Medha Patkar: 24 ವರ್ಷದ ಹಿಂದಿನ ಮಾನನಷ್ಟ ಪ್ರಕರಣ; ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅಪರಾಧಿ

ನರ್ಮದಾ ಬಚಾವೋ ಆಂದೋಲನದ ಸಂಸ್ಥಾಪಕಿ ಮೇಧಾ ಪಾಟ್ಕರ್ ಅವರ ವಿರುದ್ಧ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಕೇಸಿನಲ್ಲಿ ಮೇಧಾ ಪಾಟ್ಕರ್ ಅಪರಾಧಿ ಎಂದು ಸಾಬೀತಾಗಿದ್ದು, ಪಾಟ್ಕರ್ ದಂಡ ಅಥವಾ 2 ವರ್ಷಗಳ ಜೈಲು ಶಿಕ್ಷೆ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ.

Medha Patkar: 24 ವರ್ಷದ ಹಿಂದಿನ ಮಾನನಷ್ಟ ಪ್ರಕರಣ; ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅಪರಾಧಿ
ಮೇಧಾ ಪಾಟ್ಕರ್
Follow us
ಸುಷ್ಮಾ ಚಕ್ರೆ
|

Updated on: May 24, 2024 | 9:18 PM

ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮೇಧಾ ಪಾಟ್ಕರ್ (Medha Patkar) ದೋಷಿ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಘೋಷಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ವಿರುದ್ಧ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ (VK Saxena) ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ತೀರ್ಪು ಇಂದು ಹೊರಬಿದ್ದಿದ್ದು, ದೆಹಲಿ ನ್ಯಾಯಾಲಯ ನರ್ಮದಾ ಬಚಾವೋ ಆಂದೋಲನದ ಸಂಸ್ಥಾಪಕಿ (Narmada Bachao Andolan) ಮೇಧಾ ಪಾಟ್ಕರ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಅವರು ಮೇಧಾ ಪಾಟ್ಕರ್ ಅವರನ್ನು ಕ್ರಿಮಿನಲ್ ಮಾನನಷ್ಟ ಅಪರಾಧಿ ಎಂದು ಘೋಷಿಸಿದರು. ತನ್ನ ಮತ್ತು ನರ್ಮದಾ ಬಚಾವೋ ಆಂದೋಲನದ ವಿರುದ್ಧ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮೇಧಾ ಪಾಟ್ಕರ್ ಮತ್ತು ವಿಕೆ ಸಕ್ಸೇನಾ 2000ರಿಂದ ಕಾನೂನು ಹೋರಾಟದಲ್ಲಿ ತೊಡಗಿದ್ದರು. ವಿಕೆ ಸಕ್ಸೇನಾ ಆಗ ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ಇದನ್ನೂ ಓದಿ: Porsche Crash Case: ಪುಣೆ ಪೋರ್ಷೆ ಅಪಘಾತ ಪ್ರಕರಣ; ಪ್ರೋಟೋಕಾಲ್ ಉಲ್ಲಂಘಿಸಿದ ಇಬ್ಬರು ಪೊಲೀಸರ ಅಮಾನತು

ಟಿವಿ ಚಾನೆಲ್‌ನಲ್ಲಿ ತನ್ನ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಮಾನಹಾನಿಕರ ಹೇಳಿಕೆ ನೀಡಿದ್ದಕ್ಕಾಗಿ ಮೇಧಾ ಪಾಟ್ಕರ್ ವಿರುದ್ಧ ವಿಕೆ ಸಕ್ಸೇನಾ ಎರಡು ಪ್ರಕರಣಗಳನ್ನು ದಾಖಲಿಸಿದ್ದರು. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಕ್ಸೇನಾ ವಿರುದ್ಧದ ಮೇಧಾ ಪಾಟ್ಕರ್ ಅವರ ಹೇಳಿಕೆಗಳು ಮಾನಹಾನಿಕರ ಮಾತ್ರವಲ್ಲದೆ ನಕಾರಾತ್ಮಕ ಗ್ರಹಿಕೆಗಳನ್ನು ಪ್ರಚೋದಿಸುವಂತಿತ್ತು ಎಂದು ಹೇಳಿದೆ.

“ಆರೋಪಿ ಮೇಧಾ ಪಾಟ್ಕರ್ ಅವರು ದೂರುದಾರರ ಪ್ರತಿಷ್ಠೆಗೆ ಹಾನಿಯುಂಟುಮಾಡುವ ಉದ್ದೇಶ ಹೊಂದಿದ್ದರು ಎಂಬುದು ಸಾಬೀತಾಗಿದೆ” ಎಂದು ನ್ಯಾಯಾಲಯ ಹೇಳಿದೆ. “ವಿಕೆ ಸಕ್ಸೇನಾ ಗುಜರಾತ್‌ನ ಜನರನ್ನು ಮತ್ತು ಅವರ ಸಂಪನ್ಮೂಲಗಳನ್ನು ವಿದೇಶಿ ಹಿತಾಸಕ್ತಿಗಳಿಗೆ ಅಡವಿಟ್ಟಿದ್ದಾರೆ” ಎಂಬ ಮೇಧಾ ಪಾಟ್ಕರ್ ಅವರ ಆರೋಪವು ಅವರ ಸಾರ್ವಜನಿಕ ಸೇವೆಯ ಮೇಲಿನ ನೇರ ದಾಳಿಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: Char Dham Yatra: ಚಾರ್​ ಧಾಮ ಯಾತ್ರೆಯಲ್ಲಿ 15 ದಿನದಲ್ಲಿ 50ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವು

ಆರೋಪಿಯಾದ ಮೇಧಾ ಪಾಟ್ಕರ್ ಈ ಹೇಳಿಕೆಗೆ ಯಾವುದೇ ಪುರಾವೆಗಳನ್ನು ಒದಗಿಸಲು ವಿಫಲವಾಗಿದ್ದಾರೆ. ಅಥವಾ ಈ ಆರೋಪಗಳ ಮೂಲಕ ಹಾನಿ ಉಂಟುಮಾಡುವ ಉದ್ದೇಶ ಹೊಂದಿರಲಿಲ್ಲ ಎಂದು ಸಾಬೀತುಪಡಿಸಲು ವಿಫಲವಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ, ಮೇಧಾ ಪಾಟ್ಕರ್ ಅವರು ಐಪಿಸಿಯ ಸೆಕ್ಷನ್ 500ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಮಾಡಿದ್ದಾರೆ. ಈ ಮೂಲಕ ಆಕೆಗೆ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಈ ಹಿನ್ನೆಲೆಯಲ್ಲಿ ಮೇಧಾ ಪಾಟ್ಕರ್ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ಶಿಕ್ಷೆಯಾಗಿ ನೀಡಬಹುದು.

2017ರಲ್ಲಿ ಉದ್ಘಾಟನೆಗೊಂಡ ಗುಜರಾತ್‌ನಲ್ಲಿ ಸರ್ದಾರ್ ಸರೋವರ್ ಅಣೆಕಟ್ಟು ನಿರ್ಮಾಣವು 40,000 ಕುಟುಂಬಗಳ ಮೇಲೆ ಪರಿಣಾಮ ಬೀರಬಹುದು ಎಂದು ನರ್ಮದಾ ಬಚಾವೋ ಆಂದೋಲನ್ ಹೇಳಿಕೊಂಡಿತ್ತು. ಕುಟುಂಬಗಳು ತಮ್ಮ ಮನೆಗಳನ್ನು ತೊರೆಯಬೇಕಾಗಬಹುದು, ಅದು ಮುಳುಗಬಹುದು ಎಂದು ಅದು ಬೃಹತ್ ಪ್ರತಿಭಟನೆಗಳನ್ನು ಆಯೋಜಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು