ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ಮುಖಂಡನಿಗೆ ಕಪಾಳಮೋಕ್ಷ
Sharad Pawar: ಹಿರಿಯ ರಾಜಕಾರಣಿ ಶರದ್ ಪವಾರ್( Sharad Pawar)ವಿರುದ್ಧ ಸಾಮಾಜಿಕ ಜಾತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಕಾರಣ ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ್ ಅಂಬೇಕರ್ ಅವರಿಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಕಪಾಳಮೋಕ್ಷ ಮಾಡಿರುವ ವೀಡಿಯೋ ಎಲ್ಲೆಡೆ ಹರಿದಾಡಿದೆ.
ನವದೆಹಲಿ: ಹಿರಿಯ ರಾಜಕಾರಣಿ ಶರದ್ ಪವಾರ್( Sharad Pawar)ವಿರುದ್ಧ ಸಾಮಾಜಿಕ ಜಾತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಕಾರಣ ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ್ ಅಂಬೇಕರ್ ಅವರಿಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಕಪಾಳಮೋಕ್ಷ ಮಾಡಿರುವ ವೀಡಿಯೋ ಎಲ್ಲೆಡೆ ಹರಿದಾಡಿದೆ.
ಈ ವೀಡಿಯೋವನ್ನು ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಮಹಾರಾಷ್ಟ್ರದ ಭಾರತೀಯ ಜನತಾ ಪಕ್ಷದ ವಕ್ತಾರ ವಿನಾಯಕ್ ಅಂಬೇಕರ್ ಅವರ ಮೇಲೆ ಎನ್‍ಸಿಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ.
ಬಿಜೆಪಿಯವರ ವಿರುದ್ಧ ನಡೆಸಿರುವ ಈ ದಾಳಿಯನ್ನು ನಾನು ಖಂಡಿಸುತ್ತೇನೆ. ಈ ಎನ್‍ಸಿಪಿ ಗೂಂಡಾಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ನರಕ ಕಾಯುತ್ತಿದೆ ಮತ್ತು ನೀವು ಬ್ರಾಹ್ಮಣರನ್ನು ದ್ವೇಷಿಸುತ್ತೀರಿ ಎಂದು ಪೋಸ್ಟ್ ಮಾಡಲಾಗಿದೆ. ಶಿವಸೇನೆ ಮತ್ತು ಕಾಂಗ್ರೆಸ್‌ನೊಂದಿಗೆ ಮಹಾರಾಷ್ಟ್ರದಲ್ಲಿ ಅಧಿಕಾರವನ್ನು ಹಂಚಿಕೊಂಡಿರುವ ಪವಾರ್ ಅವರ ಹೆಸರನ್ನು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿತ್ತು.
ವೀಡಿಯೋದಲ್ಲಿ ಚೇರ್ ಮೇಲೆ ಅಂಬೇಕರ್ ಅವರೊಂದಿಗೆ ಕೆಲವರು ವಾಗ್ವಾದ ನಡೆಸುತ್ತಿರುವಾಗ, ವ್ಯಕ್ತಿಯೋರ್ವ ಕಪಾಳಮೋಕ್ಷ ಮಾಡಿರುವುದನ್ನು ಕಾಣಬಹುದಾಗಿದೆ. ಶನಿವಾರ ಶರದ್ ಪವಾರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಡಿ ಮರಾಠಿ ನಟಿ ಕೇತಕಿ ಚಿತಳೆ ಅವರನ್ನು ಪೊಲೀಸರು ಬಂಧಿಸಿದ್ದು, ಮೇ 18ರವರೆಗೂ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ನಟಿ ಚಿತಾಲೆಯನ್ನು ಥಾಣೆ ಪೊಲೀಸರು ಬಂಧಿಸಿದರೆ, ನಿಖಿಲ್ ಭಾಮ್ರೆಯನ್ನು ನಾಸಿಕ್‌ನಲ್ಲಿ ಬಂಧಿಸಲಾಯಿತು. ಮಹಾರಾಷ್ಟ್ರ ಪ್ರದೇಶ ಭಾರತೀಯ ಜನತಾ ಪಕ್ಷದ ವಕ್ತಾರ ವಿನಾಯಕ್ ಅಂಬೇಕರ್ ಮೇಲೆ ಎನ್‍ಸಿಪಿ ಗೂಂಡಾಗಳು ದಾಳಿ ಮಾಡಿದ್ದಾರೆ.
ಬಿಜೆಪಿ ಪರವಾಗಿ ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ಈ ಗೂಂಡಾಗಳನ್ನು ತಕ್ಷಣ ಬಂಧಿಸಬೇಕು ಎಂದು ಟ್ವೀಟ್ ಮೂಲಕ ಚಂದ್ರಕಾಂತ್ ಪಾಟೀಲ್ ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:01 pm, Sun, 15 May 22