ಸಾಮಾಜಿಕ ಜಾಲತಾಣಗಳು ಮಾನಹಾನಿ ಮಾಡುವ ಅಥವಾ ನಕಲಿ ಖಾತೆಗಳನ್ನು ದೂರು ನೀಡಿದ 24 ತಾಸಿನೊಳಗೆ ತೆಗೆಯಬೇಕು: ಭಾರತ ಸರ್ಕಾರ

New IT Rules: ಇದು ನೂತನ ಐಟಿ ನಿಯಮಗಳ ಭಾಗವಾಗಿದ್ದು, ಸಾಮಾಜಿಕ ಜಾಲತಾಣಗಳು ಕೂಡಲೇ ಇದನ್ನು ಅನ್ವಯಿಸಿಕೊಳ್ಳಬೇಕು. ದೂರು ಬಂದ ನಂತರ ವಿಳಂಬ ನೀತಿ ಅನುಸರಿಸದೆ ತಕ್ಷಣ ಕ್ರಮ ಕೈಗೊಳ್ಳಲು ಬದ್ಧರಾಗಿರಬೇಕು ಎಂದು ಸೂಚಿಸಲಾಗಿದೆ.

ಸಾಮಾಜಿಕ ಜಾಲತಾಣಗಳು ಮಾನಹಾನಿ ಮಾಡುವ ಅಥವಾ ನಕಲಿ ಖಾತೆಗಳನ್ನು ದೂರು ನೀಡಿದ 24 ತಾಸಿನೊಳಗೆ ತೆಗೆಯಬೇಕು: ಭಾರತ ಸರ್ಕಾರ
ಸಾಂಕೇತಿಕ ಚಿತ್ರ
Follow us
TV9 Web
| Updated By: Skanda

Updated on: Jun 24, 2021 | 3:08 PM

ದೆಹಲಿ: ಸಾಮಾಜಿಕ ಜಾಲತಾಣಗಳ ದುರ್ಬಳಕೆ ಸಂಬಂಧಿಸಿದಂತೆ ಬಹುದೊಡ್ಡ ಕೂಗು ಇತ್ತೀಚಿನ ದಿನಗಳಲ್ಲಿ ಕೇಳಿಬರುತ್ತಿದೆ. ದ್ವೇಷಪೂರಿತ ವಿಚಾರ, ಮಾನಹರಣ, ವ್ಯಕ್ತಿತ್ವಕ್ಕೆ ಧಕ್ಕೆ ಉಂಟುಮಾಡಲು ವೇದಿಕೆ ಕಲ್ಪಿಸುತ್ತಿರುವ ಸಾಮಾಜಿಕ ಜಾಲತಾಣಗಳಿಗೆ ಮೂಗುದಾರ ಹಾಕಬೇಕೆಂದು ಬಹುದೊಡ್ಡ ಮಟ್ಟದಲ್ಲಿ ಒತ್ತಾಯವೂ ಇದೆ. ಇಂತಹ ಸಂದರ್ಭದಲ್ಲಿ ಭಾರತ ಸರ್ಕಾರ ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ತರ ಹೆಜ್ಜೆ ಇರಿಸಿದ್ದು, ಮಾನಹಾನಿ ಮಾಡುವ ಸಾಮಾಜಿಕ ಜಾಲತಾಣಗಳಲ್ಲಿನ ಖಾತೆಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಟ್ವಿಟರ್, ಫೇಸ್​ಬುಕ್, ಇನ್​ಸ್ಟಾಗ್ರಾಮ್​, ಯೂಟ್ಯೂಬ್ ಸಂಸ್ಥೆಗಳಿಗೆ ಸೂಚನೆ ನೀಡಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟರ್, ಫೇಸ್​ಬುಕ್, ಇನ್​ಸ್ಟಾಗ್ರಾಮ್​, ಯೂಟ್ಯೂಬ್ ಸಂಸ್ಥೆಗಳಿಗೆ ಸೂಚನೆ ನೀಡಿರುವ ಭಾರತ ಸರ್ಕಾರ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಅಥವಾ ಮಾನಹಾನಿ ಉಂಟುಮಾಡುವ ಖಾತೆ ವಿರುದ್ಧ ದೂರು ಸಲ್ಲಿಕೆಯಾದ ಅಥವಾ ಗಮನಕ್ಕೆ ಬಂದ 24 ತಾಸಿನೊಳಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಹೇಳಿದೆ.

ಪ್ರಸಿದ್ಧ ವ್ಯಕ್ತಿಗಳು, ಖ್ಯಾತನಾಮರು ಅಥವಾ ಸಾರ್ವಜನಿಕರ ಫೋಟೋ ಬಳಸಿಕೊಂಡು ನಕಲಿ ಖಾತೆ ಸೃಷ್ಟಿಸಿ ಅದನ್ನು ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಈ ತೆರನಾದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಇದು ನೂತನ ಐಟಿ ನಿಯಮಗಳ ಭಾಗವಾಗಿದ್ದು, ಸಾಮಾಜಿಕ ಜಾಲತಾಣಗಳು ಕೂಡಲೇ ಇದನ್ನು ಅನ್ವಯಿಸಿಕೊಳ್ಳಬೇಕು. ದೂರು ಬಂದ ನಂತರ ವಿಳಂಬ ನೀತಿ ಅನುಸರಿಸದೆ ತಕ್ಷಣ ಕ್ರಮ ಕೈಗೊಳ್ಳಲು ಬದ್ಧರಾಗಿರಬೇಕು ಎಂದು ಇದೇ ಸಂದರ್ಭದಲ್ಲಿ ಸೂಚಿಸಲಾಗಿದೆ.

ಉದಾಹರಣೆಗೆ, ಯಾವುದೇ ಪ್ರಸಿದ್ಧ ಚಿತ್ರನಟ, ಕ್ರಿಕೆಟಿಗ, ರಾಜಕಾರಣ ಅಥವಾ ಯಾವುದೇ ವ್ಯಕ್ತಿ ತನ್ನ ಫೋಟೋ ಬಳಸಿ ಇನ್ನೊಂದು ಖಾತೆ ತೆರೆಯಲು ಆಕ್ಷೇಪಿಸಿದರೆ ಅದನ್ನು ಪರಿಗಣಿಸಬೇಕು. ಹಿಂಬಾಲಕರನ್ನು ಹೆಚ್ಚಿಸಿಕೊಳ್ಳಲಿಕ್ಕಾಗಿ, ಪ್ರಸಿದ್ಧರಾಗುವುದಕ್ಕಾಗಿ ಅಥವಾ ದುರುದ್ದೇಶಪೂರಿತವಾಗಿ ಅದನ್ನು ಬಳಸಿಕೊಳ್ಳುತ್ತಿದ್ದು ಆ ಬಗ್ಗೆ ಸಂಬಂಧಪಟ್ಟವರು ಧ್ವನಿ ಎತ್ತುವ ಅಧಿಕಾರ ಹೊಂದಿರುತ್ತಾರೆ. ಅಂತಹ ವೇಳೆಯಲ್ಲಿ ನಕಲಿ ಖಾತೆಗೆ ವೇದಿಕೆಯಾಗಿರುವ ಸಾಮಾಜಿಕ ಜಾಲತಾಣಗಳು ಅದನ್ನು ಕೂಡಲೇ ಅಳಿಸಬೇಕು. ಬಹುಮುಖ್ಯವಾಗಿ ವಿಚಾರ ಗಮನಕ್ಕೆ ಬಂದ 24 ತಾಸಿನಲ್ಲಿ ಈ ಪ್ರಕ್ರಿಯೆ ಆಗಬೇಕು ಎನ್ನುವುದು ನೂತನ ಐಟಿ ನಿಯಮಾವಳಿಗಳ ಪ್ರಕಾರ ಜಾರಿಯಾಗಿದೆ ಎಂದು ಭಾರತ ಸರ್ಕಾರ ತಿಳಿಸಿದೆ.

ಇತ್ತೀಚೆಗೆ ಖ್ಯಾತನಾಮರು ಅಥವಾ ಸಂಸ್ಥೆಗಳ ಹೆಸರನ್ನು ಬಳಸಿಕೊಂಡು ನಕಲಿ ಖಾತೆ ತೆರೆಯುವುದು ಸಾಮಾನ್ಯವೆಂಬಂತಾಗಿದೆ. ತಮಾಷೆಯ ದೃಷ್ಟಿಯಿಂದ ಹಿಡಿದು ದುರುದ್ದೇಶದ ತನಕ ಅದಕ್ಕೆ ಬೇರೆ ಬೇರೆ ಕಾರಣಗಳೂ ಇರುತ್ತವೆ. ಹಣಕಾಸಿನ ಅವ್ಯವಹಾರ ನಡೆಸಲೂ ಅವುಗಳನ್ನು ಬಳಸಲಾಗುತ್ತದೆ. ಹೆಚ್ಚಿನ ಸಾಮಾಜಿಕ ಜಾಲತಾಣಗಳು ಪ್ರಸಿದ್ಧ ವ್ಯಕ್ತಿ, ಸಂಸ್ಥೆಗಳ ಖಾತೆಗಳನ್ನು ದೃಢೀಕರಿಸುತ್ತವಾದರೂ ಅನಧಿಕೃತ ಖಾತೆಗಳು ಹೆಚ್ಚಿನ ಪ್ರಮಾಣದಲ್ಲಿ ಅಸ್ತಿತ್ವದಲ್ಲಿವೆ ಎಂಬುದನ್ನು ಅಲ್ಲಗಳೆಯಲಾಗದು. ಕೆಲವು ನಕಲಿ ಖಾತೆಗಳಂತು ಅಸಲಿಯಂತೆಯೇ ಬಿಂಬಿತವಾಗುತ್ತಿದ್ದು, ಎಲ್ಲಾ ರೀತಿಯ ವಿಚಾರಗಳನ್ನೂ ಇದರಲ್ಲಿ ಹಂಚಿಕೊಂಡು ಜನರನ್ನು ನಂಬಿಸುವ ಉದ್ದೇಶ ಹೊಂದಿವೆ. ಇದು ಜಾಗತಿಕ ಮಟ್ಟದಲ್ಲಿ ದೊಡ್ಡ ಬೇರೆ ಬೇರೆ ವಿಧದಲ್ಲಿ ದೊಡ್ಡ ಪ್ರಮಾಣದ ನಷ್ಟವನ್ನೂ ಉಂಟುಮಾಡುತ್ತಿದೆ. ಆದ್ದರಿಂದ ಕ್ರಮ ಕೈಗೊಳ್ಳುವ ತುರ್ತು ಇದೆ ಎಂದು ಉಲ್ಲೇಖಿಸಲಾಗಿದೆ.

ಅಲ್ಲದೇ, ಬ್ಲ್ಯೂ ಟಿಕ್ ಸೌಲಭ್ಯದ ಬಗ್ಗೆ ಇನ್ನೂ ಅನೇಕರಿಗೆ ಜಾಗೃತಿಯಿಲ್ಲದ ಕಾರಣ, ಅದರ ಸದ್ಬಳಕೆ ಮಾಡಿಕೊಳ್ಳುವುದು ಸಾಧ್ಯವಾಗಿಲ್ಲ. ಆದ್ದರಿಂದ ಇದನ್ನೂ ಸರಳಿಕರಿಸಬೇಕು. ಒಟ್ಟಾರೆಯಾಗಿ ಹೊಸ ಐಟಿ ನಿಯಮಗಳು ಈಗಾಗಲೇ ಪ್ರಮುಖವೆಂದು ಪರಿಗಣಿಸಲ್ಪಟ್ಟಿರುವ ಎಲ್ಲಾ ಸಾಮಾಜಿಕ ಜಾಲತಾಣಗಳಿಗೂ, 50 ಲಕ್ಷಕ್ಕಿಂತ ಅಧಿಕ ಬಳಕೆದಾರರನ್ನು ಹೊಂದಿದವುಗಳಿಗೂ ಸದ್ಯ ಅನ್ವಯಿಸಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಕಲಾವಿದ, ವಿಮರ್ಶಕನಾಗಿ ನನಗಿರುವ ಹಕ್ಕುಗಳಿಗೆ ಐಟಿ ನಿಯಮಗಳು ಧಕ್ಕೆ ತರುತ್ತವೆ: ಮದ್ರಾಸ್ ಹೈಕೋರ್ಟ್​ಗೆ ಸಂಗೀತ ಕಲಾವಿದ ಟಿ.ಎಂ.ಕೃಷ್ಣ ಅರ್ಜಿ 

ಕೊವಿಡ್ ಬಗ್ಗೆ ತಪ್ಪು ಮಾಹಿತಿಗಳನ್ನು ಹಬ್ಬಿಸುವ ಪೋಸ್ಟ್​ಗಳನ್ನು ತೆಗೆದು ಹಾಕಲು ಸಾಮಾಜಿಕ ಮಾಧ್ಯಮಗಳಿಗೆ ಐಟಿ ಸಚಿವಾಲಯ ಸೂಚನೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್