಹಜಾರೆ ಅವರಿಗೆ ತೀವ್ರ ಜ್ವರ ಮತ್ತು ದೇಹದಲ್ಲಿ ನೀರಿನ ಅಂಶ ಕಡಿಮೆಯಾದ ಹಿನ್ನೆಲೆಯಲ್ಲಿ (ನಿರ್ಜಲೀಕರಣ), ವೈದ್ಯರ ಸಲಹೆಯಂತೆ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಿರಿಯ ವೈದ್ಯರ ತಂಡವು ಅವರ ಆರೋಗ್ಯವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 86 ವರ್ಷ ದಾಟಿರುವ ಅಣ್ಣಾ ಹಜಾರೆ ಅವರ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆ ಅವರ ಬೆಂಬಲಿಗರು ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ‘ತಾಳ್ಮೆ ಪರೀಕ್ಷಿಸಬೇಡಿ’; ಸೋನಮ್ ವಾಂಗ್‌ಚುಕ್ ಜೊತೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅಣ್ಣಾ ಹಜಾರೆ ಒತ್ತಾಯ

ದಶಕಗಳ ಸಾಮಾಜಿಕ ಹೋರಾಟ ಹಾಗೂ ಭ್ರಷ್ಟಾಚಾರ ವಿರೋಧಿ ಚಳವಳಿಗಳ ಮೂಲಕ ಮಹಾರಾಷ್ಟ್ರದಲ್ಲಿ ಹೆಸರುವಾಸಿಯಾಗಿದ್ದ ಅಣ್ಣಾ ಹಜಾರೆ, 2011ರ ‘ಇಂಡಿಯಾ ಅಗೇನಸ್ಟ್ ಕರಪ್ಷನ್’ (India Against Corruption) ಚಳವಳಿಯ ಮೂಲಕ ದೇಶಾದ್ಯಂತ ಅಪಾರ ಪ್ರಸಿದ್ಧಿ ಪಡೆದಿದ್ದರು. ಇತ್ತೀಚೆಗೆ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಆರೋಪವನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಅಣ್ಣಾ ಹಜಾರೆ ಬೆಂಬಲ ಸೂಚಿಸಿದ್ದರು. ಜುಲೈ 20ರಂದು ಸಂಸತ್ ಭವನದತ್ತ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಬಲಪ್ರಯೋಗ ಮಾಡಿದ್ದನ್ನು ಅವರು ಖಂಡಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರದ ವೈನ್ ಮಾರಾಟ ನೀತಿ ವಿರುದ್ಧ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ರದ್ದು

ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಅವರು, ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಸರ್ಕಾರ ಮಾತುಕತೆ ನಡೆಸಿ ಅವರ ಕುಂದುಕೊರತೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದರು. ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಪರೀಕ್ಷಾ ಅಕ್ರಮಗಳನ್ನು ಕೇವಲ ಕಾನೂನು-ಸುವ್ಯವಸ್ಥೆಯ ಕೋನದಿಂದ ನೋಡದೆ, ಸಾಮಾಜಿಕ ಹೊಣೆಗಾರಿಕೆಯಿಂದ ಬಗೆಹರಿಸಬೇಕೆಂದು ಮನವಿ ಮಾಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!