AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಸರ್ಕಾರದ ವೈನ್ ಮಾರಾಟ ನೀತಿ ವಿರುದ್ಧ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ರದ್ದು

ಚಿವ ಸಂಪುಟದ ನಿರ್ಧಾರವನ್ನು ನಾಗರಿಕರ ಸಲಹೆ ಮತ್ತು ಆಕ್ಷೇಪಣೆಗಳಿಗೆ ಮುಂದಿಡಲು ಸರ್ಕಾರ ನಿರ್ಧರಿಸಿದೆ ಮತ್ತು ಅವರ ಅನುಮೋದನೆಯ ನಂತರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದ ಅಣ್ಣಾ ಹಜಾರೆ.

ಮಹಾರಾಷ್ಟ್ರ ಸರ್ಕಾರದ ವೈನ್ ಮಾರಾಟ ನೀತಿ ವಿರುದ್ಧ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ರದ್ದು
ಅಣ್ಣಾ ಹಜಾರೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Feb 13, 2022 | 6:22 PM

Share

ಮುಂಬೈ: ವಾಕ್-ಇನ್ ಸ್ಟೋರ್‌ಗಳು ಮತ್ತು ಸೂಪರ್‌ಮಾರ್ಕೆಟ್‌ಗಳಲ್ಲಿ ವೈನ್ ಮಾರಾಟಕ್ಕೆ (wine sale policy) ಅನುಮತಿ ನೀಡುವ ಮಹಾರಾಷ್ಟ್ರ(Maharashtra) ಸರ್ಕಾರದ ನೀತಿಯನ್ನು ವಿರೋಧಿಸಿ ಫೆಬ್ರವರಿ 14 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕಳೆದ ವಾರ ಘೋಷಿಸಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (Anna Hazare) ಅವರು ಭಾನುವಾರ ಮುಷ್ಕರವನ್ನು ರದ್ದು ಮಾಡಿರುವುದಾಗಿ ಘೋಷಿಸಿದರು. ನಿರ್ಧಾರವನ್ನು ಕಾರ್ಯಗತಗೊಳಿಸುವ ಮೊದಲು ನಾಗರಿಕರ ಅಭಿಪ್ರಾಯಗಳನ್ನು ಪರಿಗಣಿಸುವುದಾಗಿ ರಾಜ್ಯ ಸರ್ಕಾರ ಅವರಿಗೆ ಭರವಸೆ ನೀಡಿದೆ. ಸಚಿವ ಸಂಪುಟದ ನಿರ್ಧಾರವನ್ನು ನಾಗರಿಕರ ಸಲಹೆ ಮತ್ತು ಆಕ್ಷೇಪಣೆಗಳಿಗೆ ಮುಂದಿಡಲು ಸರ್ಕಾರ ನಿರ್ಧರಿಸಿದೆ ಮತ್ತು ಅವರ ಅನುಮೋದನೆಯ ನಂತರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಗ್ರಾಮಸ್ಥರಿಗೆ ತಿಳಿಸಿದ್ದೇನೆ. ಹೀಗಾಗಿ, ನಾಳಿನ ಉಪವಾಸ ಸತ್ಯಾಗ್ರಹವನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದೇನೆ ಎಂದು ಹಜಾರೆ ಅವರು ರಾಜ್ಯದ ಅಹಮದ್‌ನಗರ ಜಿಲ್ಲೆಯ ರಾಳೇಗಾಂವ್   ಸಿದ್ಧಿ ಗ್ರಾಮದಲ್ಲಿರುವ ಗ್ರಾಮ ಸಭೆಯ ನಂತರ ಹೇಳಿದರು.  ಸಂವಾದದ ಸಂದರ್ಭದಲ್ಲಿ, ಹಜಾರೆ ಅವರು ‘ವೈನ್ ನಮ್ಮ ರಾಜ್ಯದ ಸಂಸ್ಕೃತಿಯಲ್ಲ’ ಎಂದು ಟೀಕಿಸಿದರು. ಅದೇ  ವೇಳೆ ಮದ್ಯ ಮಾರಾಟವು ‘ನಮ್ಮ ಸಂಸ್ಕೃತಿಯನ್ನು ನಾಶಪಡಿಸುತ್ತದೆ’ ಎಂದು ಹೇಳಿದರು. ವೈನ್ ಮಾರಾಟ ಮಾಡಲು ಹಲವಾರು ಬಿಯರ್ ಬಾರ್‌ಗಳು, ಪರ್ಮಿಟ್ ರೂಮ್‌ಗಳು ಮತ್ತು ಅಂಗಡಿಗಳಿವೆ, ಹಾಗಾದರೆ ಆಡಳಿತ ವ್ಯವಸ್ಥೆಯು ಅದನ್ನು ಸೂಪರ್‌ಮಾರ್ಕೆಟ್‌ಗಳು ಮತ್ತು ಕಿರಾಣಿ ಅಂಗಡಿಗಳಲ್ಲಿ ಏಕೆ ಮಾರಾಟ ಮಾಡಬೇಕು? ಇದು ಚಟವನ್ನು ಹರಡಲು ಬಯಸುತ್ತದೆಯೇ? ಎಂದು ಅಣ್ಣಾ ಕೇಳಿದ್ದಾರೆ.

ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಕನಿಷ್ಠ ಮೂರು ತಿಂಗಳ ಕಾಲಾವಕಾಶ ನೀಡಬೇಕು ಎಂದು ಅವರು ಸಲಹೆ ನೀಡಿದರು.

ಇದಕ್ಕೂ ಮೊದಲು 2011 ರಲ್ಲಿ, ಕೇಂದ್ರದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ವಿರುದ್ಧ ಭ್ರಷ್ಟಾಚಾರದ ವಿರುದ್ಧ ಭಾರತ (ಐಎಸಿ) ಚಳವಳಿಯ ನೇತೃತ್ವ ವಹಿಸಿದ್ದ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದು, ನೀತಿಯನ್ನು ತಕ್ಷಣ ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದರು.

ಈ ನೀತಿಯ ಅಡಿಯಲ್ಲಿ, ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಶಿವಸೇನೆ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್ 1,000 ಚದರ ಅಡಿ ಮತ್ತು ಅದಕ್ಕಿಂತ ಹೆಚ್ಚಿನ ಅಳತೆಯ ಸೂಪರ್‌ಮಾರ್ಕೆಟ್‌ಗಳು ಮತ್ತು ಅಂಗಡಿಗಳು ಪರವಾನಗಿ ಶುಲ್ಕವನ್ನು ಪಾವತಿಸುವ ಮೂಲಕ ವೈನ್ ಅನ್ನು ಮಾರಾಟ ಮಾಡಬಹುದು ಆದಾಗ್ಯೂ, ಮದ್ಯ ಮಾರಾಟಕ್ಕೆ ಇರುವ ನಿಯಮಾವಳಿಗಳನ್ನು ಅನುಸರಿಸಬೇಕಾಗುತ್ತದೆ ಎಂದು ಹೇಳಿತ್ತು.

ಇದನ್ನೂ ಓದಿ: ಕೊವಿಡ್ -19 ಜಿನ್​​ನ್ನು ಮೋದಿ ಸರ್ಕಾರ ಬಾಟಲಿಯೊಳಗೆ ಹಾಕಿದೆ: ಯೋಗಿ ಆದಿತ್ಯನಾಥ

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ