ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ 71ರ ಹರೆಯದ ಪದ್ಮಶ್ರೀ ಪುರಸ್ಕೃತರನ್ನು ಐಸಿಯುನಲ್ಲಿ ನೃತ್ಯ ಮಾಡಿಸಿದ ಸಾಮಾಜಿಕ ಕಾರ್ಯಕರ್ತೆ

ನನಗೆ ನೃತ್ಯ ಮಾಡಲು ಇಷ್ಟವಿರಲಿಲ್ಲ. ಆದರೆ ಅದನ್ನು ಮಾಡಲು ಒತ್ತಾಯಿಸಲಾಯಿತು. ನಾನು ಪದೇ ಪದೇ ನಿರಾಕರಿಸಿದೆ, ಆದರೆ ಅವರು (ಮಮತಾ ಬೆಹೆರಾ) ಕೇಳಲಿಲ್ಲ.

ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ 71ರ ಹರೆಯದ ಪದ್ಮಶ್ರೀ ಪುರಸ್ಕೃತರನ್ನು ಐಸಿಯುನಲ್ಲಿ ನೃತ್ಯ ಮಾಡಿಸಿದ ಸಾಮಾಜಿಕ ಕಾರ್ಯಕರ್ತೆ
ಕಮಲಾ ಪೂಜಾರಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 02, 2022 | 1:39 PM

ಭುವನೇಶ್ವರ: ಕಿಡ್ನಿ ಕಾಯಿಲೆಗೆ ಚಿಕಿತ್ಸೆಗಾಗಿ ಒಡಿಶಾದ ಕಟಕ್‌ನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ 71 ವರ್ಷದ ಕಮಲಾ ಪೂಜಾರಿ ಅವರನ್ನು ಸಾಮಾಜಿಕ ಕಾರ್ಯಕರ್ತೆಯೊಬ್ಬರು ಆಸ್ಪತ್ರೆಯಲ್ಲಿ ನೃತ್ಯ ಮಾಡುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಕಮಲಾ ಪೂಜಾರಿ ಒಡಿಶಾದ ಪರಾಜ ಬುಡಕಟ್ಟು ಸಮುದಾಯದವರಾಗಿದ್ದಾರೆ.  ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕ ಅಥವಾ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೂಜಾರಿ ಅವರನ್ನು ನೃತ್ಯ ಮಾಡಿಸಿದ್ದಕ್ಕಾಗಿ ಸಾಮಾಜಿಕ ಕಾರ್ಯಕರ್ತೆ ವಿರುದ್ಧ ಕ್ರಮ ಕೈಗೊಳ್ಳುವಂತೆ  ಪರಾಜ ಸಮುದಾಯ ಒತ್ತಾಯಿಸಿದೆ. ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರಾದ ಪೂಜಾರಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಮಾಡಲಾಗಿದೆ. ಈ ವಿಡಿಯೊ ತುಣುಕಿನ ಸತ್ಯಾಸತ್ಯತೆಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಪಿಟಿಐಗೆ ಸಾಧ್ಯವಾಗಲಿಲ್ಲ.

ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೊದಲು ಸಾಮಾಜಿಕ ಕಾರ್ಯಕರ್ತೆ ಮಮತಾ ಬೆಹೆರಾ ಅವರು ಪೂಜಾರಿ ಅವರೊಂದಿಗೆ ನೃತ್ಯ ಮಾಡಿದ್ದಾರೆ.

ನನಗೆ ನೃತ್ಯ ಮಾಡಲು ಇಷ್ಟವಿರಲಿಲ್ಲ. ಆದರೆ ಅದನ್ನು ಮಾಡಲು ಒತ್ತಾಯಿಸಲಾಯಿತು. ನಾನು ಪದೇ ಪದೇ ನಿರಾಕರಿಸಿದೆ, ಆದರೆ ಅವರು (ಮಮತಾ ಬೆಹೆರಾ) ಕೇಳಲಿಲ್ಲ. ನಾನು ಅನಾರೋಗ್ಯದಿಂದ ಬಳಲುತ್ತಿದ್ದೆ ಮತ್ತು ದಣಿದಿದ್ದೇನೆ  ಎಂದು ಪೂಜಾರಿ ತಮ್ಮ ತವರು ಜಿಲ್ಲೆ ಕೊರಾಪುಟ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಮಮತಾ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಬುಡಕಟ್ಟು ಸಮುದಾಯದ ಮುಖಂಡ ಹರೀಶ್ ಮುದುಳಿ ಹೇಳಿದರು.

ಸಾವಯವ ಕೃಷಿಯನ್ನು ಉತ್ತೇಜಿಸಲು ಮತ್ತು 100 ಕ್ಕೂ ಹೆಚ್ಚು ದೇಶೀಯ ಬೀಜಗಳನ್ನು ಸಂರಕ್ಷಿಸಿದ್ದಕ್ಕಾಗಿ ಪೂಜಾರಿ ಅವರನ್ನು 2019 ರಲ್ಲಿ ಪದ್ಮಶ್ರೀ ನೀಡಿ ಗೌರವಿಸಲಾಗಿತ್ತು.